ಶ್ರೀಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನ ಉದ್ಘಾಟನೆಗೆ ಸಜ್ಜು


Team Udayavani, Jan 20, 2020, 3:00 AM IST

biligiri

ಯಳಂದೂರು: ತಾಲೂಕಿನ ಪ್ರಸಿದ್ಧ ಯಾತ್ರ ಹಾಗೂ ಪೌರಾಣಿಕ ಸ್ಥಳವಾಗಿರುವ ಬಿಳಗಿರಿರಂಗನಬೆಟ್ಟದ ಶ್ರೀಬಿಳಿಗಿರಿರಂಗನಾಥಸ್ವಾಮಿ ಹಾಗೂ ಆಲಮೇಲಮ್ಮನವರ ದೇವಾಲಯದ ಉದ್ಘಾಟನೆ (ಮಹಾ ಸಂಪ್ರೋಕ್ಷಣೆಯ) ದಿನಾಂಕ ನಿಗದಿಗೊಂಡಿದ್ದು ಭಕ್ತರಲ್ಲಿ ಸಂತಸ ಮೂಡಿಸಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ, ಮೇ 27 ರಿಂದ ಜೂ.1 ರಂದು ಮಹಾಪೂಜೆ ನಡೆಯಲಿದೆ. 7 ದಿನ ವಿಶೇಷ ಪೂಜೆ ಯಜ್ಞ ಯಾಗಾದಿ, ಹೋಮ ಹವನ ಸೇರಿದಂತೆ ಇತರೆ ಪೂಜಾ ಕೈಂಕರ್ಯಗಳು ನಡೆಯಲಿವೆ.

ನೂರಾರು ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನ ಶಿಥಿಲ ಹಿನ್ನೆಲೆಯಲ್ಲಿ 2017 ಮಾರ್ಚ್‌ನಲ್ಲಿ ಪುರಾತತ್ವ ಇಲಾಖೆ ವತಿಯಿಂದ 2.40 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಕಾಮಗಾರಿ ಆರಂಭಿಸಲಾಗಿತ್ತು. ಶಿವಮೊಗ್ಗದ ಪರಂಪರಾ ಕನ್ಸಟ್ರಕ್ಷನ್‌ ಕಾಮಗಾರಿ ನಿರ್ವಹಣೆಗೆ ಮುಂದಾಗಿತ್ತು. 20 ತಿಂಗಳ ಒಳಗೆ ಕಾಮಗಾರಿ ಮುಗಿಸಬೇಕೆಂಬ ಷರತ್ತು ವಿಧಿಸಿದ್ದರೂ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. ಸುಮಾರು 3 ವರ್ಷ ಕಳೆಯುತ್ತಿದ್ದರೂ ಶೇ.80 ಕಾಮಗಾರಿ ಮುಗಿಸಲಾಗಿದೆ ಎಂದು ಇಲಾಖೆ ಹೇಳುತ್ತಿದೆ. ಆದರೆ, ಕಾಮಗಾರಿ ಇನ್ನೂ ಅಪೂರ್ಣವಾಗಿದೆ. ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕೆಲಸಗಳು ಭರದಿಂದ ಸಾಗುತ್ತಿವೆ.

ಜೀಣೋದ್ಧಾರಕ್ಕೆ ಕೈ ಜೋಡಿಸಿದ ಭಕ್ತಗಣ: ಬಿಳಿಗಿರಿರಂಗನಾಥಸ್ವಾಮಿಗೆ ಹೊರ ರಾಜ್ಯ ಸೇರಿದಂತೆ ದೇಶ ವಿದೇಶಗಳಲ್ಲೂ ಅನೇಕ ಭಕ್ತರು ಇದ್ದಾರೆ. ಕೆಲವು ಭಕ್ತರು ತಮ್ಮ ಸ್ವಂತ ಖರ್ಚಿನಲ್ಲೇ ಕಾಮಗಾರಿ ನಡೆಸಲು ಮುಂದಾಗಿದ್ದಾರೆ. ಹೊಸ ರಾಜಗೋಪುರದಲ್ಲಿ ಕೆತ್ತನೆ ಮಾಡಿದ್ದ ಶಿಲ್ಪಗಳು ಶಿಥಿಲವಾಗಿದ್ದು ಇದನ್ನೂ ದುರಸ್ತಿ ಮಾಡಿಸಲು ತಮಿಳು ನಾಡಿನ ಶಿಲ್ಪಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು ಕಾಮಗಾರಿ ಭರದಿಂದ ಸಾಗಿದೆ. ಇದನ್ನು ಖಾಸಗಿ ವ್ಯಕ್ತಿಗಳೇ ತಮ್ಮ ಸ್ವಂತ ಖರ್ಚಿನಿಂದ ಕಾಮಗಾರಿ ಮಾಡಿಸುತ್ತಿರುವುದು ವಿಶೇಷ. ಅಲ್ಲದೆ ವಿದ್ಯುತ್‌ ಸಂಪರ್ಕವನ್ನೂ ಬೆಂಗಳೂರಿನ ಭಕ್ತರೊಬ್ಬರು ಮಾಡಿಸುತ್ತಿದ್ದಾರೆ. ಯಜ್ಞ ಶಾಲೆಗೂ ಕೆಲ ವ್ಯಕ್ತಿಗಳು ದಾನ ನೀಡಿ ಈ ಕಾಮಗಾರಿ ಪೂರ್ಣಗೊಳಿಸಲು ಅನುವು ಮಾಡಿಕೊಟ್ಟಿದ್ದಾರೆ.

ಮೇ ಒಳಗೆ ದೇಗುಲದ ಕಾಮಗಾರಿ ಪೂರ್ಣಗೊಂಡು, ಮೇ27 ರಿಂದ ಜೂ.1 ರಂದು ಮಹಾಪೂಜೆ ನಡೆಯಲಿದೆ. 7 ದಿನ ವಿಶೇಷ ಪೂಜೆ ಯಜ್ಞ ಯಾಗಾದಿ, ಹೋಮ ಹವನವನ್ನು ಆಗಮಿಕರ ವಿಶೇಷ ತಂಡ ನಿರ್ವಹಿಸಲಿದೆ. ಅಂತಿಮವಾಗಿ ಎಲ್ಲಾ ಪೂಜೆ ಮುಗಿದ ನಂತರ ಜೂ.3ರಿಂದ ದೇವಸ್ಥಾನದಲ್ಲಿ ಶ್ರೀ ಬಿಳಿಗಿರಿರಂಗನಾಥಸ್ವಾಮಿ ಮೂಲ ದೇವರ ದರ್ಶನ ಭಾಗ್ಯ ಭಕ್ತರಿಗೆ ದೊರೆಯಲಿದೆ ಎಂದು ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್‌ ಪ್ರಸಾದ್‌ ತಿಳಿಸಿದ್ದಾರೆ.

ದೇಗುಲ ಜೀರ್ಣೋದ್ಧಾರ ಕಾಮಗಾರಿ ಸೇರಿದಂತೆ ನೆಲಹಾಸು, ವಿಮಾನಗೋಪುರ, ವಿದ್ಯುತ್‌, ಬಾಗಿಲು, ಯಜ್ಞಶಾಲೆ, ಬಣ್ಣ ಹಚ್ಚುವ ಕೆಲಸಗಳು ಬಾಕಿ ಇದೆ. ಈ ಕಾಮಗಾರಿಗಳು ತರಾತುರಿಯಲ್ಲಿ ನಿರ್ಮಾಣ ಮಾಡದೇ ಗುಣಮಟ್ಟದಿಂದ ಮುಗಿಸುವ ನಿಟ್ಟಿನಲ್ಲಿ ಮುಂದಾಗಬೇಕಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಹೆಚ್ಚಿನ ಕಾಳಜಿ ವಹಿಸಲು ಗಮನ ನೀಡಲಾಗುವುದು.
-ಆಲ್ದೂರು ರಾಜಶೇಖರ್‌, ಬಿಳಿಗಿರಿರಂಗನಾಥಸ್ವಾಮಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ

* ಫೈರೋಜ್‌ ಖಾನ್‌

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.