ಸಕಾಲ ಸಾಧನೆಗೆ ಡೀಸಿಗಳಿಗೆ ಬಹುಮಾನ: ಸಚಿವ

Team Udayavani, Jan 16, 2020, 3:00 AM IST

sakala-sadha

ಹಾಸನ: ನಿಗದಿತ ಸಮಯದಲ್ಲಿ ವಿವಿಧ ಸರ್ಕಾರಿ ಸೇವೆ ಒದಗಿಸಲು ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಾಥರ್ಮಿಕ ಮತ್ತು ಪ್ರೌಢ ಶಿಕ್ಷಣ, ಕಾರ್ಮಿಕ ಹಾಗೂ ಸಕಾಲ ಯೋಜನೆ ಸಚಿವ ಆರ್‌.ಸುರೇಶ್‌ ಕುಮಾರ್‌ ಸೂಚಿಸಿದರು.

ಕರ್ನಾಟಕ ಸಕಾಲ ಸೇವೆಗಳ ಅಧಿ ನಿಯಮದ ಸಮರ್ಪಕ ಅನುಷ್ಠಾನ ಸಂಬಂಧ ಮಂಗಳವಾರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ, ಸಚಿವರು ಸಕಾಲ ಸೇವೆಗಳ ಕುರಿತಂತೆ ಎಲ್ಲಾ ಕಚೇರಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶನ ಫ‌ಲಕ ಹಾಕಿ ಜನರಿಗೆ ಹೆಚ್ಚಿನ ಸೇವೆ ಬಳಸಿಕೊಳ್ಳಲು ಅರಿವು ಮೂಡಿಸುವಂತೆ ತಾಕೀತು ಮಾಡಿದರು.

ವಿಳಂಬಕ್ಕೆ ಆಸ್ಪದ ಬೇಡ: ಸಕಾಲ ಉದ್ದೇಶ ಕುರಿತಂತೆ ಅಧಿಕಾರಿಗಳು, ಸಿಬ್ಬಂದಿಗಳಿಗೆ ತಿಳಿವಳಿಕೆ ನೀಡುವ ನಿಟ್ಟಿನಲ್ಲಿ ಕಾರ್ಯಾಗಾರ ಏರ್ಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಕಾಲ ಯೋಜನೆಯಡಿ ಇಲಾಖೆಗಳಲ್ಲಿ ಸ್ವೀಕೃತವಾದ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಅವರು, ವಿಳಂಬಕ್ಕೆ ಆಸ್ಪದ ನೀಡದಂತೆ ಗಮನಹರಿಸಬೇಕು ಅಧಿಕಾರಿಗಳಿಗೆ ತಿಳಿಸಿದರು.

ಡೀಸಿಗಳಿಗೆ ಬಹುಮಾನ: ಸಕಾಲ ಯೋಜನೆಯನ್ನು ಇನ್ನಷ್ಟು ಸರಳೀಕರಣ ಮಾಡುವ ನಿಟ್ಟಿನಲ್ಲಿ ಹೊಸ ಹೆಜ್ಜೆ ಇಡುವ ಜಿಲ್ಲಾಧಿಕಾರಿಗೆ ಬಹುಮಾನ ನೀಡಲಾಗುವುದು. ಫೆಬ್ರವರಿ ಮೊದಲ ವಾರದಲ್ಲಿ ಪುನಃ ವಿಡಿಯೋ ಸಂವಾದ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. ಸಕಾಲ ಮಿಷನ್‌ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್‌ ಚಾವ್ಲಾ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ವಿಶೇಷ ಆಸಕ್ತಿ ವಹಿಸಿ ಸೇವೆಗಳನ್ನು ಜನರಿಗೆ ಒದಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿರ್ದೇಶನ: ಜಿಲ್ಲಾಧಿಕಾರಿ ವಿಡಿಯೋ ಸಂವಾದ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿ ಜ.22 ರೊಳಗೆ ಎಲ್ಲಾ ಇಲಾಖೆಗಳಲ್ಲಿ ಸಕಾಲ ಸೇವೆಗೆ ಸಂಬಂಧಿಸಿದಂತೆ ಪ್ರದರ್ಶನ ಫ‌ಲಕ ಅಳವಡಿಸುವಂತೆ ನಿರ್ದೇಶನ ನೀಡಿದರು. ವಿಡಿಯೋ ಸಂವಾದ ನಂತರ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಆರ್‌.ಗಿರೀಶ್‌, ವಿವಿಧ ಇಲಾಖೆಗಳಿಗೆ ಬರುವ ಅರ್ಜಿಗಳನ್ನು ಸಕಾಲ ಯೋಜನೆಯಡಿ ಸ್ವೀಕರಿಸಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಲಹೆ ನೀಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ರಾಮ್‌ ನಿವಾಸ್‌ ಸೆಪಟ್‌, ಜಿಪಂ ಸಿಇಒ ಬಿ.ಎ.ಪರಮೇಶ್‌, ಉಪ ವಿಭಾಗಾಧಿಕಾರಿ ಡಾ.ನವೀನ್‌ ಭಟ್‌, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.

ಸಕಾಲದ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚುತ್ತಿದೆ. ಮುಜರಾಯಿ ಹಾಗೂ ಮೀನುಗಾರಿಕೆಯನ್ನೂ ಸಕಾಲ ಯೋಜನೆಯಡಿ ತರಲು ಚಿಂತನೆ ನಡೆದಿದೆ. ಜಿಲ್ಲಾಧಿಕಾರಿ ಅರ್ಜಿಗಳ ವಿಲೇವಾರಿಗೆ ಹೆಚ್ಚು ಒತ್ತು ನೀಡಿ ಪ್ರತಿ ತಿಂಗಳೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾಧ್ಯಮಗೋಷ್ಠಿಗಳ ಮೂಲಕ ಪ್ರಚಾರ ಮಾಡಬೇಕು.
-ಸುರೇಶ್‌ಕುಮಾರ್‌, ಸಚಿವ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.