ಇಂದು ಶಿವಕುಮಾರ ಶ್ರೀ ಪುಣ್ಯ ಸಂಸ್ಮರಣೆ

Team Udayavani, Jan 19, 2020, 3:10 AM IST

indu

ತುಮಕೂರು: ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಪದ್ಮಭೂಷಣ ಲಿಂ.ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪ್ರಥಮ ವರ್ಷದ ಪುಣ್ಯ ಸಂಸ್ಮರಣೋತ್ಸವ ಭಾನುವಾರ ನಡೆಯಲಿದ್ದು, ಅದಕ್ಕಾಗಿ ಭರದ ಸಿದ್ಧತೆಗಳು ನಡೆದಿವೆ.

ಶ್ರೀಗಳು ಲಿಂಗೈಕ್ಯರಾಗಿ ಜನವರಿ 21ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶ್ರೀಗಳ ಪ್ರಥಮ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಸಿದ್ಧಗಂಗಾ ಮಠದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಮಧ್ಯೆ, ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊ ಳ್ಳಲು ರಾಜ್ಯದ ವಿವಿಧೆಡೆಯಿಂದ ಭಕ್ತರ ದಂಡೇ ಮಠದತ್ತ ಹರಿದು ಬರುತ್ತಿದೆ.

ಜ.21ರಂದು ಮಠದ ವಿದ್ಯಾರ್ಥಿಗಳಿಗೆ ರಜೆ ಇಲ್ಲದ ಕಾರಣ ಜ.19ರಂದು ಪುಣ್ಯ ಸ್ಮರಣೆ ಆಯೋಜಿಸಲಾಗಿದೆ. ಸಮಾರಂಭಕ್ಕೆ ಬರುವ ಭಕ್ತಾದಿಗಳಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ವಿದ್ಯಾರ್ಥಿಗಳು ಸಿದ್ಧರಾಗಿದ್ದಾರೆ. ಬೆಳಗ್ಗೆ 11 ಗಂಟೆಯವರೆಗೆ ಉಪ್ಪಿಟ್ಟು, ಕೇಸರಿ ಬಾತ್‌, ಕಾಫಿ, ಟೀ ವ್ಯವಸ್ಥೆ ಇರುತ್ತದೆ. ನಂತರ, 11.30 ರಿಂದ ರಾತ್ರಿ 11.30 ವರೆಗೂ ಭಕ್ತರಿಗೆ ಪಾಯಸದ ಜತೆಗೆ ಬೂಂದಿ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಮುಖ್ಯಮಂತ್ರಿಯಿಂದ ಕಾರ್ಯಕ್ರಮ ಉದ್ಘಾಟನೆ: ಭಾನುವಾರ ಬೆಳಗ್ಗೆ 10.30ಕ್ಕೆ ಪೂಜ್ಯ ಡಾ.ಶಿವಕುಮಾರ ಮಹಾಸ್ವಾಮಿಗಳವರ ಪ್ರಥಮ ಪುಣ್ಯ ಸಂಸ್ಮರಣೋತ್ಸವ ಸಮಾರಂಭ ನಡೆಯಲಿದ್ದು, ಇದರ ದಿವ್ಯ ಸಾನ್ನಿಧ್ಯವನ್ನು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ವಹಿಸುವರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರು ಮಠದ ಶ್ರೀ ಶಿವರುದ್ರ ಸ್ವಾಮೀಜಿ, ಕನಕಪುರ ದೇಗುಲ ಮಠಾಧ್ಯಕ್ಷ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ. ಸಮಾರಂಭದಲ್ಲಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಮಾಜಿ ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಸಿ.ಟಿ.ರವಿ, ಸಿ.ಸಿ.ಪಾಟೀಲ್‌, ವಿ.ಸೋಮಣ್ಣ, ಸಂಸದ ರಾದ ಜಿ.ಎಸ್‌.ಬಸವರಾಜ್‌, ವೈ.ದೇವೇಂದ್ರಪ್ಪ, ಶಾಸಕ ರಾದ ಜಿ.ಬಿ.ಜ್ಯೋತಿ ಗಣೇಶ್‌, ಡಿ.ಸಿ.ಗೌರಿಶಂಕರ್‌, ಡಾ. ಜಿ.ಪರಮೇಶ್ವರ್‌, ಎಂ.ಬಿ.ಪಾಟೀಲ್‌, ಬಸವರಾಜ ಹೊರಟ್ಟಿ, ಎಸ್‌.ಟಿ.ಸೋಮಶೇಖರ್‌, ಕೆ.ಗೋಪಾಲ ಯ್ಯ, ಜಿ.ಪಂನ ಲತಾ ರವಿಕುಮಾರ್‌, ಪಾಲಿಕೆ ಮೇಯರ್‌ ಲಲಿತಾ ರವೀಶ್‌ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಕೃತಿ ಬಿಡುಗಡೆ: ಸಮಾರಂಭದಲ್ಲಿ ಬೆಂಗಳೂರಿನ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್‌ನಿಂದ ಕಾರ್ಯಸೂಚಿ ಕೈಪಿಡಿ ವೆಬ್‌ಸೈಟ್‌ ಬಿಡುಗಡೆ ಮಾಡಲಾಗುತ್ತದೆ. ಸಿ.ಎನ್‌.ಸದಾಶಿವಯ್ಯ ವಿರಚಿತ ಶ್ರೀಗುರು ಕರುಣೆ ಮತ್ತು ನಿಷ್ಠೆ ಕೃತಿ, ಬ್ಯಾಲಕೆರೆ ಶಿವಣ್ಣ ವಿರಚಿತ ಯೋಗಾಂಗ ತ್ರಿವಿಧಿ ಮತ್ತು ಮುದ್ದೇನಹಳ್ಳಿ ನಂಜಯ್ಯ ವಿರಚಿತ ಶ್ರೀ ಶಿವಕುಮಾರ ಚರಿತೆ ಪುಸ್ತಕ ಬಿಡುಗಡೆಗೊಳ್ಳಲಿದೆ.

ಸನ್ಮಾನ: ಇದೇ ವೇಳೆ, ದೆಹಲಿಯ ಕೈಗಾರಿಕೋದ್ಯಮಿ ಮುಖೇಶ್‌ ಗರ್ಗ್‌ ಮತ್ತು ನವದೆಹಲಿ ಉಗ್ರ ನಿಗ್ರಹ ದಳದ ಅಧ್ಯಕ್ಷ ಮಣೀಂದರ್‌ ಜೀತ್‌ ಸಿಂಗ್‌ ಬಿಟ್ಟ ಅವರನ್ನು ಸನ್ಮಾನಿಸಲಾಗುತ್ತದೆ.

50 ಕೆ.ಜಿ.ಬೆಳ್ಳಿ ಪುತ್ಥಳಿ: ಶ್ರೀ ಶಿವಕುಮಾರ ಸ್ವಾಮೀಜಿಯವರ 50ಕೆ.ಜಿ.ತೂಕದ ಬೆಳ್ಳಿ ಪುತ್ಥಳಿಯನ್ನು ದೆಹಲಿ ಮೂಲದ ಕೈಗಾರಿಕೋದ್ಯಮಿ ಹಾಗೂ ಮಠದ ಅಭಿಮಾನಿಯಾದ ಮುಖೇಶ್‌ ಗರ್ಗ್‌ ಅವರು ಅರ್ಪಿಸ ಲಿದ್ದಾರೆ. 50 ಕೆ.ಜಿ. ತೂಕದ, 3 ಅಡಿ ಎತ್ತರ ದ ಶ್ರೀಗಳ ಬೆಳ್ಳಿ ಪುತ್ಥಳಿಯನ್ನು ಮುಂಬೈ ನಲ್ಲಿ ಮಾಡಿಸಿದ್ದು, ಶ್ರೀಗಳ ಗದ್ದುಗೆಯಲ್ಲಿ ಡಲು ವ್ಯವಸ್ಥೆ ಮಾಡಲಾಗಿದೆ. ಭಾನು ವಾರ ಬೆಳಗ್ಗೆ ವಿವಿಧ ಮಂಗಳವಾದ್ಯ, ಜಾನಪದ ನೃತ್ಯಗಳೊಂದಿಗೆ ಭವ್ಯ ಮೆರ ವಣಿಗೆಯಲ್ಲಿ ಇದನ್ನು ತರಲು ವ್ಯವಸ್ಥೆ ಮಾಡಲಾಗಿದೆ.

ಹಿರಿಯ ಶ್ರೀಗಳವರ ಪುಣ್ಯ ಸಮಾರಂಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಶ್ರೀಗಳು ಪ್ರಸಾದಕ್ಕೆ ಮೊದಲ ಆದ್ಯತೆ ನೀಡುತ್ತಿದ್ದರು. ಎಲ್ಲರಿಗೂ ಕುಳ್ಳಿರಿಸಿಯೇ ಪ್ರಸಾದ ನೀಡುವಂತೆ ಹೇಳುತ್ತಿದ್ದರು. ಅದಕ್ಕೆ ತಕ್ಕಂತೆ ಮಠದಿಂದ ಎಲ್ಲಾ ರೀತಿಯ ತಯಾರಿ ನಡೆದಿದೆ. ಭಕ್ತರಿಗೆ ಮಠದ ಏಳು ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದ್ದು, ಒಂದು ಬಾರಿ ಹತ್ತು ಸಾವಿರ ಜನ ಕುಳಿತು ಊಟ ಮಾಡಬಹುದು.
-ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಸಿದ್ಧಗಂಗಾ ಮಠಾಧ್ಯಕ್ಷ.

ಮಠದ ಹಿರಿಯ ಶ್ರೀಗಳ ಗದ್ದುಗೆಯಲ್ಲಿ ಅಂದು ಬೆಳಗ್ಗೆ 5 ಗಂಟೆಯಿಂದಲೇ ರುದ್ರಾಭಿಷೇಕ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ನೇತೃತ್ವದಲ್ಲಿ ವಿಧಿ-ವಿಧಾನ, ಪೂಜಾ-ಕೈಂಕರ್ಯಗಳು ನಡೆಯಲಿವೆ.
-ಡಾ.ಎಂ.ಎನ್‌.ಚನ್ನಬಸಪ್ಪ, ನಿರ್ದೇಶಕರು. ಎಸ್‌.ಐ.ಟಿ

* ಚಿ.ನಿ ಪುರುಷೋತ್ತಮ್‌

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.