ಪರೀಕ್ಷಾ ಪೇ ಚರ್ಚೆಗೆ ನೋಂದಾಯಿಸಿಕೊಳ್ಳಲು ಸೂಚನೆ
Team Udayavani, Dec 22, 2019, 3:00 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳೊಂದಿಗೆ 2020ರ ಜನವರಿಯಲ್ಲಿ ನಡೆಸಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಜ.16ರಂದು ದೆಹಲಿಯ ತಲ್ಕಾಟೋರಾ ಮೈದಾನದಲ್ಲಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚೆ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳು ಡಿ.23ರ ಒಳಗಾಗಿ ಡಿಡಿಡಿ.ಞyಜಟv.ಜಿn ವೆಬ್ಸೈಟ್ ಮೂಲಕ ನೋಂದಾಯಿಸಿಕೊಳ್ಳಲು ಸೂಚಿಸಿದೆ.