ಸೇನಾ ತರಬೇತಿಗೆ ವನಿತೆಯರ ಪ್ರಯಾಣ

Team Udayavani, Dec 19, 2019, 3:12 PM IST

19-December-17

ಭೈರೋಬಾ ಕಾಂಬಳೆ
ಬೆಳಗಾವಿ:
ಅನೇಕ ತಿಂಗಳುಗಳಿಂದ ತಯಾರಿ ನಡೆಸಿ ಕೊನೆಗೂ ಭಾರತೀಯ ಸೇನೆಗೆ ಆಯ್ಕೆಯಾಗುವ ಮೂಲಕ ದೇಶದ ಗಮನಸೆಳೆದಿರುವ ಬೆಳಗಾವಿ ಜಿಲ್ಲೆಯ ಈ ಏಳು ವೀರ ವನಿತೆಯರು ಬುಧವಾರ ಸೇನಾ ತರಬೇತಿಗೆ ಪ್ರಯಾಣ ಬೆಳೆಸಿದ್ದು, ಮಹಿಳಾ ಸೇನೆಗೆ ಸೇರಿದ ಶ್ರೇಯಸ್ಸಿಗೆ ಈ ಎಲ್ಲರೂ ಭಾಜನರಾಗಿದ್ದಾರೆ.

ಭಾರತೀಯ ಸೇನೆಯ ಮಿಲಿಟರಿ ಪೊಲೀಸ್‌ ಭರ್ತಿಗೆ ಅರ್ಜಿ ಸಲ್ಲಿಸಿದವರ ಪೈಕಿ ಇಡೀ ದೇಶದಲ್ಲಿ ಒಟ್ಟು 100 ಜನ ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಎಂಟು ಯುವತಿಯರು ಆಯ್ಕೆಯಾಗಿದ್ದು, ಬೆಳಗಾವಿಯವರೇ ಏಳು ಜನ ಎನ್ನುವುದು ಗಡಿ ಜಿಲ್ಲೆಗೆ ಮತ್ತಷ್ಟು ಹೆಮ್ಮೆಯ ವಿಷಯವಾಗಿದೆ. ಏಳೂ ಜನ ಬುಧವಾರ ಬೆಳಗಾವಿಯ ರೈಲು ನಿಲ್ದಾಣದಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಆರತಿ ತಳವಾರ, ಬೈಲಹೊಂಗಲ ತಾಲೂಕಿನ ಅಮಟೂರ ಗ್ರಾಮದ ಜ್ಯೋತಿ ಹಂಚಿನಮನಿ, ಹುಕ್ಕೇರಿ ತಾಲೂಕಿನ ಕೇಸ್ತಿ ಗ್ರಾಮದ ಸಂಗೀತಾ ಕೋಳಿ, ಖಾನಾಪುರ ತಾಲೂಕಿನ ಕಾಮಶಿಕೊಪ್ಪ ಗ್ರಾಮದ ಜ್ಯೋತಿ ಚೌಲಗಿ, ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದ ಭಾಗ್ಯಶ್ರೀ ಬಡಿಗೇರ, ಬೆಳಗಾವಿ ನಗರದ ಭಡಕಲ್‌ ಬೀದಿಯ ಸ್ಮಿತಾ ಪಾಟೀಲ ಹಾಗೂ ತಾಲೂಕಿನ ವಾಘವಡೆ ಗ್ರಾಮದ ರಾಘವೇಣಿ ಪಾಟೀಲ ಸೇನೆಯ ಆರು ತಿಂಗಳ ತರಬೇತಿಗಾಗಿ ಬೆಂಗಳೂರಿಗೆ ತೆರಳಿದರು.

ಪೋಷಕರ ಕಣ್ಣು ಒದ್ದೆ : ಸೇನೆಗೆ ಉತ್ಸುಕತೆಯಿಂದ ಸೇರಿದ ಈ ಏಳೂ ಜನರನ್ನು ಪೋಷಕರು, ಕುಟುಂಬಸ್ಥರು, ಸಂಬಂಧಿಕರು, ಸ್ನೇಹ ಬಳಗ ಬೀಳ್ಕೊಡಲು ಬಂದಿತ್ತು. ನನ್ನ ಮಗಳು ಸೇನೆ ಸೇರಿದ್ದಾಳೆ ಎಂಬ ಹೆಮ್ಮೆ ಇದ್ದರೂ ಪ್ರತಿಯೊಬ್ಬರ ಕಣ್ಣುಗಳು ಒದ್ದೆಯಾಗಿದ್ದವು. ದೇಶದ ಗಡಿ ಕಾಯಲು ಹೊರಟಿರುವ ತಮ್ಮ ಮನೆಯ ಹೆಣ್ಣುಮಗಳ ಬಗ್ಗೆ ಅಭಿಮಾನ ಪಡುತ್ತಿದ್ದ ಪೋಷಕರು, ಕಣ್ಣೀರು ಒರೆಸಿಕೊಳ್ಳುತ್ತ ತಂತಮ್ಮ ಮಕ್ಕಳನ್ನು ಸೇನೆ ಕಳುಹಿಸಿ ಕೊಡುತ್ತಿರುವ ದೃಶ್ಯ ಮನಕಲುಕುವಂತಿತ್ತು.

ಈ ವನಿತೆಯರನ್ನು ಬೀಳ್ಕೊಡಲು ಆಗಮಿಸಿದ ಜನರಿಂದ ರೈಲು ನಿಲ್ದಾಣ ತುಂಬಿ ತುಳುಕುತ್ತಿತ್ತು. ಆರಾಮವಾಗಿರು ಎಂದು ಪೋಷಕರು ಕಣ್ಣು ಒರೆಸಿಕೊಳ್ಳುತ್ತಲೇ ಹೇಳುತ್ತಿದ್ದ ಮಾತು ನೆರೆದವರ ಕಣ್ಣಲ್ಲೂ ನೀರು ತರಿಸಿತ್ತು. ಧೈರ್ಯ ಹಾಗೂ ಛಲದಿಂದ ಹೆಜ್ಜೆ ಹಾಕುತ್ತಿದ್ದ ಈ ಯುವತಿಯರ ಉತ್ಸಾಹ ಯಾವುದಕ್ಕೂ ಕಡಿಮೆ ಇರಲಿಲ್ಲ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.