ಬಜತ್ತೂರು: ನೆರೆ ಸಂತ್ರಸ್ತರಿಗೆ ವಿತರಣೆಯಾಗದ ಬಟ್ಟೆಬರೆ


Team Udayavani, Dec 20, 2019, 5:36 AM IST

1912UPG1B

ಉಪ್ಪಿನಂಗಡಿ: ನಾಲ್ಕು ತಿಂಗಳ ಹಿಂದೆ ಉಂಟಾದ ಪ್ರವಾಹದಲ್ಲಿ ಸಂತ್ರಸ್ತರಾದವರಿಗಾಗಿ ದಾನಿಗಳು ನೀಡಿದ್ದ ಬಟ್ಟೆಬರೆಗಳನ್ನು ಸರಿಯಾಗಿ ವಿತರಿಸದೆ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಉಳಿಸಿಕೊಂಡಿರುವ ಕೃತ್ಯವೊಂದು ಬೆಳಕಿಗೆ ಬಂದಿದೆ.

ಪುತ್ತೂರು ತಾಲೂಕು ಬಜತ್ತೂರು ಗ್ರಾ.ಪಂ. ಕಟ್ಟಡದ ಸಭಾಭವನದಲ್ಲಿ ಈ ವಸ್ತುಗಳನ್ನು ನಾಲ್ಕು ತಿಂಗಳಿಂದ ಇರಿಸಲಾಗಿದ್ದು, ಬಹುಪಾಲು ಈಗ ಇಲಿ, ಹೆಗ್ಗಣಗಳ ಪಾಲಾಗಿದೆ.

ಜುಲೈ ತಿಂಗಳ ಭಾರೀ ಮಳೆ, ನೆರೆಯಿಂದ ಬಜತ್ತೂರು, ಉಪ್ಪಿನಂಗಡಿ, 34-ನೆಕ್ಕಿಲಾಡಿ ಗ್ರಾಮಗಳಲ್ಲಿಯೂ ಹಲವಾರು ಮಂದಿ ಮನೆ ಕಳೆದುಕೊಂಡಿದ್ದರು. ಹಲವರಿಗೆ ನೆರವು ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿತ್ತು. ಬೆಂಗಳೂರು ಮೂಲದ ಸಂಸ್ಥೆಯೊಂದು ಒಂದು ಲಾರಿಯಷ್ಟು ಬಟ್ಟೆಬರೆಯನ್ನು ಸಂತ್ರಸ್ತರಿಗೆ ಹಂಚಲು ಬಜತ್ತೂರು ಗ್ರಾ.ಪಂ.ಗೆ ಮಾಡಿತ್ತು. ಅವುಗಳನ್ನು ಬಜತ್ತೂರು ಗ್ರಾಮದಲ್ಲಿ ವಿತರಿಸಿದ್ದರೂ ಬೇರೆಡೆ ವಿತರಣೆ ಮಾಡಲು ವ್ಯವಸ್ಥೆ ಮಾಡದ ಕಾರಣ ಉಳಿದುಕೊಂಡಿದೆ.

ಸ್ಥಳೀಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬೇಜವಾಬ್ದಾರಿಯ ಬಗ್ಗೆ ದೂರುಗಳು ಕೇಳಿ ಬಂದಿವೆ. ಬಜತ್ತೂರು ಗ್ರಾಮದಲ್ಲಿ ಕೇವಲ 2 ಮನೆ ಮಾತ್ರ ಕುಸಿದು ಬಿದ್ದಿದ್ದು, ಕೆಲವು ಮನೆಗಳಿಗೆ ನೀರು ನುಗ್ಗಿತ್ತು. ಬಟ್ಟೆ ಇಲ್ಲದೆ ಕೈಚಾಚುವಂತಹ ಫ‌ಲಾನುಭವಿಗಳು ಬಜತ್ತೂರಿನಲ್ಲಿ ಇರಲಿಲ್ಲ. ಹೀಗಿರುವಾಗ ಒಂದು ಲಾರಿ ಬಟ್ಟೆಬರೆ ಇಲ್ಲಿ ಇರಿಸಿಕೊಂಡದ್ದೇ ತಪ್ಪು. ಇಲ್ಲಿ ವಿತರಣೆ ಮಾಡಿ ಉಳಿದುದನ್ನು ಅಗತ್ಯವಿದ್ದೆಡೆಗೆ ಕಳುಹಿಸಬಹುದಿತ್ತು ಎಂದು ಸಾಮಾಜಿಕ ಕಾರ್ಯಕರ್ತ ವಿಲ್ಫೆಡ್‌ ಡಿ’ಸೋಜಾ ತಿಳಿಸಿದ್ದಾರೆ.

ನೆರೆ ಸಂತ್ರಸ್ತರಿಗೆ ವಿತರಿಸುವುದಕ್ಕಾಗಿ ಬೆಂಗಳೂರಿನ ಸಂಸ್ಥೆಯೊಂದರಿಂದ ಒಂದು ಲಾರಿ ಬಟ್ಟೆ ಬಂದಿತ್ತು. ಗ್ರಾಮದಲ್ಲಿ ಸುಮಾರು 30 ಮಂದಿಗೆ ವಿತರಿಸಿದ್ದೇವೆ. ಇಲ್ಲಿಗೆ ಸರಬರಾಜು ಮಾಡಿದ ಸಂಸ್ಥೆಯ ವ್ಯಕ್ತಿಯೊಂದಿಗೆ ಮಾತನಾಡಿ ಉಳಿದುದನ್ನು ಬೇರೆಡೆಗೆ ಕೊಂಡೊಯ್ಯಲು ತಿಳಿಸಿದ್ದೆ, ಆದರೆ ಅವರು ಕೊಂಡುಹೋಗದ ಕಾರಣ ಉಳಿದಿದೆ. ಈಗ ಇದನ್ನು ಅನಾಥಾಶ್ರಮಕ್ಕೆ ಕೊಡಲು ನಿರ್ಧರಿಸಿದ್ದೇವೆ.
-ಸಂತೋಷ್‌ ಕುಮಾರ್‌ ಪರಂದಾಜೆ, ಬಜತ್ತೂರು ಗ್ರಾ.ಪಂ. ಅಧ್ಯಕ್ಷ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.