ಬಿಸಿಯೂಟಕ್ಕಿಲ್ಲಿ ಕಟ್ಟಿಗೆಯೇ ಗತಿ!

Team Udayavani, Jan 31, 2020, 5:10 PM IST

kopala-tdy-1

ದೋಟಿಹಾಳ: ಶೈಕ್ಷಣಿಕ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸರ್ವ ಶಿಕ್ಷಣ ಅಭಿಯಾನ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ವಿವಿಧ ಯೋಜನೆ ಜಾರಿಗೆ ತಂದಿವೆ.

ಆದರೆ ಹುಲಸಗೇರಿ ಪ್ರಾಥಮಿಕ ಶಾಲೆ ಮಾತ್ರ ಸೌಲಭ್ಯವಿಲ್ಲದೇ ಬಳಲುತ್ತಿದೆ. ಹುಲಸಗೇರಿ ಸರಕಾರಿ ಪ್ರಾಥಮಿಕ ಶಾಲೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ಸರಿಯಾದ ಅಡುಗೆ ಕೊಠಡಿಯಿಲ್ಲ. ಸಿಲಿಂಡರ್‌ ಕೊರತೆಯಿಂದ ಬಿಸಿಯೂಟ ಸಮಸ್ಯೆ ಹೇಳ ತೀರದಾಗಿದೆ.

ಸಿಲಿಂಡರ್‌ ಬದಲು ಕಟ್ಟಿಗೆ: ಹುಲಸಗೇರಿ ಸರಕಾರಿ ಪ್ರಾಥಮಿಕ ಶಾಲೆಯ 199 ವಿದ್ಯಾರ್ಥಿಗಳಿಗೆ ಬಿಸಿಯೂಟ ತಯಾರಿಸಲು ಅವಶ್ಯಕ ಸಿಲಿಂಡರ್‌ಗಳೇ ಇಲ್ಲದಾಗಿವೆ. ಬಿಸಿಯೂಟ ಪ್ರಾರಂಭವಾಗುವ ವೇಳೆ ಇಲಾಖೆ ಪೂರೈಸಿದ ಎರಡು ಸಿಲಿಂಡರ್‌ ಮಾತ್ರ. ಆದರೆ ಸರಕಾರದ ನಿಯಮದ ಪ್ರಕಾರ ಬಿಸಿಯೂಟ ಆರಂಭದಿಂದ ಇಲ್ಲಿಯವರಗೆ ಶಾಲೆಗೆ ತಿಂಗಳಿಗೆ 6 ಸಿಲಿಂಡರ್‌ ಪೂರೈಕೆಯಾಗುತ್ತಿವೆ ಎಂದು ಹೇಳಿದರೂ ಇದರಲ್ಲಿ ಕೇವಲ ಎರಡು ಸಿಲಿಂಡರ್‌ ಮಾತ್ರ ಪೂರೈಕೆಯಾಗುತ್ತಿದ್ದು, ಉಳಿದ ನಾಲ್ಕು ಸಿಲಿಂಡರಗಳ ಬಗ್ಗೆ ಮಾಹಿತಿ ಇಲ್ಲ.  ಇದರ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ತಿಂಗಳಿಗೆ ಕೇವಲ ಎರಡು ಸಿಲಿಂಡರ್‌ಗಳಲ್ಲಿ ಮಕ್ಕಳಿಗೆ ಅಡುಗೆ ಮಾಡಲು ಸಾಧ್ಯವಿಲ್ಲ.  ಹೀಗಾಗಿ ಬಿಸಿಯೂಟದ ತಯಾರಿಕೆಗೆ ಪರ್ಯಾಯವಾಗಿ ಕಟ್ಟಿಗೆ ಉಪಯೋಗಿಸಲಾಗುತ್ತಿದೆ ಬಿಸಿಯೂಟ ತಯಾರಕರು ತಿಳಿಸಿದರು.

ಶಾಲಾ ಆವರಣದಲ್ಲಿ ಅಡುಗೆ: ಸರಿಯಾದ ಬಿಸಿಯೂಟ ತಯಾರಿಸಲು ಅಡುಗೆ ಕೊಠಡಿ ಇಲ್ಲದ ಕಾರಣ ಸುಮಾರು ವರ್ಷಗಳಿಂದ ಈ ಶಾಲೆಯಲ್ಲಿ ಹೊರಗಡೆ ಬಿಸಿಯೂಟದ ಅಡುಗೆ ಮಾಡುತ್ತಿದ್ದಾರೆ. ಶಾಲಾವರಣದಲ್ಲಿ ಸಾಕಷ್ಟು ಜಾಗವಿದ್ದರೂ ಅಡುಗೆ ಕೊಠಡಿ ನಿರ್ಮಾಣ ಮಾಡದಿರುವುದು ಕಂಡು ಬರುತ್ತಿದೆ.  ಮಳೆಗಾಲದಲ್ಲಿ ಮಳೆ ಬಂದಾಗ ಸಣ್ಣ ಕೊಠಡಿಯಲ್ಲಿ ಅಡುಗೆ ಮಾಡಬೇಕು. ಇದರಿಂದಮಕ್ಕಳಿಗೆ ಸರಿಯಾದ ಸಮಯಕ್ಕೆ ಅಡುಗೆ ಮಾಡಲು ತೊಂದರೆಯಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಒಂದು ಅಡುಗೆ ಕೊಠಡಿ ನಿರ್ಮಿಸಲು ಕ್ರಮ ಕೈಗೊಳ್ಳಬೇಕಿದೆ.

ಬಿಸಿಯೂಟ ಆರಂಭದಿಂದ ಇಲ್ಲಿಯವರೆಗೂ ಶಾಲೆಗೆ ಕೇವಲ ಎರಡು ಸಿಲಿಂಡರ್‌ ಮಾತ್ರ ಪೂರೈಕೆಯಾಗಿವೆ. ಉಳಿದ ನಾಲ್ಕು ಸಿಲಿಂಡರ್‌ ಗಳ ಬಗ್ಗೆ ಮಾಹಿತಿ ಇಲ್ಲ. ಇದರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ.- ಕಳಕಮಲ್ಲೇಶ್ವರ, ಶಾಲಾ ಮುಖ್ಯೋಪಾಧ್ಯಾಯರು.

-ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.