ಶೀಘ್ರದಲ್ಲೇ ಏತನೀರಾವರಿ ಯೋಜನೆ ಪೈಪ್‌ ಲೈನ್‌ ಅಳವಡಿಕೆ


Team Udayavani, Jan 22, 2020, 3:00 AM IST

shigradalle

ಚನ್ನರಾಯಪಟ್ಟಣ/ಬಾಗೂರು: ಕಲ್ಲೆಸೋಮನಹಳ್ಳಿ ಏತನೀರಾವರಿ ಯೋಜನೆಯ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಶಾಸಕ ಸಿ.ಎನ್‌.ಬಾಲಕೃಷ್ಣ ತಿಳಿಸಿದರು.

580 ಎಚ್‌ಪಿ ಸಾಮರ್ಥ್ಯದ ಯಂತ್ರ ಅಳವಡಿಕೆ: ತಾಲೂಕಿನ ಬಾಗೂರು ಹೋಬಳಿನಾಲೆ ಸಮೀಪ ಪೈಪ್‌ಗ್ಳಿಗೆ ಪೂಜೆ ನೆರವೇರಿಸಿ ಮಾತನಾಡಿದ ಅವರು, 32 ಕೋಟಿ ರೂ. ವೆಚ್ಚದ 19 ಕೆರೆಗಳಿಗೆ 22 ಕ್ಯೂಸೆಕ್‌ ನೀರು ಹರಿಸುವ ಕಲ್ಲೆಸೋಮನಹಳ್ಳಿ ಏತನೀರಾವರಿ ಯೋಜನೆಗೆ ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ. ಸುಮಾರು 580 ಎಚ್‌ಪಿ ಸಾಮರ್ಥ್ಯದ ಮೂರು ನೀರು ಎತ್ತುವ ಯಂತ್ರಗಳನ್ನು ಅಳವಡಿಸಲಾಗುವುದು. ಎಂ.ಕೆ.ಹೊಸೂರು ಮಾರ್ಗದಿಂದ ಸುಮಾರು 10 ಕಿ.ಮೀ. ಪೈಪ್‌ಲೈನ್‌ ಮೂಲಕ ನೀರು ಹರಿಸಲಾಗುವುದು ಎಂದು ಹೇಳಿದರು.

ಈ ಯೋಜನೆಯಿಂದ ಬಿದರೆ, ಚಿಕ್ಕರಸನಹಳ್ಳಿ, ಕೆಂಬಾಳು, ಎಂ.ಶಿವರ, ತಗಡೂರು, ಹೊಂಗೇಹಳ್ಳಿ, ಮರಗೂರು, ಕಾಮನಹಳ್ಳಿ, ಕಾಳಮಾರನಹಳ್ಳಿ, ಮಾದಗುಡ್ಡನಹಳ್ಳಿ, ಬಳಗಟ್ಟೆ, ದರಸಿಹಳ್ಳಿ, ಕಲ್ಲೆಸೋಮನಹಳ್ಳಿ, ಹಲಸಿನಹಳ್ಳಿಗಳ ಕೆರೆಗಳು ತುಂಬಲಿವೆ. ಇದರಿಂದ ಬಾಗೂರು ಹೋಬಳಿಯ ಕುಡಿಯುವ ನೀರಿನ ಅಂತರ್ಜಲ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ತಿಳಿಸಿದರು.

20 ತಿಂಗಳಿನಲ್ಲಿ ಕಾಮಗಾರಿ ಪೂರ್ಣ: ಇಪತ್ತು ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳಿಸಲು ಎಂಜಿನಿಯರ್‌ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ. ಕಾಮಗಾರಿ ಪೂರ್ಣಗೊಳಿಸಿದರೆ ಕೇವಲ ನೂರು ದಿನದಲ್ಲಿ 19 ಕೆರೆಗಳಿಗೆ ನೀರು ತುಂಬಿಸಬಹುದಾಗಿದೆ. ನವಿಲೆ ಏತನೀರಾವರಿ ಯೋಜನೆಯ ಬಲವರ್ಧನೆಗೆ 9 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಅಂತರ್ಜಲ ಸಮಸ್ಯೆ ನಿವಾರಣೆ: ತೋಟಿ, ಆಲಗೊಂಡನಹಳ್ಳಿ, ಹಿರಿಸಾವೆ ಏತನೀರಾವರಿ ಯೋಜನೆಯ ಕಾಮಗಾರಿಗಳು ಪೂರ್ಣಗೊಂಡರೆ ತಾಲೂಕಿನಲ್ಲಿ ಶೇ.80ರಷ್ಟು ಅಂತರ್ಜಲ ಸಮಸ್ಯೆ ನಿವಾರಣೆಯಾಗುತ್ತದೆ. ನಾಕನಕೆರೆ ಮೂಲಕ ಕಬ್ಬಳಿ ದಿಡಗ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲು ಕಾನೂನು ಬದ್ಧವಾಗಿ ಡಿಪಿಆರ್‌ ಮಾಡಿಸಲಾಗಿದೆ ನೀರಾವರಿ ಮಂತ್ರಿಗಳಿಗೆ ಇದನ್ನು ಇಲಾಖೆ ಮೂಲಕ ತಲುಪಿಸಲಾಗಿದೆ ಎಂದು ನುಡಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ವಿ.ಎನ್‌.ಮಂಜುನಾಥ್‌, ಕೆಂಬಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್‌, ಗ್ರಾಪಂ ಸದಸ್ಯ ನಂಜುಂಡಪ್ಪ, ಮುಖಂಡರಾದ ವೆಂಕಟೇಶ್‌, ನಾಗೇಶ್‌, ದೇವರಾಜು, ನವೀನ, ಎನ್‌.ಬಿ.ನಾಗರಾಜು, ನಾಗರಾಜು, ಎನ್‌.ಎಸ್‌.ಗಿರೀಶ್‌, ಡಿ.ಆರ್‌.ದೇವರಾಜು, ನಂಜೇಶ್‌ಗೌಡ, ಕಿಟ್ಟಿ, ಡಿ.ಕೆ.ದಿನೇಶ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.