ಭಾರತೀಯ ಸಂಸ್ಕೃತಿ ಉಳಿಸಿ-ಬೆಳೆಸಿ

ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮನವಿವಚನ ಕಟ್ಟುಗಳ ಮೆರವಣಿಗೆ

Team Udayavani, Jan 16, 2020, 11:23 AM IST

16-January-3

ದಾವಣಗೆರೆ: ಮಹಿಳೆಯರು ಭಾರತೀಯ ಸಂಸ್ಕೃತಿ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಬುಧವಾರ ಹರಜಾತ್ರಾ ಮಹೋತ್ಸವದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದಿನ ಆಧುನಿಕ, ಫ್ಯಾಷನ್‌, ಕಂಪ್ಯೂಟರ್‌, ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಭಾರತೀಯ ಸಂಸ್ಕೃತಿ ಮರೆತು ಪಾಶ್ಚಾತ್ಯ ಸಂಸ್ಕೃತಿ ಮೈಗೂಡಿಸಿಕೊಳ್ಳುತ್ತಿದ್ದಾರೆ. ಆದರೆ, ಪಾಶ್ಚಾತ್ಯ ಮಹಿಳೆಯರು ಭಾರತೀಯ ಸಂಸ್ಕೃತಿ ಅನುಸರಣೆ ಮಾಡುವುದು ಕಂಡು ಬರುತ್ತಿದೆ. ಹಾಗಾಗಿ ನಮ್ಮ ಸಂಸ್ಕೃತಿ ಉಳಿಸಿ, ಬೆಳಸುವ ಕಾರ್ಯದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದರು.

ಹೆಣ್ಣು ಮತ್ತು ಗಂಡು ಸಮಾಜದ ಕಣ್ಣು. ಇಬ್ಬರಲ್ಲಿ ಯಾರೂ ಉತ್ಛರಲ್ಲ ಮತ್ತು ನೀಚರಲ್ಲ. ಇಬ್ಬರು ಸರಿ ಸಮಾನರು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಿದವರು ವಿಶ್ವ ಗುರು ಬಸವಣ್ಣ. ಆಗ ನೀಡಿದ ಸಮಾನತೆಯ ಫಲವಾಗಿಯೇ ಇಂದು ಮಹಿಳೆಯರು ವಿವಿಧ ಕ್ಷೇತ್ರದಲ್ಲಿ ಕಂಡು ಬರುತ್ತಿದ್ದಾರೆ. ಯಶಸ್ವಿಯಾಗಿ ಸಾಧನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಹೆಣ್ಣು ಮಗು ಬೇಡ. ಹೆಣ್ಣು ಮಗು ಹುಟ್ಟಿತೆಂದರೆ ಪೀಡೆ ಎಂದುಕೊಳ್ಳುವರು ಇದ್ದಾರೆ. ಗಂಡು ಹುಟ್ಟಿದರೆ ಪೇಡಾ… ಹಂಚುವವರು ಇದ್ದಾರೆ. ಇಂತಹ ಜ್ವಲಂತ ಸಮಸ್ಯೆಗಳ ನಡುವೆಯೂ ಮಹಿಳೆಯರು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಅತ್ಯಾಚಾರ, ದೌರ್ಜನ್ಯದ ವಿರುದ್ಧ ಹೋರಾಟ ಮಾಡಬೇಕು. ನಮ್ಮ ಸನಾತನ ಭಾರತೀಯ ಪರಂಪರೆ, ಸಂಸ್ಕೃತಿಗೆ ಉಳಿಸಿ, ಬೆಳೆಸಲು ಮುಂದಾಗಬೇಕು ಎಂದು ಮನವಿ ಮಾಡಿದರು.

ವೀರ ವೀರಾಗ್ರಣಿ, ವೈರಾಗ್ಯದ ನಿಧಿ ಅಕ್ಕಮಹಾದೇವಿ ಅರಮನೆ, ವೈಭೋಗದ ಜೀವನ ತೊರೆದು, ಆಧ್ಯಾತ್ಮಿಕ ಬೆಳಕು ನೀಡಿದವರು. ಬ್ರಿಟಿಷರ ವಿರುದ್ಧ ಮೊದಲ ಬಾರಿಗೆ ಮಹಿಳಾ ಸೈನ್ಯ ಕಟ್ಟಿದ ಕೆಳದಿ ಚನ್ನಮ್ಮ, ವೀರ ರಾಣಿ ಚನ್ನಮ್ಮ ನಮ್ಮ ಸಮಾಜದ ಮಹಾನ್‌ ಸಾಧಕಿಯರು. ಅಂತಹವರ
ಮಾರ್ಗದರ್ಶನದಲ್ಲಿ ಸಮಾಜದ ಮಹಿಳೆಯರು ಮುಂದುವರೆಯಬೇಕು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಸೌಲಭ್ಯಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮಹಿಳೆಯರು, ಮಕ್ಕಳು, ಹಿರಿಯರು ಮತ್ತು ವಿಕಲ ಚೇತನರಿಗೆ ಸೌಲಭ್ಯಗಳನ್ನು ಒದಗಿಸುವ ಇಲಾಖೆ ತಮ್ಮದು. ಪ್ರತಿ ಮನೆಗೆ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.