“ಆರ್ಥಿಕ ಗಣತಿ ಕುರಿತು ಜನರಿಗೆ ಸಂಕ್ಷಿಪ್ತ ಮಾಹಿತಿ ನೀಡಿ’

ಆರ್ಥಿಕ ಗಣತಿ ಕಾರ್ಯಾಚರಣೆ; ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆ

Team Udayavani, Jan 25, 2020, 8:30 PM IST

ras-18

ಮಹಾನಗರ: ಆರ್ಥಿಕ ಗಣತಿಯ ಕುರಿತು ಜನರಿಗೆ ಮಾಹಿತಿ ನೀಡಬೇಕು. ಮೊಬೈಲ್‌ ಆ್ಯಪ್‌ ಮೂಲಕ ಕ್ಷೇತ್ರ ಕಾರ್ಯ ನಡೆಸಲಾಗುತ್ತಿರುವು ದರಿಂದ ಸವಿವರವಾದ ಮಾಹಿತಿಯನ್ನು ಜನರಿಗೆ ಜಾಗೃತಿ ಕಾರ್ಯಕ್ರಮಗಳ ಮೂಲಕ ತಲುಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ ಹಾಲ್‌ನಲ್ಲಿ 7ನೇ ಆರ್ಥಿಕ ಗಣತಿ ಕಾರ್ಯಾಚರಣೆಯ ಸಂಯೋಜನೆಗೆ ಗುರುವಾರ ನಡೆದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್ಥಿಕ ಗಣತಿಯ ಕುರಿತು ತಾಲೂಕು ಮಟ್ಟದಲ್ಲಿ ಸಭೆ ಕರೆದು ಪ್ರತೀ ತಾಲೂಕು ತಹಶೀಲ್ದಾರರು, ತಾ.ಪಂ. ಅಧಿಕಾರಿಗಳು, ತಾಲೂಕು ಮಟ್ಟದ ಪೊಲೀಸ್‌ ಅ ಧಿಕಾರಿಗಳನ್ನು ಒಳಗೊಂಡು ಚರ್ಚಿಸಬೇಕು. ಆರ್ಥಿಕ ಗಣತಿಯ ಮುಖ್ಯ ಉದ್ದೇಶ ಏನು, ಯಾವ ಕಾರಣಕ್ಕಾಗಿ ಈ ಗಣತಿ ಮಾಡಲಾಗುತ್ತದೆ, ಮತ್ತು ಯಾವ ಪ್ರಶ್ನೆಗಳನ್ನು ಯಾಕೆ ಕೇಳಲಾಗುತ್ತದೆ ಎಂಬುದನ್ನು ಮೊದಲು ಜನರಿಗೆ ಮನವರಿಕೆ ಮಾಡಬೇಕು. ಇದೇ ಮೊದಲ ಬಾರಿಗೆ ಗಣತಿ ಕಾರ್ಯ ವನ್ನು ಮೊಬೈಲ್‌ ಆ್ಯಪ್‌ ಮೂಲಕ ಕೈಗೊಳ್ಳ ಲಾಗಿರುತ್ತದೆ. ಆ್ಯಪ್‌ನ ವೈಶಿಷ್ಟಗಳು ಯಾವುದು, ಅದನ್ನು ಉಪಯೋಗಿಸುವ ಕ್ರಮಗಳು ಯಾವುದು ಎಂಬ ಪ್ರತಿ ಮಾಹಿತಿ ಜನರಿಗೆ ದೊರಕಬೇಕು ಎಂದರು.

ಜನರು ಮಾಹಿತಿ ನೀಡಲು ಹಿಂಜರಿದರೆ ವಿಶೇಷವಾಗಿ ಆರ್ಥಿಕ ಗಣತಿಯ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನೀಡಿ ಗಣತಿಗೆ ಸ್ಪಂದನೆ ನೀಡುವಂತೆ ಕಾರ್ಯ ನಿರ್ವಹಿಸಬೇಕು. ಗಣತಿಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಚುರುಕಾಗಿ ಆಸಕ್ತಿಯಿಂದ ಈ ಗಣತಿಯನ್ನು ಯಶಸ್ವಿಯಾಗಿಸಬೇಕು ಎಂದರು. ಪುತ್ತೂರು ತಹಶೀಲ್ದಾರ್‌ ರಾಹುಲ್‌ ಶಿಂಧೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿ ಕಾರಿ ಡಾ| ಉದಯ ಶೆಟ್ಟಿ, ಸಹಾಯಕ ಸಾಂಖೀಕ ಅಧಿಕಾರಿ ಎ.ಡಿ. ಬೋಪಯ್ಯ, ವಿವಿಧ ತಾಲೂಕು ಅಧಿಕಾರಿಗಳು, ತಹಶೀಲ್ದಾರರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಉತ್ತಮ ಸಹಕಾರ ನೀಡುವಂತೆ ಮಾಹಿತಿ ಪಡೆಯಬೇಕು
7ನೇ ಆರ್ಥಿಕ ಗಣತಿಯಲ್ಲಿ ಕಟ್ಟಡದ ವಿಧ, ಕುಟುಂಬ ವಿವರ, ಸಾಮಾಜಿಕ ಗುಂಪು ಮತ್ತು ಧರ್ಮ, ಆರ್ಥಿಕ ಚಟುವಟಿಕೆಯ ವಿಧ, ಕಾರ್ಯವಿಧಾನ ಸ್ವರೂಪ, ಮನೆಯಲ್ಲಿ ಆರ್ಥಿಕ ಚಟುವಟಿಕೆ ನಡೆಸುವ ಸದಸ್ಯರ ವಿವರ, ಹಣಕಾಸಿನ ಮೂಲ, ಹೂಡಿಕೆ, ವಾರ್ಷಿಕ ವ್ಯವಹಾರ, ಕೆಲಸಗಾರರ ಸಂಖ್ಯೆ, ಘಟಕದ ನೋಂದಣಿಯ ವಿವರ, ಉದ್ಯಮ ಮಾಲಕರ ಲಿಂಗವಾರು ಸಾಮಾಜಿಕ ಗುಂಪುವಾರು ಮಾಹಿತಿಗಳು, ಗಂಡು ಹೆಣ್ಣು ಕೆಲಸಗಾರರು, ಮಜೂರಿದಾರ ಕೆಲಸಗಾರರು, ಮಜೂರಿದಾರರಲ್ಲದ ಕೆಲಸ ಗಾರರು ಇವರ ಉದ್ದಿಮೆಗಾಗಿ ಹಣಕಾಸಿನ ಮೂಲ ಇತ್ಯಾದಿ ಮಾಹಿತಿಗಳು ಈ ಗಣತಿಯಲ್ಲಿ ಸಂಗ್ರಹವಾಗುತ್ತವೆೆ. ಗಣತಿ ಸಂದರ್ಭದಲ್ಲಿ ಉತ್ತಮವಾದ ಸಹಕಾರ ನೀಡುವಂತೆ ಮಾಹಿತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.