ಬಂಟ್ವಾಳ : ಇನ್ನೋವಾ ಕಾರಿನಲ್ಲಿ ಮೃತದೇಹ ಪತ್ತೆ
Team Udayavani, Feb 2, 2020, 5:05 PM IST
ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ನಗ್ರಿಯಲ್ಲಿ ಇನ್ನೋವಾ ಕಾರೊಂದರಲ್ಲಿ ರವಿವಾರ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಗುರುತು ಪತ್ತೆಯಾಗಿಲ್ಲ.
ಇನ್ನೋವಾ ಕಾರು KA 53 ನೋಂದಣಿ ಹೊಂದಿದ್ದು, ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಸ್ಥಳದಲ್ಲಿ ಸಾಕಷ್ಟು ಮಂದಿ ಜಮಾಯಿಸಿದ್ದಾರೆ.