ನಿಗಮದ ಸೌಲಭ್ಯ ಎಲ್ಲರಿಗೂ ತಲುಪಲಿ


Team Udayavani, Jan 20, 2020, 4:16 PM IST

KOPALA-TDY-2

ಕೊಪ್ಪಳ: ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳು ಎಲ್ಲ ಮಹಿಳೆಯರಿಗೂ ತಲುಪಲಿ. ಅವರು ಬದುಕು ಕಟ್ಟಿಕೊಳ್ಳಲು ನೆರವಾಗಬೇಕು. ಅಂದಾಗ ಮಾತ್ರ ಯೋಜನೆ ಜಾರಿ ತಂದಿದ್ದು ಸಾರ್ಥಕವಾಗಲಿದೆ. ಅದಕ್ಕಾಗಿ ನಿಗಮವು ಸದಾ ಸಿದ್ಧವಿದೆ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳೆ ಹೇಳಿದರು.

ನಗರದ ಜಿಪಂ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ರವಿವಾರ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳು ಹಾಗೂ ಮಹಿಳೆಯರೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗ ಹಿಂದುಳಿದಿದೆ ಎಂದು ರಾಜ್ಯ ಸರ್ಕಾದ ಅರಿತಿದೆ. ನಾನು ಇದೇ ಭಾಗದವಳು. ಇಲ್ಲಿನ ಸಮಸ್ಯೆಗಳ ಅರಿವಿದೆ. ಗ್ರಾಪಂ, ತಾಪಂ, ಜಿಪಂ ಹಂತದಲ್ಲಿ ಮಹಿಳಾ ಸಮಸ್ಯೆ ಏನಿದೆ ಎನ್ನುವುದು ಗೊತ್ತು. ಮಹಿಳೆ ನಮ್ಮ ನಿಗಮ್ಮೆ ಬಂದು ತನ್ನ ನೋವು ಹೇಳದ ಸ್ಥಿತಿಯಲ್ಲಿದ್ದಾಳೆ. ನಾವು ಅವರ ನೆರವಿಗೆ ಬರಲಿದ್ದೇವೆ. ಸಬ್ಸಿಡಿಗಾಗಿ ಲಾಭ ಪಡೆಯಬೇಡಿ. ನಮ್ಮಲ್ಲಿ ಛಲ ಇರಬೇಕು. ಗಟ್ಟಿತನ ಇರಬೇಕು. ಛಲದಿಂದ ಮುಂದೆ ಬರಬೇಕು. ನಿಗಮದಿಂದ ಸರ್ಕಾರ ಹಲವು ಯೋಜನೆ ಜಾರಿ ಮಾಡಿದೆ. ಕಾಟಾಚಾರಕ್ಕೆ ಯೋಜನೆ ಲಾಭ ಪಡೆದು ಕೈ ಬಿಡಬೇಕು. ನಿಗಮ ನಿಮ್ಮ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ. ಉಪವಾಸ ಇದ್ದವರಿಗೆ ಊಟ ಮಾಡಿಸುವುದು ನಮ್ಮ ನಿಗಮದ ಗುರಿಯಾಗಿದೆ. ಸಣ್ಣ ಯಂತ್ರ ಇಟ್ಟು ಜೀವನ ಕಟ್ಟುವ ಕೆಲಸ ಮಾಡಲು ನಿಗಮವು ನೆರವಾಗಲಿದೆ ಎಂದರು.

ಒಬ್ಬರೂ ಇನ್ನೊಬ್ಬರಿಗೆ ಸೌಲಭ್ಯ ಪಡೆಯಲು ತಿಳಿಸಬೇಕು. ಸಾಮಾಜಿಕ ಕಾರ್ಯಕರ್ತರಾಗಿ ಕೆಲಸ ಮಾಡಬೇಕು. ಇಲ್ಲಿ ದೇವದಾಸಿಮಹಿಳೆಯರೂ ಇದ್ದಾರೆ. ಅವರು ಇಂದಿಗೂ ಶೆಡ್‌ನ‌ಲ್ಲೇ ಜೀವನ ನಡೆಸುತ್ತಿದ್ದಾರೆ. ಈ ಬಗ್ಗೆ ನಿಗಮವೂ ಯೋಚನೆ ಮಾಡಿದೆ. ದೇವದಾಸಿಯರಿಗೆ ನಿವೇಶನ ಕೊಡಲು ಕ್ರಮ ವಹಿಸಲಾಗುವುದು. ನಿಗಮದಿಂದ ಬರುವ ಬಜೆಟ್‌ನಲ್ಲಿ ನಿವೇಶನದ ಕುರಿತು ಚರ್ಚೆ ಮಾಡಲಾಗುವುದು. ಮೊದಲು ಹೈಕ ಭಾಗದಲ್ಲಿ ಪ್ರವಾಸ ಹಮ್ಮಿಕೊಂಡಿದೆ ಎಂದರು.

ಸಭೆಗೆ ಆಗಮಿಸಿದ್ದ ಹಲವು ಮಹಿಳೆಯರು ತಮಗೆ ನಿಗಮದಿಂದ ತುಂಬ ನೆರವಾಗುತ್ತಿದೆ ಎನ್ನುತ್ತಿದ್ದರೆ, ಹಲವರು ನಾವು ಇನ್ನೂ ಬಾಡಿಗೆ ಮನೆಯಲ್ಲಿದ್ದೇವೆ. ನಮಗೆ ನಿಗಮದಿಂದ ನಿವೇಶನ ಕೊಡಿಸಿ, ಮನೆಗಳನ್ನು ಕಟ್ಟಿಸಿಕೊಡಿ ಇದರಿಂದ ನಮಗೆ ಆಸರೆಯಾಗಲಿದೆ. ದುಡಿಮೆ ಮಾಡಿಕೊಂಡು ಜೀವನಕ್ಕೆ ದಾರಿ ಕಾಣಲಿದ್ದೇವೆ ಎಂದು ಅಧ್ಯಕ್ಷರ ಗಮನಕ್ಕೆ ತಂದರು.

ಕಾರ್ಯಕ್ರಮದಲ್ಲಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಪ್ರೇಮಲತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರೇಂದ್ರ ನಾವದಗಿ, ಮಧುರಾ ಕರಣಂ, ದೇವದಾಸಿ ಪುನರ್ವಸತಿ ಯೋಜನಾ ಧಿಕಾರಿ ಗೋಪಾಲ್‌ ನಾಯಕ್‌, ಅಭಿವೃದ್ಧಿ ಅಧಿ ಕಾರಿ ಕೃಷ್ಟ ಬಾಕಳೆ, ಅಧಿಕಾರಿ ಜಯಶ್ರೀ ಸೇರಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.