ಯಾರ ಪೌರತ್ವವನ್ನೂ ಕಸಿದುಕೊಳ್ಳಲ್ಲ: ತೇಜಸ್ವಿ
Team Udayavani, Dec 26, 2019, 3:03 AM IST
ಹಾವೇರಿ: ಪೌರತ್ವ ತಿದ್ದುಪಡಿ ಕಾಯ್ದೆ ಹೊರದೇಶಗಳಿಂದ ನಮ್ಮ ದೇಶಕ್ಕೆ ಆಶ್ರಯ ಕೇಳಿ ಬಂದಿರುವ ಮತೀಯ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಕಾನೂನಾಗಿದೆಯೇ ಹೊರತು ಯಾರ ಪೌರತ್ವವನ್ನೂ ಕಸಿದುಕೊಳ್ಳುವ ಕಾನೂನು ಅಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿಸೂರ್ಯ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಗಳ ಆರು ಧಾರ್ಮಿಕ ಅಲ್ಪಸಂಖ್ಯಾತರಿಗೆ ಅನ್ವಯಿಸುತ್ತದೆ.
ಇದರಲ್ಲಿ ಮುಸ್ಲಿಮರನ್ನು ಸೇರಿಸಬೇಕು ಎಂಬ ಬೇಡಿಕೆ ಇದೆ. ಆದರೆ, ಮುಸ್ಲಿಮರನ್ನು ಸೇರಿಸಿದರೆ ಈ ಕಾನೂನಿನ ಉದ್ದೇಶ ಹಾಳಾಗುತ್ತದೆ. ಜತೆಗೆ, ಇದು ಅಸಂವಿಧಾನಾತ್ಮಕವಾಗುತ್ತದೆ. ಹಾಗಾಗಿ, ಮುಸ್ಲಿಮರನ್ನು ಸೇರಿಸಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಯಿಂದ ದೇಶದ ಯಾವ ಮುಸ್ಲಿಂ, ಹಿಂದುಗಳಿಗೂ ತೊಂದರೆ ಆಗಲ್ಲ. ಆದರೆ, ಕೆಲ ಪಟ್ಟಭದ್ರ ಹಿತಾಸಕ್ತಿಗಳು ತಪ್ಪು ಮಾಹಿತಿ ನೀಡಿ ಜನರ ದಾರಿ ತಪ್ಪಿಸುತ್ತಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್