ಇಂಗ್ಲಿಷ್‌ ಶಾಲೆಗಳ ಅಬ್ಬರದ ನಡುವೆ ಉತ್ಕೃಷ್ಟ ಶಿಕ್ಷಣ


Team Udayavani, Dec 24, 2019, 3:00 AM IST

english sha

ಚಾಮರಾಜನಗರ: ಇಂಗ್ಲಿಷ್‌ ಮಾಧ್ಯಮ ಶಾಲೆಗಳ ಅಬ್ಬರದ ನಡುವೆ ಕನ್ನಡ ಮಾಧ್ಯಮದಲ್ಲಿ ಉತ್ಕೃಷ್ಟವಾದ ಶಿಕ್ಷಣವನ್ನು ದೀನಬಂಧು ಶಾಲೆ ನೀಡುತ್ತಿರುವುದು ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮೀಪತಿ ಹೇಳಿದರು.

ನಗರದ ದೀನಬಂಧು ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ 21ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಚಾಮರಾಜನಗರ ಶೈಕ್ಷಣಿಕ ವಲಯದಲ್ಲಿ ದೀನಬಂಧು ಶಾಲೆಯನ್ನು ವಿಶೇಷವಾಗಿ ಗುರುತಿಸಲಾಗುತ್ತಿದೆ. ಈ ಶಾಲೆಯಲ್ಲಿ ಕಲಿಕೆ ನೈಜ ಅನುಭವದಿಂದ ನಡೆಯುತ್ತದೆ. ಇಲ್ಲಿನ ಶಿಕ್ಷಕರು ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಂಡು ಶಿಕ್ಷಣ ನೀಡುತ್ತಿದ್ದಾರೆ ಎಂದರು.

ಮಕ್ಕಳಿಗೆ ಪೂರಕ ಪರಿಸರ: ಇಲ್ಲಿ ನ ಮಕ್ಕಳು, ಶಾಲೆಯಲ್ಲಿ ಯಾವುದೇ ರೀತಿಯ ಒತ್ತಡ ಇಲ್ಲದೇ ಅನುಭವ ಪೂರ್ವಕವಾಗಿ, ಸಹಜವಾಗಿ ಪಾಠಗಳನ್ನು ಕಲಿಯುತ್ತಿದ್ದಾರೆ. ಶಾಲೆಯಲ್ಲಿ ಯಾವುದೇ ಆಡಂಬರವಿಲ್ಲ. ಮಕ್ಕಳ ಮನೋವಿಕಾಸಕ್ಕೆ ಪೂರಕವಾದ ಪರಿಸರ, ಕೊಠಡಿ, ಪಠ್ಯ ವಿಧಾನಗಳನ್ನು ಶಾಲೆ ಒಳಗೊಂಡಿದೆ. ದೀನಬಂಧು ಶಾಲೆ ವರ್ಷದಿಂದ ವರ್ಷಕ್ಕೆ ತನ್ನ ಪ್ರಭಾವಳಿ ವಿಸ್ತರಿಸಿಕೊಂಡು ಬೆಳೆಯುತ್ತಿದೆ. ಇದು ನಮ್ಮ ಶಿಕ್ಷಣ ಇಲಾಖೆಗೂ ಒಂದು ಹೆಮ್ಮೆಯ ವಿಚಾರ. ವಿದ್ಯಾರ್ಥಿಗಳಿಂದ ಇಲ್ಲಿ ಪಡೆಯುವ ಶುಲ್ಕ ಅತ್ಯಲ್ಪ. ಇಷ್ಟು ಕಡಿಮೆ ಶುಲ್ಕ ತೆಗೆದುಕೊಳ್ಳುತ್ತಾರೆಂದರೆ ನಂಬಲು ಕಷ್ಟವಾಗುತ್ತದೆ ಎಂದು ಹೇಳಿದರು.

ಅನುಭವದ ಕಲಿಕೆಯಾಗಲಿ: ದೀನಬಂಧು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಪ್ರೊ.ಜಿ.ಎಸ್‌. ಜಯದೇವ್‌ ಮಾತನಾಡಿ, ಶಿಕ್ಷಣ ನೆನಪಿನ ಆಟವಾಗಬಾರದು, ಅದು ಅನುಭವದ ಕಲಿಕೆಯಾಗಬೇಕು. ಜಾತಿ, ಧರ್ಮ, ಪಂಗಡಗಳನ್ನು ಮೀರಿ ಬೆಳೆಯಬೇಕು ಎಂಬ ಆಶಯದಿಂದ ದೀನಬಂಧು ಶಾಲೆ ಕೆಲಸ ಮಾಡುತ್ತಿದೆ. ಇಲ್ಲಿ ಜಾತಿ, ಧರ್ಮದ ಭೇದವಿಲ್ಲ. ಎಲ್ಲ ಮಕ್ಕಳೂ ಜಾತ್ಯತೀತೆಯ ಭಾವನೆಯಿಂದ ಬೆಳೆಯುತ್ತಿದ್ದಾರೆ.

ನಮ್ಮದು ಪರಿಸರ ಕಾಳಜಿಯುಳ್ಳ ಶಾಲೆ. ಇಲ್ಲಿನ ಮಕ್ಕಳೇ ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ಜಾಗೃತಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಶಾಲೆ ಕೇವಲ ಪಠ್ಯಕ್ಕೆ ಸೀಮಿತವಾಗದೇ, ಮಕ್ಕಳ ವ್ಯಕ್ತಿತ್ವ ನಿರ್ಮಿಸುವ ಕೆಲಸ ಮಾಡುತ್ತಿದೆ. ಶಾಲೆಯಿಂದ ಮುಂದಿನ ಹಂತದ ಶಿಕ್ಷಣಕ್ಕೆ ಹೋದ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯಿಂದ ಪ್ರತಿ ವರ್ಷ 8 ಲಕ್ಷ ರೂ.ಗಳಷ್ಟು ಸ್ಕಾಲರ್‌ಶಿಪ್‌ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಾಹಿತ್ಯ- ಸಂಸ್ಕೃತಿಯ ಸಂಗಮ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ನಡೆಯುವ ಮನರಂಜನಾ ಕಾರ್ಯಕ್ರಮಗಳು ಸಾಂಸ್ಕೃತಿಕ ಅಭಿರುಚಿಯನ್ನು ಬೆಳೆಸುವಂತಿರಬೇಕು. ನಮ್ಮ ದೇಶದ ಪರಂಪರೆ, ಸಾಹಿತ್ಯ, ಜಾನಪದವನ್ನು ಅಭಿವ್ಯಕ್ತಿಗೊಳಿಸಬೇಕು. ಹಾಗಾಗಿ ಶಾಲೆಯ ವಾರ್ಷಿಕೋತ್ಸವದ ಕಾರ್ಯಕ್ರಮಗಳು ಸಾಹಿತ್ಯ ಸಂಸ್ಕೃತಿಯ ಸಂಗಮವಾಗಿರುತ್ತವೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಅಕ್ಯೂರೆಕ್ಸ್‌ ಸಲ್ಯೂಶನ್ಸ್‌ ಕಂಪೆನಿಯ ನಿರ್ದೇಶಕರಾದ ಕೆ.ಎನ್‌. ರಾಮಮೋಹನ್‌ ಮತ್ತು ಜಿ.ಎಸ್‌. ಪದ್ಮಶ್ರೀ ಉದ್ಘಾಟಿಸಿದರು. ವಿಶೇಷ ಅಗತ್ಯವುಳ್ಳ ಮಕ್ಕಳ ಅಭಿವೃದ್ಧಿ ಮತ್ತು ಪುನರ್ವಸತಿ ಟ್ರಸ್ಟ್‌ ಕಾರ್ಯದರ್ಶಿ ದೀಪಕ್‌, ಅನುಕ್ತಾ ದೀಪಕ್‌, ನಿವೃತ್ತ ಶಿಕ್ಷಕ ಚನ್ನಂಜಯ್ಯ, ಗೌರವ ಶಿಕ್ಷಕ ವೇಣುಗೋಪಾಲ್‌, ಸಂಸ್ಥೆಯ ಆಡಳಿತಾಧಿಕಾರಿ ಪ್ರಜ್ಞಾ, ಮುಖ್ಯ ಶಿಕ್ಷಕ ಪ್ರಕಾಶ್‌ ಹಾಜರಿದ್ದರು. ದೀನಬಂಧು ಶಾಲೆಯ ಮಕ್ಕಳು ಕನ್ನಡ ಸಾಹಿತ್ಯವನ್ನಾಧರಿಸಿದ ಗೀತೆಗಳ ಸಂಗೀತ ನೃತ್ಯವನ್ನು ಪ್ರದರ್ಶಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.