ಥಿಯರಿ ಅಂತ್ಯ-ಇನ್ನು ಪ್ರ್ಯಾಕ್ಟಿಕಲ್‌ ಶುರು

ಕನ್ನಡಾಭಿಮಾನಿಗಳಿಗೆ ಸಮಸ್ಯೆಯಾಗದಂತೆ ನೋಡಿ24 ನೋಡಲ್‌-200 ಸಂಪರ್ಕ ಅಧಿಕಾರಿಗಳು

Team Udayavani, Feb 1, 2020, 10:43 AM IST

Feburary-1

ಕಲಬುರಗಿ: ಅಕ್ಷರ ಜಾತ್ರೆಗೆ ಸಾಕ್ಷಿಯಾಗಲಿರುವ ಕನ್ನಡಾಭಿಮಾನಿಗಳಿಗೆ ವಸತಿ ಹಾಗೂ ಸಾರಿಗೆ ಕಲ್ಪಿಸುವ ಸಂಬಂಧ ನಡೆದ ಥಿಯರಿ ಚೆನ್ನಾಗಿ ಮುಗಿದಿದೆ. ನಾಡಿನಾದ್ಯಂತದಿಂದ ಸಾಹಿತ್ಯಾಸಕ್ತರಿಗೆ ಜಿಲ್ಲೆಯಲ್ಲಿ ಹಿತ ಅನುಭವ ನೀಡಬೇಕಾದ ಪ್ರ್ಯಾಕ್ಟಿಕಲ್‌ ಇನ್ನುಂದೆ ಶುರುವಾಗಿದೆ ಎಂದು ಸಮ್ಮೇಳನದ ಸಾರಿಗೆ ಮತ್ತು ವಸತಿ ಸಮಿತಿ ಅಧ್ಯಕ್ಷ ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದರು.

ನಗರದ ಕೃಷಿ ಇಲಾಖೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾರಿಗೆ ಮತ್ತು ವಸತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನ ಜಿಲ್ಲೆಯ ಮರ್ಯಾದೆ ಪ್ರಶ್ನೆ. ದೂರದೂರಿನಿಂದ ಬರುವ ಕನ್ನಡಾಭಿಮಾನಿಗಳಿಗೆ ವಾಸ್ತವ್ಯ, ಸಾರಿಗೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುವ ಹೊಣೆ ನಮ್ಮ ಮೇಲಿದೆ ಎಂದು ಅಧಿಕಾರಿಗಳು ಮತ್ತು ಸಮಿತಿ ಸದಸ್ಯರಿಗೆ ಎಚ್ಚರಿಸಿದರು.

ಒಂದೇ ಸ್ಥಳದಲ್ಲಿ ನೂರಾರು ಜನರಿಗೆ ವಾಸ್ತವ್ಯ ಕಲ್ಪಿಸಲಾಗುತ್ತಿದೆ. ಯಾವುದೇ ಅತಿಥಿ ಸಮಸ್ಯೆಯನ್ನು ಹೇಳಿದರೆ, ಸೌಜನ್ಯದಿಂದ ಆಲಿಸಿ ಸ್ಪಂದಿಸಬೇಕು. ಸಮಿತಿಯ ಯಾವೊಬ್ಬ ಸದಸ್ಯನೂ ಉತ್ತಮ ರೀತಿಯಲ್ಲಿ ನಡೆದುಕೊಳ್ಳದೇ ಹೋದಲ್ಲಿ ಇಡೀ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತದೆ. ಮೇಲಾಧಿಕಾರಿಗಳು ಸಿಬ್ಬಂದಿಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಬೇಜವಾಬ್ದಾರಿ ತೋರುವ ಸಿಬ್ಬಂದಿ ಇದ್ದರೆ, ಇಂದೇ ಅಂತಹವರಿಗೆ ತಿಳಿಹೇಳಿ ಎಂದು ನಿರ್ದೇಶನ ನೀಡಿದರು.

ಸಭೆ ನಂತರ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಪ್ರಿಯಾಂಕ್‌ ಖರ್ಗೆ, ವಸತಿ ಮತ್ತು ಸಾರಿಗೆ ಸಮಿತಿಯಿಂದ 24 ನೋಡಲ್‌ ಅ ಧಿಕಾರಿಗಳು, 200 ಸಂಪರ್ಕ ಅಧಿಕಾರಿಗಳು ಮತ್ತು 400 ಸ್ವಯಂ ಸೇವಕರು ಕಾರ್ಯನಿರ್ವಹಿಸುತ್ತಾರೆ ಎಂದು ತಿಳಿಸಿದರು. ಅತಿಥಿ ಗಣ್ಯರು ತಂಗಿರುವ ಸ್ಥಳಗಳಲ್ಲಿ ಹಾಸಿಗೆ, ಕುಡಿಯುವ ನೀರು, ಮೇಣದ ಬತ್ತಿ, ಸೊಳ್ಳೆ ಬತ್ತಿ, ಶೌಚಾಲಯ ಮತ್ತು ಸ್ನಾನ ಗೃಹಗಳ ವ್ಯವಸ್ಥೆ ಮಾಡಲಾಗಿದೆ. ಅತಿಥಿ ಗಣ್ಯರು ತಂಗಿರುವ ಸ್ಥಳಗಳಲ್ಲಿ ಸುರಕ್ಷತೆ ದೃಷ್ಟಿಯಿಂದ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಪ್ರಥಮ ಚಿಕಿತ್ಸೆ ಹಾಗೂ ತುರ್ತು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್‌ ಮತ್ತು ಹತ್ತಿರದ ಆಸ್ಪತ್ರೆಯನ್ನು ಗುರುತಿಸಲು ಆರೋಗ್ಯ ಸಮಿತಿಗೆ ಕೋರಲಾಗಿದೆ. 150ಕ್ಕಿಂತ ಹೆಚ್ಚಿನ ಜನರು ಉಳಿದುಕೊಳ್ಳುವ ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ಜಿಲ್ಲಾಡಳಿತಕ್ಕೆ ಪತ್ರ ಬರೆಯಲಾಗಿದೆ ಎಂದು ವಿವರಿಸಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿ ಕಾರಿಯಾದ ಸಾರಿಗೆ ಮತ್ತು ವಸತಿ ಸಮಿತಿ ಕಾರ್ಯಾಧ್ಯಕ್ಷ ಡಾ| ರಾಜಾ ಪಿ., ಜಿ.ಪಂ ಮುಖ್ಯ ಯೋಜನಾ ಧಿಕಾರಿ ಪ್ರವೀಣ ಪ್ರಿಯಾ ಡೇವಿಡ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.