ಶಾಲಾ-ಕಾಲೇಜು ಬಂದ್ ನಿರ್ಧಾರ ಕೈಬಿಡಿ
Team Udayavani, Dec 23, 2019, 3:00 AM IST
ಬೆಂಗಳೂರು: ರಾಜ್ಯದ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮತ್ತು ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಜ.17ರಂದು ಶಾಲಾ, ಕಾಲೇಜು ಬಂದ್ ಮಾಡುವ ಕುರಿತು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿಯವರ ಹೇಳಿಕೆಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವರು ತಮ್ಮ ಫೇಸ್ಬುಕ್ ಖಾತೆಯ ಮೂಲಕ ಬಂದ್ ನಡೆಸುವುದು ಬೇಡ, ಅತಿ ಶೀಘ್ರದಲ್ಲಿ ಸಭೆ ಕರೆದು, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಚರ್ಚಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ.