ಸಿಎಎ ವಿರೋಧಿಸಿ ಸೈಕಲ್‌ ಜಾಥಾ

Team Udayavani, Jan 14, 2020, 12:43 PM IST

bidar-tdy-2

ಬೀದರ: ಸಂವಿಧಾನ ವಿರೋಧಿ ಪೌರತ್ವ ಸಂಶೋಧನಾ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಸೋಮವಾರ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಯುವ ಚಿಂತಕರ ವೇದಿಕೆ ಆಶ್ರಯದಲ್ಲಿ ಸೈಕಲ್‌ ಜಾಥಾ ನಡೆಯಿತು.

ಶಹಾಪೂರಗೇಟ್‌, ನೌಬಾದ, ಮೈಲೂರು, ಗವಾನ ಚೌಕ್‌ ಹೀಗೆ ನಗರದ ವಿವಿಧಡೆಯಿಂದ ಆಗಮಿಸಿದ್ದ ಸೈಕಲ್‌ ಜಾಥಾದ ಕಾರ್ಯಕರ್ತರು ನಗರದ ಅಂಬೇಡ್ಕರ ವೃತ್ತದಲ್ಲಿ ಸೇರಿದರು. ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ವೇದಿಕೆ ಜಿಲ್ಲಾ ಸಂಚಾಲಕ ಮಹೇಶಕುಮಾರ ಗೋರನಾಳಕರ್‌ ಚಾಲನೆ ನೀಡಿದರು. ಅಂಬೇಡ್ಕರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಜಾಥಾ ನಡೆಸಲಾಯಿತು.

ಬಳಿಕ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಗೋರನಾಳಕರ್‌, ದೇಶದಲ್ಲಿರುವ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು ಸಂವಿಧಾನ ವಿರೋಧಿ ಪೌರತ್ವ ಸಂಶೋಧನಾ ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಕಾಯ್ದೆಯಿಂದ ದೇಶದಲ್ಲಿ ಅಶಾಂತಿ ಮೂಡುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಪೌರತ್ವ ಕಾಯ್ದೆ ಹಿಂಪಡೆಯಬೇಕು. ಆ ಮೂಲಕ ದೇಶದಲ್ಲಿ ರಾಷ್ಟ್ರೀಯ ಭಾವೈಕ್ಯ ಮತ್ತು ಭಾತೃತ್ವ ಖಾಯಂಆಗಿ ಉಳಿಯುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ಶ್ರೀಕಾಂತ ಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಬರೀ ದೇಶದ ಜನತೆಯನ್ನು ಒಡೆಯುವ ಹುನ್ನಾರ ಮಾಡುತ್ತಿದೆ. ಈ ಕಾಯ್ದೆಯಿಂದ ದೇಶದಲ್ಲಿ ಅಶಾಂತಿ ಮೂಡಿದೆ ಎಂದರು.

ಜಾಥಾದಲ್ಲಿ ವೇದಿಕೆಯ ರಾಜರತನ ಶಿಂಧೆ, ಸಂದೀಪ ಕಾಂಟೆ, ಸೈಯ್ಯದ್‌ ವಹೀದ ಲಖನ, ದಲಿತ ಮುಖಂಡರಾದ ರಾಜಕುಮಾರ ಮೂಲಭಾರತಿ, ರವಿಕುಮಾರ ವಾಘಮಾರೆ, ಮಲ್ಲಿಕಾರ್ಜುನ ಚಿಟ್ಟಾ, ಅಭಿ ಕಾಳೆ, ಉಮೇಶಕುಮಾರ ಸ್ವಾರಳ್ಳಿಕರ್‌, ಪವನ ಗುನ್ನಳ್ಳಿಕರ್‌, ಕಿಶೋರ ನವಲಸಪೂರಕರ್‌, ವಿನಯ ಮಾಳಗೆ, ಮುಬಾಶೀರ ಶಿಂಧೆ, ಸರ್ಫಾರಾಜ ಹಾಶ್ಮಿ, ವಿನೋದ ರತ್ನಾಕರ್‌, ಶೇಖ ಅನ್ಸಾರ್‌, ಗೌತಮ ಮುತ್ತಂಗೀರ್‌, ಶಿವಕುಮಾರ ಗುನ್ನಳ್ಳಿ, ಅಮರ ಅಲ್ಲಾಪೂರ, ಶಿವಕುಮಾರ ಮನ್ನಾಏಖೇಳ್ಳಿ, ಸಂಜುಕುಮಾರ ಬಲ್ಲೂರೆ, ರಾಜಕುಮಾರ ಡೊಂಗ್ರೆ, ಶಿವಕುಮಾರ ದೇವಕರ್‌, ನರಸಿಂಗ ದೊಡ್ಡಿ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.