ವಿಧಾನಸಭಾ ಚುನಾವಣೆ ಹಾವು-ಏಣಿ ಆಟ; ಬಹುದೊಡ್ಡ ಪಕ್ಷವಾಗಿಯೂ BJP ಕೈ ತಪ್ಪಿದ ಐದು ರಾಜ್ಯಗಳು

2018ರ ಡಿಸೆಂಬರ್ ನಿಂದ ಈವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪ್ರಮುಖ 5 ರಾಜ್ಯಗಳಲ್ಲಿ ಅಧಿಕಾರ ಕೈತಪ್ಪಿ ಹೋದಂತಾಗಿದೆ.

Team Udayavani, Dec 23, 2019, 7:21 PM IST

BJP

ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ, ಕಾಂಗ್ರೆಸ್ ಮೈತ್ರಿಕೂಟಕ್ಕೆ ಸ್ಪಷ್ಟ ಜನಾದೇಶ ದೊರಕುವ ಮೂಲಕ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಮತ್ತೊಂದು ರಾಜ್ಯ ಕೈಬಿಟ್ಟಂತಾಗಿದೆ. 2018ರ ಡಿಸೆಂಬರ್ ನಿಂದ ಈವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪ್ರಮುಖ 5 ರಾಜ್ಯಗಳಲ್ಲಿ ಅಧಿಕಾರ ಕೈತಪ್ಪಿ ಹೋದಂತಾಗಿದೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಹೇಮಂತ್ ಸೋರೆನ್ ನೇತೃತ್ವದ ಜೆಎಂಎಂ, ಕಾಂಗ್ರೆಸ್ ಹಾಗೂ ಆರ್ ಜೆಡಿ ಮೈತ್ರಿ 46 ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಹೊಂದಿದೆ. ಆಡಳಿತಾರೂಢ ಬಿಜೆಪಿ 29ಸ್ಥಾನ ಪಡೆಯುವ ಮೂಲಕ ಅಧಿಕಾರದ ಗದ್ದುಗೆಯಿಂದ ಕೆಳಗಿಳಿಯುವಂತಾಗಿದೆ. 81 ಸದಸ್ಯಬಲದ ಜಾರ್ಖಂಡ್ ನಲ್ಲಿ ಬಹುಮತ ಪಡೆದು ಸರ್ಕಾರ ರಚಿಸಲು 41 ಸ್ಥಾನಗಳ ಅಗತ್ಯವಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 37 ಸ್ಥಾನ ಪಡೆದು ಮೈತ್ರಿ ಪಕ್ಷವಾದ ಎಜೆಎಸ್ ಯುನ 5 ಸ್ಥಾನಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿತ್ತು.

ಈಗಾಗಲೇ ಮಹಾರಾಷ್ಟ್ರ, ಚತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶಗಳಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರು ಕೂಡಾ ಅಧಿಕಾರದ ಗದ್ದುಗೆ ಏರಲು ವಿಫಲವಾಗಿದ್ದು, ಇದೀಗ ಜಾರ್ಖಂಡ್ ಕೂಡಾ ಬಿಜೆಪಿ ಕೈತಪ್ಪಿದಂತಾಗಿದೆ.

2019ರಲ್ಲಿ ನಡೆದ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ(40 ಸ್ಥಾನ) ಹೊರಹೊಮ್ಮಿದ್ದು ಬಹುಮತ ಪಡೆಯುವಲ್ಲಿ ವಿಫಲವಾಗಿತ್ತು. ಆದರೆ ಜನನಾಯಕ್ ಜನತಾ ಪಕ್ಷ(10ಸ್ಥಾನ)ದ ದುಶ್ಯಂತ್ ಚೌಟಾಲ ಜತೆ ಮೈತ್ರಿ ಮಾಡಿಕೊಳ್ಳುವ ಮೂಲಕ ಸರ್ಕಾರ ರಚಿಸುವಲ್ಲಿ ಯಶಸ್ವಿಯಾಗಿತ್ತು. 90 ಸದಸ್ಯ ಬಲದ ಹರ್ಯಾಣದಲ್ಲಿ ಸರ್ಕಾರ ರಚನೆಗೆ 46 ಸ್ಥಾನಗಳ ಅಗತ್ಯವಿತ್ತು.

ರಾಜಸ್ಥಾನ, ಚತ್ತೀಸ್ ಗಢ ಮತ್ತು ಮಧ್ಯಪ್ರದೇಶದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿತ್ತು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.