ಧೂಮಪಾನ ನಿಯಂತ್ರಣ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ

ತಂಬಾಕು ನಿಯಂತ್ರಣ ಕೋಶದ ಸಮನ್ವಯ ಸಮಿತಿ ಸಭೆ

Team Udayavani, Jan 8, 2020, 12:30 PM IST

8-January-14

ಬೀದರ: ಸರ್ಕಾರಿ ಕಚೇರಿಗಳು ಮತ್ತು ಶಾಲಾ ಕಾಲೇಜುಗಳ ಆವರಣದಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಮತ್ತು ಧೂಮಪಾನ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಧಿಕಾರಿ ಡಾ|ಎಚ್‌.ಆರ್‌.ಮಹಾದೇವ ಅವರು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಪ್ರದೇಶಗಳೆಂದು ಘೋಷಿಸಿ, ಶಿಕ್ಷಣ ಸಂಸ್ಥೆಗಳಲ್ಲಿ ಬೆಳಗ್ಗೆಯ ಪ್ರಾರ್ಥನೆಯ ವೇಳೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಬೇಕು. ಅಲ್ಲದೇ ದುಶ್ಚಟಗಳಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹೆಚ್ಚು ಪ್ರಚಾರ ನೀಡಿ ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ವಹಿಸಬೇಕೆಂದು ವಾರ್ತಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಡಳಿತದಡಿ ಬರುವ ಸ್ಥಳೀಯ ಸಂಸ್ಥೆಗಳು ಮತ್ತು ಇಲಾಖೆಗಳಿಂದ ಕೊಡಲಾಗುವ ಪರವಾನಗಿ ಮತ್ತು ನೋಂದಣಿಗಳಲ್ಲಿ ಕೋಟಾ³ ಕಾಯ್ದೆ 2003ರ ಅಂಶಗಳನ್ನು ಸೇರಿಸಲು ಸುತ್ತೋಲೆ ಹೊರಡಿಸಲಾಗಿದೆ. ಇದರ ಪಾಲನೆಯಾಗಬೇಕು ಎಂದು ಅಧಿ ಕಾರಿಗಳಿಗೆ ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಶಂಭು ಕಡ್ಲಿಕೊಪ್ಪ ಮಾತನಾಡಿ, ಕೇಂದ್ರ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ-ಸಿಗರೇಟು ಉತ್ಪಾದನೆ, ಆಮದು, ರಫ್ತು, ಸಾಗಾಟ, ಮಾರಾಟ, ಸರಬರಾಜು, ಸಂಗ್ರಹ ಮತ್ತು ಜಾಹೀರಾತು ನಿಷೇದ ಕಾಯ್ದೆಯನ್ನು 2019ರ ಸೆಪ್ಟೆಂಬರ್‌ನಿಂದ ಜಾರಿಗೆ ತಂದಿದೆ. ಇದರನ್ವಯ ಈ-ಸಿಗರೇಟ್‌ ಮಾರಾಟ ಮಾಡಿದಲ್ಲಿ 1 ವರ್ಷದ ವರೆಗೆ ಜೈಲು ಶಿಕ್ಷೆ ಅಥವಾ 1ಲಕ್ಷ ರೂಪಾಯಿ ವರೆಗೆ ದಂಡವನ್ನು ಅಥವಾ ಈ ಎರಡನ್ನು ವಿಧಿಸುವ ಅವಕಾಶ ಇರುತ್ತದೆ ಎಂದು ಹೇಳಿದರು.

ಈ ಕಾಯ್ದೆಯನ್ನು ಎರಡನೇ ಬಾರಿ ಉಲ್ಲಂಘಿಸಿದ್ಲಲಿ 3 ವರ್ಷದ ವರೆಗೆ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ.ಗಳ ವರೆಗೆ ದಂಡ ವಿಧಿಸಲು ಅವಕಾಶವಿದೆ. ಮತ್ತು ಕಾಯ್ದೆಯ ಸೆಕ್ಷನ್‌ 5ರ ಅನುಸಾರ ಈ-ಸಿಗರೇಟುಗಳ ಸಂಗ್ರಹ ಮಾಡಿದ ವ್ಯಕ್ತಿಗೆ 6 ತಿಂಗಳ ವರೆಗೆ ಜೈಲು ಶಿಕ್ಷೆ ಅಥವಾ 50 ಸಾವಿರ ರೂ. ಗಳ ವರೆಗೆ ಧಂಡವನ್ನು ಅಥವಾ ಈ ಎರಡನ್ನು ವಿಧಿಸುವ ಅವಕಾಶ ಇರುತ್ತದೆ ಎಂದು ಸಭೆಗೆ ವಿವರಿಸಿದರು.

ಪೌರಾಡಳಿತ ನಿರ್ದೇಶನಾಲಯದ ರಾಜ್ಯ ನಿರ್ದೇಶಕರು ಇತ್ತೀಚೆಗೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಎಲ್ಲ ಸಾರ್ವಜನಿಕ ಸ್ಥಳಗಳನ್ನು ಧೂಮಪಾನ ಮುಕ್ತ ಪ್ರದೇಶವೆಂದು ಘೋಷಿಸುವಂತೆ ಸುತ್ತೋಲೆ ಹೊರಡಿಸಿದ್ದಾರೆ. ಅಬಕಾರಿ ಆಯುಕ್ತರು ರಾಜ್ಯದಾದ್ಯಂತ ಮದ್ಯ ಮಾರಾಟ ಸ್ಥಳಗಳನ್ನು ಧೂಮಪಾನ ಮುಕ್ತ ಮಾಡುವ ಸುತ್ತೋಲೆ ಹೊರಡಿಸಿದ್ದಾರೆ. ಇವುಗಳ ಪಾಲನೆಯಾಗಬೇಕು ಎಂದು ಕೋರಿದರು.

ಸಭೆಯಲ್ಲಿ ಡಿಎಚ್‌ಒ ಡಾ|ವಿ.ಜಿ. ರೆಡ್ಡಿ, ಕೋಶದ ಕಾರ್ಯಕ್ರಮ ಅಧಿಕಾರಿ ಡಾ| ಎಲ್‌. ಕೃಷ್ಣಾ ರೆಡ್ಡಿ, ಆಹಾರ ಅಧಿಕಾರಿ ಸಂತೋಷ ಕಾಳೆ, ತಾಲೂಕು ಆರೋಗ್ಯ ಅಧಿ ಕಾರಿಗಳಾದ ಡಾ| ಶರಣಯ್ಯ ಸ್ವಾಮಿ, ಶರಣಪ್ಪ ಮುಡಬಿ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್‌.ಸಿ. ಚಂದ್ರಶೇಖರ್‌, ಅಬಕಾರಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.