ರೈತರಿಲ್ಲದೇ ಬಿಕೋ ಎನ್ನುತ್ತಿದೆ ರಾಗಿ ಖರೀದಿ ಕೇಂದ್ರ

Team Udayavani, Jan 22, 2020, 12:22 PM IST

dg-tdy-2

ಜಗಳೂರು: ಪಹಣಿಯಲ್ಲಿನ ಕೆಲವು ನ್ಯೂನ್ಯತೆಗಳಿಂದಾಗಿ ರಾಗಿ ಖರೀದಿ ಕೇಂದ್ರದ ಹತ್ತಿರ ರೈತರು ಸುಳಿಯದಂತಾಗಿದ್ದು, ರಾಗಿ ಖರೀದಿಗೆ ಇರುವ ನಿಯಮಗಳನ್ನು ಸಡಿಲಗೊಳಿಸಿದರೆ ಮಧ್ಯವರ್ತಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಸರಕಾರ ರಾಗಿ ಖರೀದಿ ಕೇಂದ್ರ ಪ್ರಾರಂಭಿಸಿದ್ದು, 3150 ರೂ. ಬೆಂಬಲ ಬೆಲೆ ನಿಗದಿಪಡಿಸಿದೆ. ಆದರೆ 20 ದಿನ ಕಳೆದರೂ ಕೇಂದ್ರದಲ್ಲಿ ಕೇವಲ 8 ಜನ ಮಾತ್ರ ಹೆಸರು ನೋಂದಾಯಿಸಿದ್ದಾರೆ. ತಾಲೂಕಿನಾದ್ಯಂತ 13 ಸಾವಿರಕ್ಕೂ ಅಧಿಕ ಎಕರೆ ರಾಗಿ ಬಿತ್ತನೆ ಪ್ರದೇಶವಿದ್ದು, ಸುಮಾರು 1200 ರಿಂದ 1400 ರೈತರು ರಾಗಿ ಬೆಳೆದಿದ್ದಾರೆ. ಮುಂಗಾರು ಹಂಗಾಮಿನಲ್ಲಿ ದಾಖಲೆ ನೀಡಿ ಮೆಕ್ಕೆಜೋಳ, ಕಡಲೆ ಮುಂತಾದ ಬೀಜಗಳನ್ನು ಖರೀದಿಸಿದ ರೈತರು ರಾಗಿ ಬಿತ್ತನೆ ಮಾಡಿದ್ದಾರೆ. ಪಹಣಿಯಲ್ಲಿ ರಾಗಿ ಎಂದು ನಮೂದಾಗಿದ್ದರೆ ಮಾತ್ರ ಖರೀದಿ ಕೇಂದ್ರದ ಕಂಪ್ಯೂಟರ್‌ನಲ್ಲಿ ಯಶಸ್ವಿಯಾಗಿ ಹೆಸರು ನೋಂದಾವಣೆಯಾಗುತ್ತದೆ. ಆದರೆ ಸುಮಾರು ರೈತರ ಪಹಣೆಯಲ್ಲಿ ಮೆಕ್ಕೆಜೋಳ. ಶೇಂಗಾ, ಸಜ್ಜೆ, ಜೋಳ ಎಂದು ನಮೂದಾಗಿರುವುದರಿಂದ ಖರೀದಿ ಕೇಂದ್ರದ ತಂತ್ರಾಂಶದಲ್ಲಿ ಹೆಸರು ನೋಂದಾವಣೆಯಾಗದೇ ರೈತರು ರಾಗಿಮಾರಾಟ ಮಾಡದಂತಾಗಿದೆ.

ಹಂಗಾಮುವಾರು ಬೆಳೆ ಸಮೀಕ್ಷೆ ಕಾರ್ಯವನ್ನು ಕೃಷಿ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ನಡೆಸಿದ್ದು, ಇವರು ಕ್ಷೇತ್ರಕ್ಕೆ ತೆರಳಿ ಸಮರ್ಪಕವಾಗಿ ಸಮೀಕ್ಷೆ ನಡೆಸದೆ ಎಲ್ಲೋ ಕುಳಿತು ಮೊಬೈಲ್‌ನಲ್ಲಿ ಬೆಳೆ ನಮೂದಿಸಿದ್ದಾರೆ ಎಂಬ ದೂರುಗಳು ಕೂಡ ರೈತರಿಂದ ಕೇಳಿ ಬರುತ್ತಿವೆ.

ಮಧ್ಯವರ್ತಿಗಳಿಂದ ಲಾಭದ ಹುನ್ನಾರ?: ಇದನ್ನೆ ಬಂಡವಾಳವಾಗಿಸಿಕೊಂಡಿರುವ ಕೆಲವು ಮಧ್ಯವರ್ತಿಗಳು ಖರೀದಿಗೆ ಇರುವ ನಿಯಮಗಳನ್ನು ಸಡಿಲಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ ಮೇಲೆ ಕೆಲವು ಸಂಘಟನೆಗಳ ಮೂಲಕ ಒತ್ತಡ ಹಾಕುವಂತಹ ತಂತ್ರಗಳನ್ನು ಮಾಡುತ್ತಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಸರಕಾರ ಇರುವ ನಿಯಮವನ್ನು ಸಡಿಲಗೊಳಿಸಿದರೆ ಲಾಭ ರೈತರಿಗೆ ದೊರೆಯದೆ ಮಧ್ಯವರ್ತಿಗಳ ಪಾಲಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಏಕೆಂದರೆ ತಾಲೂಕಿನದ್ಯಾಂತ ರಾಗಿ ಬೆಳೆ ಉತ್ತಮ ಇಳುವರಿ ಬಂದಿದ್ದು, ದಲ್ಲಾಳಿಗಳು ಈಗಾಗಲೇ 1800 ರಿಂದ 2000 ರೂ. ನಂತೆ ರಾಗಿ ಖರೀದಿಸಿ ಗೊದಾಮುಗಳಲ್ಲಿ ನೂರಾರು ಚೀಲ ಶೇಖರಿಸಿದ್ದಾರೆ.

ಸರಕಾರ ನಿಯಮಗಳನ್ನು ಸಡಿಲಗೊಳಿಸಿದರೆ ಮಧ್ಯವರ್ತಿಗಳು ಖರೀದಿ ಕೇಂದ್ರದಲ್ಲಿ ತಮ್ಮ ದಾಸ್ತಾನು ಮಾರಿಕೊಂಡು ಲಕ್ಷಗಟ್ಟಲೆ ಆದಾಯ ಗಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ರೈತರು ರಾಗಿ ಬೆಳೆದಿದ್ದು ಪಹಣಿಯಲ್ಲಿ ಇತರೆ ಬೆಳೆ ಎಂದು ನಮೂದಾಗಿದ್ದರೆ ಆಕ್ಷೇಪಣೆ ಸಲ್ಲಿಸಲು ಸರಕಾರ ಅವಕಾಶ ನೀಡಿದ್ದು, ಆಕ್ಷೇಪಣೆ ಸಲ್ಲಿಸಿದ ರೈತನ ಜಮೀನುಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರೆ ನಿಜಾಂಶ ತಿಳಿಯಲಿದೆ ಎನ್ನುತ್ತಾರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್‌.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.