ಇಂದು ಎಐಸಿಸಿ ವೀಕ್ಷಕರು ಬೆಂಗಳೂರಿಗೆ

Team Udayavani, Dec 19, 2019, 3:07 AM IST

congress-logo

ಬೆಂಗಳೂರು: ಉಪ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ರಾಜೀ ನಾಮೆ ಸಲ್ಲಿಸಿರುವುದರಿಂದ ಉಂಟಾಗಿರುವ ಗೊಂದಲ ನಿವಾರಣೆ ಹಾಗೂ ಹೊಸ ನಾಯಕರ ಆಯ್ಕೆ ಕುರಿತಂತೆ ಹಿರಿಯ ನಾಯಕರೊಂದಿಗೆ ಚರ್ಚಿಸಲು ಗುರುವಾರ ಎಐಸಿಸಿ ವೀಕ್ಷಕರ ತಂಡ ರಾಜ್ಯಕ್ಕೆ ಆಗಮಿಸಲಿದೆ. ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಮಧುಸೂದನ ಮಿಸ್ತ್ರಿ ಹಾಗೂ ಕಾರ್ಯದರ್ಶಿ ಭಕ್ತ ಚರಣದಾಸ್‌ ಗುರುವಾರ ಬೆಂಗಳೂರಿಗೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷ, ಶಾಸಕಾಂಗ ಪಕ್ಷದ ನಾಯಕ, ಪ್ರತಿಪಕ್ಷದ ನಾಯಕ ಸೇರಿ ರಾಜ್ಯ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಉಪ ಚುನಾವಣೆ ಸೋಲಿನಿಂದ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌, ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿರುವುದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಗೊಂದಲ ಉಂಟಾಗಿದೆ. ಅಲ್ಲದೇ ಅವರನ್ನೇ ಹಾಲಿ ಹುದ್ದೆಗಳಲ್ಲಿ ಮುಂದುವರಿಸುವಂತೆ ಕಾಂಗ್ರೆಸ್‌ ಒಂದು ವರ್ಗ ಹೈಕಮಾಂಡ್‌ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸಿದೆ. ಇನ್ನೊಂದೆಡೆ ಇಬ್ಬರೂ ನಾಯಕರ ರಾಜೀನಾಮೆ ಅಂಗೀಕರಿಸಿ ನೂತನ ನಾಯಕರನ್ನು ಆಯ್ಕೆ ಮಾಡಬೇಕೆಂಬ ಆಗ್ರಹ ಹಿರಿಯ ನಾಯಕರಿಂದ ಕೇಳಿ ಬಂದಿದೆ.

ಇನ್ನೊಂದೆಡೆ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಮುಂದುವರೆಸಿ, ಶಾಸಕಾಂಗ ಪಕ್ಷದ ನಾಯ ಕನ ಸ್ಥಾನವನ್ನು ಯಾರಾದರೂ ಹಿರಿಯ ನಾಯಕರಿಗೆ ನೀಡ ಬೇಕೆಂಬ ಬೇಡಿಕೆಯೂ ಇದೆ. ಇದರ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಹಾಗೂ ಪ್ರತಿಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿರುವ ಅನೇಕ ಆಕಾಂಕ್ಷಿಗಳು, ತಮ್ಮದೇ ಆದ ರೀತಿಯಲ್ಲಿ ಹೈಕಮಾಂಡ್‌ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಚ್‌.ಕೆ.ಪಾಟೀಲ್‌, ಎಂ.ಬಿ. ಪಾಟೀಲ್‌, ಡಿ.ಕೆ.ಶಿವಕುಮಾರ್‌, ಈಶ್ವರ್‌ ಖಂಡ್ರೆ, ಡಾ.ಜಿ. ಪರಮೇಶ್ವರ್‌, ಕೆ.ಎಚ್‌.ಮುನಿಯಪ್ಪ ಹೆಸರು ಕೇಳಿ ಬರುತ್ತಿವೆ. ಇನ್ನೊಂದೆಡೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಕೂಗು ಕೇಳಿ ಬರುತ್ತಿದೆ.

ಪ್ರತಿಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕನ ಹುದ್ದೆಗಳನ್ನು ಪ್ರತ್ಯೇಕಗೊಳಿಸಲು ಹೈಕಮಾಂಡ್‌ ತೀರ್ಮಾನಿಸಿದರೆ, ಎರಡೂ ಹುದ್ದೆಗಳ ಮೇಲೆ ಎಚ್‌.ಕೆ.ಪಾಟೀಲ್‌, ಡಾ.ಜಿ.ಪರಮೇಶ್ವರ್‌ ಕಣ್ಣಿಟ್ಟು ಕುಳಿತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಗುರುವಾರ ನಗರಕ್ಕೆ ಆಗಮಿಸುವ ವೀಕ್ಷಕರು, ಹಿರಿಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿ, ಎಐಸಿಸಿ ಅಧ್ಯಕ್ಷರಿಗೆ ನೀಡಲಿದ್ದು ನಂತರ ಸೋನಿಯಾ ಗಾಂಧಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಮೂಲಗಳ ಪ್ರಕಾರ ಸಂಕ್ರಾಂತಿಗೆ ಕೆಪಿಸಿಸಿ ನೂತನ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಸಿದ್ದು ಆಗಮನ ಅನುಮಾನ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯ ಸಮಸ್ಯೆಯಿಂದ ವೈದ್ಯರ ಸಲಹೆ ಮೇರೆಗೆ ಅಜ್ಞಾತ ಸ್ಥಳದಲ್ಲಿ ವಿಶ್ರಾಂತಿ ಪಡೆಯಲು ತೆರಳಿರುವುದರಿಂದ ಗುರುವಾರ ನಡೆಯುವ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹ ಸಭೆಗೆ ಹಾಜರಾಗುವುದು ಅನುಮಾನ ಎಂದು ಹೇಳಲಾಗಿದೆ. ಆದರೆ, ರಾಜ್ಯಕ್ಕೆ ಆಗಮಿಸುವ ವೀಕ್ಷಕರೇ ಅವರು ವಿಶ್ರಾಂತಿ ಪಡೆಯುತ್ತಿರುವ ಸ್ಥಳಕ್ಕೆ ತೆರಳಿ ಆರೋಗ್ಯ ವಿಚಾರಿಸುವುದರೊಂದಿಗೆ ಅವರ ಅಭಿಪ್ರಾಯ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.