ಐಪಿಎಲ್ ಮುಗಿದ ಬಳಿಕ ಎಂ.ಎಸ್.ಧೋನಿ ನಿವೃತಿ?
Team Udayavani, Jan 18, 2020, 11:04 AM IST
ನವದೆಹಲಿ: ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಕೇಂದ್ರ ಒಪ್ಪಂದ ಪಟ್ಟಿಯಿಂದ ಭಾರತ ಮಾಜಿ ನಾಯಕ ಎಂ.ಎಸ್.ಧೋನಿ ಕೈಬಿಡುತ್ತಿದ್ದಂತೆ ಧೋನಿ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತು ಎನ್ನುವಂತಹ ಸುದ್ದಿಗಳು ಹಬ್ಬಿದ್ದವು. ಆದರೆ ಧೋನಿ ಮುಂಬರುವ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಟಿ20 ಕ್ರಿಕೆಟ್ ಕೂಟ ಮುಗಿದ ಬಳಿಕ ಕ್ರಿಕೆಟ್ಗೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿದೆ.
ಮೂಲಗಳ ವರದಿ ಪ್ರಕಾರ ಧೋನಿ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದು ಅಲ್ಲಿ ವೈಯಕ್ತಿಕವಾಗಿ ಉತ್ತಮ ಪ್ರದರ್ಶನ ನೀಡಿದರೆ ಮುಂಬರುವ ವಿಶ್ವಕಪ್ ಟಿ20 ತಂಡದ ಆಯ್ಕೆಗೆ ಲಭ್ಯವಾಗುವ ಸೂಚನೆ ನೀಡಬಹುದು.
ಒಂದು ವೇಳೆ ಧೋನಿ ಅಂದುಕೊಂಡಂತೆ ಲೆಕ್ಕಾಚಾರಗಳು ಐಪಿಎಲ್ನಲ್ಲಿ ನಡೆಯದೆ ಹೋದರೆ, ವೈಯಕ್ತಿಕವಾಗಿ ಕಳಪೆ ಪ್ರದರ್ಶನ ಹೊರಹೊಮ್ಮಿದರೆ ಐಪಿಎಲ್ನಲ್ಲೇ ವಿದಾಯ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು