ಶುದ್ಧ ನೀರಿಗಾಗಿ ಪರದಾಟ


Team Udayavani, Jan 1, 2020, 5:00 PM IST

rn-tdy-1

ಮಾಗಡಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆ ಇಲ್ಲದೇ ಬಂದ್‌ ಮಾಡಲಾಗುತ್ತಿದೆ. ಇದರಿಂದಾಗಿ ಗ್ರಾಮೀಣ ಜನರು ಶುದ್ಧ ನೀರಿಗಾಗಿ ಪರದಾಡುವಂತಾಗಿದೆ. ತಾಲೂಕಿನಲ್ಲಿ 131 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸ ಲಾಗಿದೆ.

ಈ ಪೈಕಿ 18 ಘಟಕಗಳು ವಿವಿಧ ಕಾರಣಗಳಿಂದ ಕಾರ್ಯನಿರ್ವಹಿಸುತ್ತಿಲ್ಲ. ಇದರಲ್ಲಿ ನಿರ್ವ ಹಣೆ ಕೊರತೆಯಿಂದ 18 ಘಟಕಗಳು ಮುಚ್ಚಿದ್ದು, ಡೇರಿಗಳು ಸ್ಥಾಪಿ ಸಿರುವ 2 ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ. ಬೇಸಿಗೆ ಕಾಲ ಸಮೀಪಿಸುತ್ತಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ನೀರು ಪೂರೈಕೆ ಮಾಡಲು ಪಂಚಾಯ್ತಿ ಅಧಿಕಾರಿಗಳು ಮಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ, ನೀರಿಗಾಗಿ ಊರು ಅಲೆಯುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಘಟಕ ನಿರ್ಮಾಣ: ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ಗ್ರಾಮ ನೈರ್ಮಲ ಕೆಆರ್‌ಐಡಿಎಲ್‌ 12 ಘಟಕಗಳು, ಡಿಆರ್‌ ಡಬ್ಲೂ ಎಸ್‌ 31 ಘಟಕಗಳು, ಹಾಲು ಉತ್ಪಾ ದಕರ ಸಂಘ 29 ಘಟಕಗಳು, ಹಾಗೂ ಡಿಕೆಸಿ ಚಾರಿಟಬಲ್‌ ಟ್ರಸ್ಟ್‌ 25 ಘಟಕಗಳು ಇತರೆ ಲ್ಯಾಂಡ್‌ ಆರ್ಮಿ, ಟಯೋಟ, ಅಪೆಕ್ಸ್‌ ಕಂಪನಿ ಕಂಪನಿಗಳ 8 ಘಟಕಗಳು ಸೇರಿ ಒಟ್ಟು 131 ಘಟಕಗಳು ಸ್ಥಾಪನೆಯಾಗಿವೆ. ಈ ಪೈಕಿ 8 ಪ್ರಗತಿಯಲ್ಲಿ, 105 ಸುಸ್ಥಿತಿಯಲ್ಲಿವೆ. 18 ಘಟಕಗಳು ದುರಸ್ತಿಯಾಗಬೇಕಿದೆ.

ಅನೇಕ ಗ್ರಾಮಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಘಟಕಗಳು ಆಗಾಗ್ಗೆ ಕೈಕೊಡುತ್ತಿವೆ. ಎಂದು ಗ್ರಾಹಕರು ಆರೋಪಿಸುತ್ತಿದ್ದಾರೆ. ಕೆಲವು ಘಟಕಗಳಲ್ಲಿ ಬೇಕಾದಷ್ಟು ನೀರು ಇದ್ದರೂ, ವಿದ್ಯುತ್‌ ಸಮಸ್ಯೆಯಿಂದ ಗ್ರಾಹಕರಿಗೆ ದೊರಕುತ್ತಿಲ್ಲ. ಕೆಲವಡೆ ಅಗತ್ಯ ನೀರು ಸಿಗುತ್ತಿಲ್ಲ. ಈ ದೂರುಗಳಿಗೆ ಅಧಿಕಾರಿ ಅಥವಾ ಜನಪ್ರತಿನಿಧಿಗಳಲ್ಲಿ ಸಮರ್ಪಕ ಉತ್ತರ ಸಿಗುತ್ತಿಲ್ಲ ಎಂಬ ಆರೋಪಗಳು ಇವೆ.

6 ತಿಂಗಳಿಗೊಮ್ಮೆ ದುರಸ್ತಿ: ಕನಿಷ್ಠ ಆರು ತಿಂಗಳಿಗೊಮ್ಮೆ ಘಟಕ ದುರಸ್ತಿಪಡಿಸಲು 30 ರಿಂದ 40 ಸಾವಿರ ರೂ. ಖರ್ಚು ಬರುತ್ತದೆ. ಕೊಳವೆ ಬಾವಿಯಲ್ಲಿ ನೀರಿದ್ದು, ಅಂರ್ಜಲ ಕಲುಷಿತಗೊಂಡರೆ ದುರಸ್ತಿ ವೆಚ್ಚ ಇನ್ನೂ ಅಧಿಕವಾಗುತ್ತದೆ ಎಂಬುದು ತಾಪಂ ಇಓ ಪ್ರದೀಪ್‌ ಹೇಳುತ್ತಾರೆ. ಇಷ್ಟೊಂದು ಹಣ ಭರಿಸಲು ಗ್ರಾಮ ಪಂಚಾಯ್ತಿಗಳು ಸದೃಢವಾಗಿಲ್ಲ ಹೀಗಾಗಿ ಗ್ರಾಪಂ ನೀರಿನ ಘಟಕ ನಿರ್ವಹಣೆ ವಹಿಸಿಕೊಳ್ಳಲು ಹಿಂದೇಟು ಹಾಕುತ್ತಿವೆ ಎಂದು ಹೇಳಲಾಗುತ್ತಿದೆ.

ನಮ್ಮ ಗ್ರಾಮದಲ್ಲಿನ ನೀರಿನ ಘಟಕ ಕೆಟ್ಟು ನಿಂತಿದೆ. ನೀರು ಸಿಗುತ್ತಿಲ್ಲ. ಪಂಚಾಯ್ತಿ ಅಧಿಕಾರಿಗಳನ್ನು ಕೇಳಿದರೆ, ಅದರ ದುರಸ್ಥಿ ವೆಚ್ಚ ಅಧಿಕವಾಗಿದೆ. ಪಂಚಾಯ್ತಿಯಿಂದ ಅಷ್ಟೊಂದು ಹಣ ಭರಿಸಿ ದುರಸ್ಥಿ ಮಾಡಿಸಲು ಸಾಧ್ಯವಿಲ್ಲ ಎನ್ನುತ್ತಾರೆ. ಜನಪ್ರತಿನಿಧಿಗಳು ನಮ್ಮನ್ನ ನೀರಿಗಾಗಿ ಊರೂರು ಸುತ್ತುವ ಪರಿಸ್ಥಿತಿ ತಂದೊಡ್ಡಿದ್ದಾರೆ.  ನೇತೇನಹಳ್ಳಿ ಗ್ರಾಮಸ್ಥ.

 

-ಶ್ರೀನಿವಾಸ್‌. ಎಸ್‌

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.