ಮೌಲ್ಯಮಾಪನಕ್ಕೆ ಶಿಕ್ಷಕರ ಬಹಿಷ್ಕಾರ ಸಲ್ಲ

Team Udayavani, Dec 24, 2019, 10:20 AM IST

huballi-tdy-2

ಧಾರವಾಡ: ಪರೀಕ್ಷಾ ನಕಲು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಗೆ ಕಡಿವಾಣ ಹಾಕಲು ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ. ಶಿಕ್ಷಕರು ಮೌಲ್ಯಮಾಪನ ಕಾರ್ಯಕ್ಕೆ ಯಾವುದೇ ಕಾರಣಕ್ಕೂ ಬಹಿಷ್ಕಾರ ಹಾಕಬಾರದು ಎಂದು ಪ್ರಾಥಮಿಕ-ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶಕುಮಾರ್‌ ಹೇಳಿದರು.

ನಗರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳು, ಶಿಕ್ಷಕರು ಹಾಗೂ ಪಾಲಕರಲ್ಲಿ ಶಿಕ್ಷಣ ಪ್ರೀತಿ ಹೆಚ್ಚಿಸಲು ಎಲ್ಲ ಜಿಲ್ಲೆಗಳ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ವಾರದಲ್ಲಿ ಕನಿಷ್ಠ ಐದು ಶಾಲೆಗಳಿಗೆ ಭೇಟಿ ನೀಡಿ ಸಂವಾದ ನಡೆಸಿ, ಆತ್ಮವಿಶ್ವಾಸ ಹೆಚ್ಚಿಸಬೇಕು ಎಂದು ಸೂಚಿಸಿದರು.

ಮಕ್ಕಳಲ್ಲಿ ಬಾಲ್ಯ ವಿವಾಹ, ಲೈಂಗಿಕ ಕಿರುಕುಳ ತಡೆ ಮೊದಲಾದ ವಿಷಯಗಳ ಜಾಗೃತಿ ಮೂಡಿಸಲು ಮೀನಾ ತಂಡಗಳನ್ನು ಕ್ರಿಯಾಶೀಲಗೊಳಿಸಬೇಕು. ಶೈಕ್ಷಣಿಕ ಪ್ರಗತಿ ಚುರುಕುಗೊಳಿಸಲು ಎಲ್ಲ ಮಕ್ಕಳ ಪಾಲಕರಿಗೂ ಪತ್ರ ಬರೆದು ಅವರ ಸಹಭಾಗಿತ್ವ ಪಡೆಯಬೇಕು ಎಂದರು.

ಅಕ್ಟೋಬರ್‌ನಲ್ಲಿ ಕಲಬುರಗಿ ವಿಭಾಗದಲ್ಲಿ ಶಿಕ್ಷಣ ಇಲಾಖೆಯ ಅ ಧಿಕಾರಿಗಳು ಮತ್ತು ಜಿಪಂ ಸಿಇಒಗಳ ಸಭೆ ನಡೆಸಲಾಗಿದೆ. ಎಲ್ಲ ಜಿಲ್ಲೆಗಳ ಡಿಡಿಪಿಐ, ಜಿಪಂ ಸಿಇಒಗಳೊಂದಿಗೆ ವಿಡಿಯೋ ಸಂವಾದ, ಮಕ್ಕಳೊಂದಿಗೆ ನೇರಫೋನ್‌ ಇನ್‌ ಕಾರ್ಯಕ್ರಮ, ಪಾವಗಡ ತಾಲೂಕಿನ ಅಚ್ಚಮ್ಮನಹಳ್ಳಿ, ಚಾಮರಾಜನಗರ ಜಿಲ್ಲೆಯ ಗೋಪಿನಾಥಂನಲ್ಲಿ ಶಾಲಾವಾಸ್ತವ್ಯ ಮಾಡಿದ್ದೇನೆ. ಇದುವರೆಗೂ 15 ಜಿಲ್ಲೆಗಳಿಗೆ ಭೇಟಿ ನೀಡಿ ಶಿಕ್ಷಣ ಇಲಾಖೆ ವಾಸ್ತವ ಅಧ್ಯಯನ ಮಾಡಿದ್ದೇನೆ ಎಂದು ಹೇಳಿದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಆದ್ಯತೆಯಡಿ ಬಜೆಟ್‌ ಒದಗಿಸುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಸರ್ಕಾರಿ ಶಾಲೆಗಳಲ್ಲಿ 1.5 ಲಕ್ಷ ವಿದ್ಯಾರ್ಥಿಗಳ ಕೊರತೆಯಾಗಿರುವುದು ಆತಂಕದ ಸಂಗತಿಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಓದುವ ಪ್ರತಿ ವಿದ್ಯಾರ್ಥಿಗೆ ತಲಾ ಸುಮಾರು 65 ಸಾವಿರ ರೂ. ಖರ್ಚು ಮಾಡುತ್ತಿದೆ. ಆದರೂ ಕೂಡ ಅಲ್ಲಿನ ಶಿಕ್ಷಣದ ಗುಣಮಟ್ಟ ಹೆಚ್ಚಾಗದಿರುವ ಬಗ್ಗೆ ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದರು.

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸತತವಾಗಿ ಉತ್ತಮ ಸಾಧನೆ ತೋರುತ್ತಿರುವ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಬೆಟಗೇರಿಯ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ರಮೇಶ ಅಳಗುಂಡಿ ಮಾತನಾಡಿ, ತಮ್ಮ ಶಾಲೆಯಲ್ಲಿ ಅನುಸರಿಸುತ್ತಿರುವ ಕ್ರಮಗಳನ್ನು ವಿವರಿಸಿದರು. ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ, ನಿರ್ದೇಶಕ ಡಾ| ಬಿ.ಕೆ.ಎಸ್‌. ವರ್ಧನ್‌, ಸಿಸ್ಲೆಪ್‌ ನಿರ್ದೇಶಕ ಬಿ.ಎಸ್‌. ರಘುವೀರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ| ಕೆ.ಬಿ. ಗುಡಸಿ ಇದ್ದರು.

ಸಚಿವ ಸುರೇಶಕುಮಾರ್‌ ಅವರನ್ನು ಸನ್ಮಾನಿಸಲಾಯಿತು. ಬೆಳಗಾವಿ ವಿಭಾಗದ ಎಲ್ಲ ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐ, ಬಿಇಒ, ಡಯಟ್‌ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.