ಕಂದಾಯ ನಿರೀಕ್ಷಕರ ಮೇಲೆ ಕ್ರಮಕ್ಕೆ ಒತ್ತಾಯ

Team Udayavani, Dec 22, 2019, 12:36 PM IST

gadaga-tdy-3

ಲಕ್ಷ್ಮೇಶ್ವರ: ತಾಲೂಕಿನ ಸೂರಣಗಿ ಗ್ರಾಮದ ರೈತ ರಾಜೇಸಾಬ ದೊಡ್ಡಲಾಡಸಾಬ ಹಾಲಗಿ ಪೋತಿಯಾಗಿದ್ದಾರೆ ಎಂದು ಸುಳ್ಳು ದಾಖಲೆ ಸೃಷ್ಟಿಸಿ, ಇವರಿಗೆ ಸೇರಿದ್ದ ಜಮೀನನ್ನು ಕಾನೂನು ಬಾಹೀರವಾಗಿ ಕಂದಾಯ ನಿರೀಕ್ಷಕರು ಖಾತೆ ಬದಲಾವಣೆ ಮಾಡಿದ್ದಾರೆ.

ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ತಮ್ಮ ಕುಟುಂಬಕ್ಕೆ ಸೇರಿದ ಜಮೀನಿನನ್ನು ವಾಪಸ್‌ ಕೊಡಿಸಬೇಕೆಂದು ಆಗ್ರಹಿಸಿ ಶನಿವಾರ ಹಾಲಗಿ ಕುಟುಂಬಸ್ಥರು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ದೂರಿನಲ್ಲಿ, ಸೂರಣಗಿ ಗ್ರಾಮದ 3 ಎಕರೆ 36 ಗುಂಟೆ ಜಮೀನನ್ನು 15-11-2016ರಂದು ಪಾತಿಮಾ ರಾಜೇಸಾಬ ಹಾಲಗಿ ಎಂಬುವರ ಹೆಸರಿಗೆ ಖಾತೆ ಬದಲಾವಣೆ ಮಾಡಿದ್ದಾರೆ. ಮೂಲ ಆಸ್ತಿದಾರ ರಾಜೇಸಾಬ ದೊಡ್ಡಲಾಡಸಾಬ ಹಾಲಗಿ ಕುಟುಂಬದವರು ಹೊಟ್ಟೆ ಪಾಡಿಗಾಗಿ ಗುಳೆ ಹೋದ ಸಂದರ್ಭವನ್ನು ಬಳಸಿಕೊಂಡು ಖೊಟ್ಟಿ ದಾಖಲೆ ಸೃಷ್ಟಿಸಿ, ಖೊಟ್ಟಿ ಸಹಿಗಳನ್ನು ಮಾಡಿಸಿ ಬೇರೆಯವರ ಹೆಸರಿಗೆ ಖಾತೆ ಬದಲಾವಣೆ ಮಾಡಿದ್ದಾರೆ.

ರಾಜೇಸಾಬ ದೊಡ್ಡಲಾಡಸಾಬ ಹಾಲಗಿ ಎಂಬ ರೈತನು 1974ರಲ್ಲಿ ಪೋತಿಯಾಗಿದ್ದಾನೆ ಎಂದು ಗ್ರಾಮಲೆಕ್ಕಾಧಿಕಾರಿ ಅವರು 2016ರಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಜಮೀನಿನ ಖಾತೆ ಬದಲಾವಣೆ ಮಾಡಿದ್ದಾರೆ. ಆದರೆ 1981ರಲ್ಲಿ ರಾಜೇಸಾಬ ಹಾಲಗಿ ಅವರು ಸೂರಣಗಿ ಗ್ರಾಮದ ಈರಪ್ಪ ಪುಟ್ಟಪ್ಪ ನೀರಲಗಿ ಅವರಿಂದ ಸದರಿ ಜಮೀನನ್ನು ಖರೀದಿ ಮಾಡಿದ್ದಾರೆ. ಆದರೆ ಗ್ರಾಮಲೆಕ್ಕಾಧಿಕಾರಿ ವಿ.ವಿ.ಶಿರೂರ ಮತ್ತು ಕಂದಾಯ ನಿರೀಕ್ಷಕ ಎಸ್‌.ಎಸ್‌.ಪಾಟೀಲ ಸೇರಿಕೊಂಡು ಯಾವುದೇ ಆಸೆಯಿಂದ ಬೇರೆಯವರ ಹೆಸರಿನಲ್ಲಿ ಖಾತೆ ಮಾಡಿದ್ದಾರೆ. ಇವರ ಮೇಲೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಈಗಾಗಲೇ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಮನವಿಯಲ್ಲಿ ಬರೆಯಲಾಗಿದೆ.

ಈ ಕುರಿತು ತಹಶೀಲ್ದಾರ್‌ ಭ್ರಮರಾಂಬ ಗುಬ್ಬಿಶೆಟ್ಟಿ ಪ್ರತಿಕ್ರಿಯಿಸಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಕಂದಾಯ ನಿರೀಕ್ಷಕರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಅಲ್ಲದೇ ಜಿಲ್ಲಾಧಿಕಾರಿಗಳಿಗೂ ಈ ಬಗ್ಗೆ ಸಮಗ್ರ ವರದಿ ನೀಡಲಾಗಿದೆ ಎಂದರು. ರಾಜೇಸಾಬ ಹಾಲಗಿ, ಮೋದಿನಸಾಬ ಹಾಲಗಿ, ರಾಜಬೀ ಹಾಲಗಿ, ಖೈರುನಬಿ ಹಾಲಗಿ, ಕುಮಾರ ಬೆಟಗೇರಿ, ಮಂಜುನಾಥ ಮೂಲಿಮನಿ ಇದ್ದರು.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.