ವಿವಿಧ ಬೇಡಿಕೆ ಈಡೇರಿಕೆಗೆ ಪ್ರತಿಭಟನೆ

Team Udayavani, Feb 4, 2020, 3:04 PM IST

bg-tdy-2

ಹಿರೇಬಾಗೇವಾಡಿ: ಸಾರ್ವಜನಿಕ ಸಮರ್ಪಕ ಸೇವೆ ನಿರ್ವಹಣೆಯಲ್ಲಿ ವಿಫಲರಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧೋರಣೆ ಖಂಡಿಸಿ ಸ್ಥಳೀಯ ಗ್ರಾಪಂ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವ್ಯಾಪಾರಸ್ಥರು, ರೈತರು, ಸಾರ್ವಜನಿಕರ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇದಕ್ಕೂ ಮೊದಲು ಸ್ಥಳೀಯ ಚಾವಡಿ ಕೂಟದಿಂದ ಮರವಣಿಗೆಯ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜನ ವಿರೋಧಿ  ನೀತಿ ವಿರುದ್ಧ  ಧಿಕ್ಕಾರ ಕೂಗುತ್ತ ಟೋಲ್‌ ಗೇಟ್‌ ಎದುರು ಧರಣಿ ಕೈಗೂಳ್ಳಲಾಯಿತು.

ಪ್ರತಿಭಟನೆಯಲ್ಲಿ ಬಸವಣ್ಣಿಪ್ಪ ಗಾಣಿಗಿ, ಬಾಪು ನಾವಲಗಟ್ಟಿ, ಗ್ರಾಪಂ ಸದಸ್ಯ ಸುರೇಶ ಇಟಗಿ, ಶ್ರೀಕಾಂತ ಮಾಧುಭರಣ್ಣವರ, ಯಲ್ಲಪ್ಪ ಧರೆಣ್ಣವರ, ಬಿ.ಎನ್‌. ಪಾಟೀಲ, ಅಡಿವೇಶ ಇಟಗಿ ಮಾತನಾಡಿ, ಹಲವಾರ ವರ್ಷಗಳಿಂದ ಇಲ್ಲಿನ ಜನರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನಮ್ಮ ಭಾಗದಲ್ಲಿರುವ ಈ ಟೋಲ್‌ ಗೇಟ್‌ ಬೇಡವೆ ಬೇಡ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಸ್ಥಳಕ್ಕಾಗಮಿಸಿದ ತಹಶೀಲ್ದಾರ್‌ ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ಜನರ ಮನ ಒಲಿಸಲು ಪ್ರಯತ್ನಿಸಿದರು. ಆಗ ಪ್ರತಿಭಟನಾಕಾರರು ಬಸವೇಶ್ವರ ವೃತ್ತ ಬಳಿ ಓವರ್‌ ಬ್ರಿಡ್ಜ್, ಪಾರಿಶ್ವಾಡ ಮಾರ್ಗವಾಗಿ ಹೋಗಲು ಅಂಡರ್‌ ಬ್ರಿಡ್ಜ್, ಸರ್ಮಿಸ್‌ ರಸ್ತೆ ಸಹಿತ ವಿದ್ಯುತ್‌ ಅಳವಡಿಕೆ, ಸಿದ್ದನ ಬಾಂವಿ ಕೆರೆ ನೀರು ಎಡದಿಂದ ಬಲಕ್ಕೆ ಪೈಪ್‌ಲೈನ್‌ ಹಾಕಿ ನೀರು ಹೋಗುವಂತೆ ಮಾಡುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಮನವಿ ಪತ್ರ ನೀಡಿ ಕಾರ್ಯ ಕೈಗೊಳ್ಳವ ಬಗ್ಗೆ ಹಾಗೂ ಕಾಲ ಮಿತಿಯನ್ನು ನಮೂದಿಸಿ ಬರೆದು ಕೊಡುವುದಾದರೆ ಮಾತ್ರ ಧರಣಿ ಹಿಂತೆಗೆದುಕೊಳ್ಳವುದಾಗಿ ಶರತ್ತು ವಿಧಿಸಿದರು.

ಇದಕ್ಕೆ ಒಪ್ಪಿಗೆ ಸೂಚಿಸಿದ ಅಧಿ ಕಾರಿಗಳು ಇನ್ನೂ ಕಾಮಗಾರಿಗಳನ್ನು 15 ದಿನಗಳಲ್ಲಿ ಅಂದಾಜು ಪತ್ರಿಕೆ ತಯಾರಿಸಿ ಎನ್‌.ಹೆಚ್ .ಎ.ಐ ಬೆಂಗಳೂರು ಅವರಗೆ ಕಳುಹಿಸಿ ಕೊಡಲಾಗುವುದು ಎಂದು ಗ್ರಾಪಂಗೆ ಲಿಖೀತವಾಗಿ ಬರೆದುಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಗ್ರಾಪಂ ಅಧ್ಯಕ್ಷೆ ಕಲಾವತಿ ಧರೆಣ್ಣವರ, ಉಪಾಧ್ಯಕ್ಷೆ ಹಸೀನಾ ಬಾನು ಮದರಂಗಿ, ಗ್ರಾಪಂ ಸದಸ್ಯರಾದ ಗೌಸಮೊಹಿªನ ಜಾಲಿಕೊಪ್ಪ, ಸಂಜಯ ದೇಸಾಯಿ, ಮಹಾತೇಂಶ ಘೋಡಗೇರಿ, ಚನ್ನಮಲ್ಲ ಕುಂಬಾರ, ರಾಜು ಪೋಲೇಶಿ, ರೇಣುಕಾ ಪಾಟೀಲ, ಈರಣ್ಣ ಜಪ್ತಿ, ಯಲ್ಲಪ್ಪ ಕೆಳಗೇರಿ, ಸಿ.ಸಿ.ಪಾಟೀಲ, ಮಂಜುನಾಥ ವಸ್ತ್ರದ, ಅಡಿವೇಶ ಇಟಗಿ, ಪ್ರಕಾಶ ಜಪ್ತಿ, ಪ್ರಶಾಂತ ದೇಸಾಯಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.