ಕೃಷಿ ಡಾಕ್ಟರ್‌: ಸಮಸ್ಯೆಗೊಂದು ಪರಿಹಾರ

Team Udayavani, Jan 27, 2020, 6:00 AM IST

krushi-doc

ನನ್ನ ಒಂದು ಎಕರೆಯ ಹೊಲ ಕೆಂಪು ಮಿಶ್ರಿತ ಮಣ್ಣಿನಿಂದ ಕೂಡಿದೆ. ಬೇಸಗೆಯಲ್ಲಿ ಆ ಕಲ್ಲಂಗಡಿ ಬೆಳೆಯನ್ನು ಬೆಳೆಯಬೇಕೆಂದಿದ್ದೇನೆ.
– ರಾಜಸಾಬ ನಧಾಪ, ಶಿಕಾರಿಪುರ
ಕಲ್ಲಂಗಡಿ ಹಣ್ಣು ಬೆಳೆಯಲು ಈ ಮಣ್ಣು ಅತ್ಯಂತ ಸೂಕ್ತವಾಗಿದೆ. ಬೇಸಗೆಯಲ್ಲಿ ಈ ಬೆಳೆಗೆ ಹೆಚ್ಚಿನ ಲಾಭವನ್ನು ಪಡೆಯಬಹುದು. ಕಲ್ಲಂಗಡಿ ಬೆಳೆಗೆ ಹೆಚ್ಚಿನ ಪ್ರಮಾಣದಲ್ಲಿ ಬಿಸಿಲು ಇರುವ ಉಷ್ಣ ವಲಯದ ವಾತಾವರಣ ಹೊಂದುತ್ತದೆ. ನವೆಂಬರ್‌ನಿಂದ ಫೆಬ್ರವರಿ ತಿಂಗಳಲ್ಲಿ ಬೆಳೆದರೆ ಹಣ್ಣುಗಳು ತುಂಬಾ ಚೆನ್ನಾಗಿ ಬರುತ್ತವೆ. ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಬಿಡುಗಡೆಗೊಳಿಸಿರುವ ತಳಿಗಳಾದ ಅರ್ಕಾ ಮುತ್ತು, ಅರ್ಕಾ ಆಕಾಶ, ಅರ್ಕಾ ಐಶ್ವರ್ಯ, ಅರ್ಕಾ ಮಾಣಿಕ್‌, ಅರ್ಕಾ ಮಧುರ ತಳಿಗಳು ಹಾಗೂ ಖಾಸಗಿ ಹೈಬ್ರಿಡ್‌ ಕಲ್ಲಂಗಡಿಗಳನ್ನು ಬೆಳೆಯಬಹುದು. ನಿಮ್ಮ ಒಂದು ಎಕರೆಗೆ ತಳಿಗಳಾದರೆ 300 ಗ್ರಾಂ ಬೀಜ ಬೇಕು. ಹೈಬ್ರಿಡ್‌ ತಳಿಯಾದರೆ 120 ಗ್ರಾಂ ಬೀಜ ಸಾಕು. ಎಕರೆಗೆ 10 ಟನ್‌ ತಿಪ್ಪೆ ಗೊಬ್ಬರ ಹಾಕಿದ ನಂತರ 2.5 ರಿಂದ 3.00 ಮೀ ಅಂತರದ ಸಾಲುಗಳಲ್ಲಿ 1 ಮೀ. ಅಂತರದಲ್ಲಿ ಪ್ರತಿ ಗುಣಿಗೆ 3- 4 ಬೀಜಗಳಂತೆ ಬಿತ್ತಬೇಕು. 2- 3 ವಾರಗಳ ನಂತರ ಪ್ರತಿ ಮಡಿಯಲ್ಲಿ 2 ಸಸಿಗಳನ್ನು ಕೀಳಬೇಕು. ಬಿತ್ತುವಾಗ ಎಕರೆಗೆ 20 ಕೆ.ಜಿ. ಸಾರಜನಕವನ್ನು ಮೇಲು ಗೊಬ್ಬರವಾಗಿ ಸಸಿಯಿಂದ 15 ಸೆಂ.ಮೀ. ಪಕ್ಕದಲ್ಲಿ ಮತ್ತು 2.5 ಸೆಂ.ಮೀ. ಆಳದಲ್ಲಿ ನೀಡಿ ಮಣ್ಣು ಮುಚ್ಚಬೇಕು. ಬೀಜ ಹಾಕಿದ 20 ದಿನಗಳ ನಂತರ ಮುಖ್ಯ ಕುಡಿಗಳನ್ನು ಚಿವುಟುವುದರಿಂದ ಹೆಚ್ಚು ಮಗ್ಗಲು ಇಲಕುಗಳನ್ನು ಬಿಡುವುದು. ಪ್ರತಿ ಕಲ್ಲಂಗಡಿ ಬಳ್ಳಿಗೆ 3- 4 ಕಾಯಿ ಬಿಟ್ಟು ಉಳಿದ ಕಾಯಿಗಳನ್ನು ಕಿತ್ತುಹಾಕಬೇಕು. ಮಣ್ಣು, ನೀರು ಹಾಗೂ ವಾತಾವರಣ ಆಧರಿಸಿ ಪ್ರತಿ 4- 6 ದಿನಗಳಿಗೊಮ್ಮೆ ನೀರು ಕೊಡಿ. ಎಕರೆಗೆ ಒಂದು ಜೇನುಪೆಟ್ಟಿಗೆ ಇಡುವುದರಿಂದ ಕಲ್ಲಂಗಡಿ ಇಳುವರಿ ಹೆಚ್ಚಿಸಬಹುದು. ಈ ಬೆಳೆಗೆ ಗಂಧಕಯುಕ್ತ ಔಷಧಿಗಳನ್ನು ಈ ಬೆಳೆಗೆ ಬಳಸಬಾರದು.

* ಡಾ. ಅಶೋಕ್‌ ಪಿ., ಕೃಷಿ ವಿಜ್ಞಾನಿ, ಹಾವೇರಿ

ಟಾಪ್ ನ್ಯೂಸ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.