ಭೀಕರ ರಸ್ತೆ ಅಪಘಾತ: ಕೆಂಟೊ ಮೊಮೊಟ ಪಾರು
Team Udayavani, Jan 13, 2020, 9:53 PM IST
ಕೌಲಾಲಂಪುರ: ಸೋಮವಾರ ಮುಂಜಾನೆ ಮಲೇಶ್ಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವಿಶ್ವದ ನಂ.1 ಬ್ಯಾಡ್ಮಿಂಟನ್ ಆಟಗಾರ, ಜಪಾನಿನ ಕೆಂಟೊ ಮೊಮೊಟ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ವಾಹನ ಚಾಲಕ ಮೃತಪಟ್ಟಿದ್ದಾರೆ.
“ಮಲೇಶ್ಯ ಮಾಸ್ಟರ್ ಸೂಪರ್ 500′ ಬ್ಯಾಡ್ಮಿಂಟನ್ ಕೂಟ ಮುಗಿಸಿದ ಕೆಂಟೊ ಮೊಮೊಟ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ವಾಹನ, ದೈತ್ಯ ಟ್ರಕ್ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ವಾಹನದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಂಟೊ ಅವರ ಮುಖ ಹಾಗೂ ಮೂಗಿಗೆ ಗಾಯವಾಗಿದೆ ಎಂದು ಮಲೇಶ್ಯ ಬ್ಯಾಡ್ಮಿಂಟನ್ ಸಂಸ್ಥೆ ತಿಳಿಸಿದೆ.
ಕೆಂಟೊ ಅವರ ಸಹಾಯಕ ಕೋಚ್, ಫಿಸಿಯೋಥೆರಪಿಸ್ಟ್ ಮತ್ತು ಬ್ಯಾಡ್ಮಿಂಟನ್ ಅಧಿಕಾರಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿವಾರ ಮೊಮೊಟ ಮಾಜಿ ವಿಶ್ವ ಚಾಂಪಿಯನ್ ವಿಕ್ಟರ್ ಆಲೆಕ್ಸನ್ ಅವರನ್ನು ಸೋಲಿಸಿ ಮಲೇಶ್ಯ ಮಾಸ್ಟರ್ ಪುರುಷರ ಸಿಂಗಲ್ಸ್ ಪ್ರಶಸ್ತಿ ಜಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ