ರಾಮನಗರ ಬದಲು ಶಿವಮೊಗ್ಗ, ದ.ಕನ್ನಡಕ್ಕೆ ಬೆಂಗಳೂರು ಎಂದು ಹೆಸರಿಡಿ: ಬಿಎಸ್ ವೈಗೆ ಕುಮಾರಸ್ವಾಮಿ

Team Udayavani, Jan 5, 2020, 3:50 PM IST

hdk

ಬೆಂಗಳೂರು: ರಾಮನಗರ ಜಿಲ್ಲೆಗೆ ನವಬೆಂಗಳೂರು ಎಂದು ಮರುನಾಮಕರಣ ಮಾಡುವ ರಾಜ್ಯ ಸರಕಾರದ ಇರಾದೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ, #SaveRamanagara ಎಂಬ ಹ್ಯಾಷ್ ಟ್ಯಾಗ್ ಬಳಸಿ ಬಿ ಎಸ್ ಯಡಿಯೂರಪ್ಪ ಸರಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ರಾಮನಗರದ ಹೆಸರು ಬದಲಾಯಿಸುವ ಸರ್ಕಾರದ ನಿರ್ಧಾರದ ಕುರಿತು ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗಳು ಈ ಕೆಳಗಿನಂತಿವೆ.

1. ಪಕ್ಕದಲ್ಲೇ ಕಾವೇರಿ ನದಿ ಇದೆ, ಇಗ್ಗಲೂರಿನಲ್ಲಿ ‘ದೇವೇಗೌಡ ಬ್ಯಾರೇಜ್’ ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ, ಚಿನ್ನದಂಥ ಭೂಮಿ ಇದೆ, ಮುಗ್ಧ ಜನರಿದ್ದಾರೆ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪದ್ಭರಿತ ಭೂಮಿಯನ್ನು  ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ. ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ.

2. ರಾಮನಗರವನ್ನು ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದೆಯೇ ಬಿಎಸ್ವೈ ಅವರೇ? ಹಾಗಿದ್ದರೆ  ಜಿಲ್ಲೆಗೆ ನಾನು ನನ್ನ ಬಜೆಟ್ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ.

3. ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನು ಮುಂದೆ ಹೋಗಬಾರದು ಎಂದು  ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪ.

4. ಅಭಿವೃದ್ಧಿಯ ಹೆಸರಲ್ಲಿ ಇದೇ ಸಮಸ್ಯೆಗಳನ್ನು ರಾಮನಗರಕ್ಕೆ ವಿಸ್ತರಿಸುವುದು ಬೇಡ. ಇಲ್ಲಿಗೆ ಕೋಟಿ ಕುಳಗಳು ಬರದಿದ್ದರೂ ಬೇಡ. ಭೂಮಿ ಲೂಟಿಯಾಗದೇ ಇರಲಿ. ಕೆರೆಗಳು ಮುಚ್ಚದೇ ಇರಲಿ. ಸಮೃದ್ಧ ಜನಪದ ಸಂಸ್ಕೃತಿ ಅಳಿಯದಿರಲಿ. ಜನರ ಮುಗ್ಧತೆ ಬಲಿಯಾಗದೇ ಇರಲಿ.

5. ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ವೈ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ?

6. ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು.  ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್ಗಳಿಗೆ ಬಲಿಯಾಗಿವೆ. ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ.

7. ರಾಮನಗರ ತಾಲೂಕು ಮೊದಲು ‘ಕ್ಲೋಸ್ ಪೇಟೆ’ ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆಸರನ್ನು ನಾನು ಇಡೀ ಜಿಲ್ಲೆಗೆ ಇಟ್ಟಿದ್ದೇನೆ. ಅದನ್ನು ಬದಲಾಯಿಸುವುದು ಅವರಿಗೆ ಮಾಡುವ ಅಪಮಾನ.

8. ಈ ಜಿಲ್ಲೆ ಗಂಗರು ಆಳಿದ ನಾಡು.  ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೆ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ.

9. ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ  ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ‌. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ.

10. ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.