ಸಿದ್ಧಗಂಗಾ ಮಠಕ್ಕೆ ನೀಡುತ್ತಿದ್ದ ಅಕ್ಕಿ ಸ್ಥಗಿತ


Team Udayavani, Feb 5, 2020, 3:00 AM IST

siddaganga

ಕಲ್ಪತರು ನಾಡಿನ ತ್ರಿವಿಧ ದಾಸೋಹ ಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಹಸಿದು ಬರುವ ಭಕ್ತರಿಗೆ ಪ್ರಸಾದ ನೀಡುವುದು ಎಂದಿಗೂ ನಿಂತ ಉದಾಹರಣೆಗಳೇ ಇಲ್ಲ. ಸರ್ಕಾರಗಳು ಯಾವುದೇ ಸಹಾಯ ಹಸ್ತ ನೀಡದೇ ಇರುವಾಗಲೇ ಭಕ್ತರಿಗೆ ಪ್ರಸಾದ ನೀಡಿದ ಕ್ಷೇತ್ರ. 1850ರಲ್ಲಿ ಶ್ರೀ ಅಟವಿ ಮಹಾಸ್ವಾಮಿಗಳು ಹಚ್ಚಿದ ಒಲೆ ಇಂದಿಗೂ ನಂದದೇ ಸಹಸ್ರಾರು ಭಕ್ತರಿಗೆ, 10 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ನಿತ್ಯ ದಾಸೋಹ ನಡೆಯುತ್ತಿದೆ. ಕಳೆದ ಎರಡು ವರ್ಷಗಳಿಂದ ಸರ್ಕಾರ ನೀಡುತ್ತಿದ್ದ ಉಚಿತ ಅಕ್ಕಿಯನ್ನು ನಿಲ್ಲಿಸಿದೆ. ಮುಂದೆ ಸರ್ಕಾರ ಅಕ್ಕಿ ನೀಡದಿದ್ದರೆ ಶ್ರೀ ಮಠದಲ್ಲಿ ಪ್ರಸಾದ ನೀಡಲು ತೊಂದರೆಯಾಗುತ್ತಾ…?

ತುಮಕೂರು: ಸಿದ್ಧಗಂಗಾ ಮಠಕ್ಕೆ ಸರ್ಕಾರ ನೀಡುತ್ತಿದ್ದ ಅಕ್ಕಿ ಮತ್ತು ಗೋಧಿಯನ್ನು ಈಗ ಸ್ಥಗಿತಗೊಳಿಸಿದ್ದು, ಇನ್ನೆರಡು ತಿಂಗಳಲ್ಲಿ ಅಕ್ಕಿಯನ್ನು ಮಠಕ್ಕೆ ಸರಬರಾಜು ಮಾಡದಿದ್ದರೆ, ಮಠದಲ್ಲಿ ನಿತ್ಯವೂ 10 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಪ್ರಸಾದ ನೀಡಲು ತೊಂದರೆ ಎದುರಾಗಲಿದೆ ಎನ್ನುವ ಆತಂಕ ಈಗ ಮೂಡಿದೆ.

ಅನ್ನ, ಅಕ್ಷರ, ಆಶ್ರಯ ನೀಡುವ ತ್ರಿವಿಧ ದಾಸೋಹ ಕ್ಷೇತ್ರ ಶ್ರೀ ಸಿದ್ಧಗಂಗಾ ಮಠದ ಪ್ರಸಾದ ಪ್ರಸಿದ್ಧಿ. ಸಿದ್ಧಗಂಗಾ ಮಠದಲ್ಲಿ ಪ್ರಸಾದ ಸೇವಿಸಲೆಂದೆ ದೂರ ದೂರದ ಊರುಗಳಿಂದ ಭಕ್ತರು ಬರುತ್ತಾರೆ. ಇಲ್ಲಿ ಮಾಡುವ ಮುದ್ದೆ, ವಿವಿಧ ತರಕಾರಿ ಸಾರು, ಪಾಯಸ, ಮಾಲ್ದಿ, ಬೂಂದಿ ಪ್ರಸಿದ್ಧಿ. ಈಗ ಶ್ರೀಮಠ ದೇಶ ವಿದೇಶಗಳಲ್ಲೂ ಹೆಸರಾಗಿದ್ದು, ಸಿದ್ಧಗಂಗಾ ಮಠದ ಹಿರಿಯಗಳಾಗಿದ್ದ ಕರ್ನಾಟಕ ರತ್ನ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಮಾಡಿ ಪ್ರಸಾದ ಸೇವಿಸಿ ಭಕ್ತರು ಕೃತಾರ್ಥರಾಗುತ್ತಿದ್ದಾರೆ.

ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಜನರಿಗೆ ಪ್ರಸಾದ: ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ ಅಕ್ಷರ ದಾಸೋಹ ಪಡೆಯಲು ನಾಡಿನ ವಿವಿಧ ಭಾಗಗಳಿಂದ ಜಾತಿ, ಮತ, ಪಂಥ, ಭೇದವಿಲ್ಲದೆ ಸಾವಿರಾರು ಬಡ ಕುಟುಂಬದ ಮಕ್ಕಳು ಶ್ರೀಗಳ ಮಾರ್ಗದರ್ಶನದಲ್ಲಿ ಮಠದ ಶಾಲೆಗೆ ಸೇರಿ ಶಿಕ್ಷಣ ಪಡೆಯುತ್ತಾರೆ. ಪ್ರತಿನಿತ್ಯ 10 ಸಾವಿರ ವಿದ್ಯಾರ್ಥಿಗಳು ಮತ್ತು ಭಕ್ತರಿಗೆ ಪ್ರಸಾದ ವ್ಯವಸ್ಥೆ, ಜಾತ್ರೆ, ಹಬ್ಬ, ವಿಶೇಷ ದಿನಗಳಲ್ಲಿ 3 ಲಕ್ಷದವರೆಗೆ ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಅಕ್ಕಿ-ತರಕಾರಿ ಪ್ರಮಾಣ: ಮಠದ ವಿದ್ಯಾರ್ಥಿಗಳು ಮತ್ತು ಬರುವ ಭಕ್ತರು ಸೇರಿದಂತೆ 10 ಸಾವಿರಕ್ಕೂ ಅಧಿಕ ಜನರಿಗೆ ಬೆಳಗಿನ ಉಪಹಾರ, ಎರಡು ಹೊತ್ತಿನ ಊಟ, ಹಬ್ಬ ಹರಿದಿನ ಬಿಟ್ಟು ಪ್ರತಿದಿನ 25 ಕ್ವಿಂಟಲ್‌ ಅಕ್ಕಿ, 8 ಕ್ವಿಂಟಲ್‌ ರಾಗಿಹಿಟ್ಟು, 3 ಕ್ವಿಂಟಲ್‌ ತೊಗರಿಬೇಳೆ, 2 ಕ್ವಿಂಟಲ್‌ ಈರುಳ್ಳಿ, 4 ಕ್ವಿಂಟಲ್‌ ಉಪ್ಪಟ್ಟಿನ ರವೆ, 50 ಕೆ.ಜಿ. ಉಪ್ಪು, 50 ಕೆ.ಜಿ. ಸಾಂಬಾರು ಪುಡಿ, ಖಾರದ ಪುಡಿ, 60 ಕೆ.ಜಿ. ಹುಣಸೇಹಣ್ಣು, 25 ಕೆ.ಜಿ. ಮೆಣಸಿನಕಾಯಿ, 300 ಲೀಟರ್‌ ಹಾಲು ಮಜ್ಜಿಗೆಗೆ, 80 ಕೆ.ಜಿ. ಕಡಲೇಕಾಯಿ ಎಣ್ಣೆ, 150 ತೆಂಗಿನಕಾಯಿ ಅಡುಗೆಗೆ ಬಳಕೆ ಮಾಡಿ ನಿತ್ಯ ದಾಸೋಹ ತಯಾರು ಮಾಡುತ್ತಾರೆ.

ಶ್ರೀ ಕ್ಷೇತ್ರಕ್ಕೆ 600 ವರ್ಷಗಳ ಇತಿಹಾಸ: ಶ್ರೀ ಕ್ಷೇತ್ರಕ್ಕೆ 600 ವರ್ಷಗಳ ಇತಿಹಾಸವಿದೆ. ಶ್ರೀ ಅಟವಿ ಸ್ವಾಮಿಗಳು ಶ್ರೀ ಕ್ಷೇತ್ರದಲ್ಲಿ 1850ರಲ್ಲಿ ಶಿವಯೋಗಾನುಷ್ಠಾನವನ್ನು ನಡೆಸಿ ಅಂದು ಅಚ್ಚಿದ ಒಲೆ ಇಂದಿಗೂ ಆರಿಲ್ಲ. ನಿತ್ಯ ದಾಸೋಹ ನಡೆಯುತ್ತಲೇ ಇದೆ. ಮಠಕ್ಕೆ ಬಂದವರು ಹಸಿದು ಹೋಗದೇ ಪ್ರಸಾದ ಸೇವಿಸಿಯೇ ಹೋಗುತ್ತಾರೆ.

ಭಿಕ್ಷಾಟಣೆ ಮಾಡಿದ್ದ ಶ್ರೀಗಳು: ಮಠಕ್ಕೆ ರಾಜ್ಯದ ವಿವಿಧ ಬಾಗಗಳಿಂದ ಭಕ್ತರು ದವಸ ಧಾನ್ಯ, ತರಕಾರಿ, ತೆಂಗಿನಕಾಯಿ ಸೇರಿದಂತೆ ಪ್ರಸಾದಕ್ಕೆ ಬೇಕಾದ ಸಾಮಗ್ರಿಗಳನ್ನು ಕಳಿಸುತ್ತಾರೆ. ಈ ಹಿಂದೆ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಭಿಕ್ಷಾಟನೆ ಮಾಡಿ ಮಠ ಬೆಳೆಸಿ, ಮಠದ ವಿದ್ಯಾರ್ಥಿಗಳ ಊಟಕ್ಕೆ ತೊಂದರೆಯಾಗದಂತೆ ಗಮನಹರಿಸಿದ್ದರು. ಇದೇ ಸಂಪ್ರದಾಯವನ್ನು ಮುಂದುವರೆಸಿದ ಶ್ರೀ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಜಾತ್ರೆಯ ವೇಳೆಯಲ್ಲಿ ಜೋಳಿಗೆ ಹಿಡಿದು ಭಿಕ್ಷಾಟನೆ ಮಾಡುತ್ತಾರೆ.

ತುಮಕೂರು ಜಿಲ್ಲೆಯಲ್ಲಿ ಈ ಹಿಂದೆ ಭೀಕರ ಬರಗಾಲದ ಪರಿಸ್ಥಿತಿಯಲ್ಲಿ ಕೂಡ ಶ್ರೀ ಮಠದಲ್ಲಿ ಅಂದು ಕರ್ನಾಟಕ ರತ್ನ, ಲಿಂ.ಡಾ. ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ಭಿಕ್ಷಾಟನೆ ಮಾಡಿ ಮಠಕ್ಕೆ ಹಸಿದು ಬರುವ ಭಕ್ತರಿಗೆ ನಿತ್ಯ ಪ್ರಸಾದ ವ್ಯವಸ್ಥೆ ಮಾಡಿದ್ದರು. ಇಂಥ ಮಠಕ್ಕೆ ರಾಜ್ಯ ಸರ್ಕಾರ 1996ರಿಂದ 2017ರ ವರೆಗೆ ಅಕ್ಕಿಯನ್ನು 1 ಕ್ವಿಂಟಲ್‌ಗೆ 600 ರೂ.ನಂತೆ 735 ಕ್ವಿಂಟಲ್‌ ಅಕ್ಕಿಯನ್ನು ಸರಬರಾಜು ಮಾಡುತ್ತಿತ್ತು.

ಆದರೆ, 2018-19ರಿಂದ ಮಠಕ್ಕೆ ಉಚಿತವಾಗಿ 735 ಕ್ವಿಂಟಲ್‌ ಅಕ್ಕಿ 350 ಕ್ವಿಂಟಲ್‌ ಗೋಧಿ ನೀಡುತ್ತಾ ಬಂದಿತ್ತು. ಕಳೆದ ಡಿಸೆಂಬರ್‌ ತಿಂಗಳಿನಿಂದ ಮಠಕ್ಕೆ ನೀಡುತ್ತಿದ್ದ ಅಕ್ಕಿ, ಗೋಧಿಯನ್ನು ಸರ್ಕಾರ ನಿಲ್ಲಿಸಿದೆ. ಶ್ರೀಗಳು ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎರಡು ತಿಂಗಳಿನಿಂದ ಮಠಕ್ಕೆ ಸರಬರಾಜು ಸ್ಥಗಿತಗೊಂಡಿದ್ದರೂ, ಮಕ್ಕಳಿಗೆ ಮತ್ತು ಭಕ್ತರಿಗೆ ತೊಂದರೆಯಾಗದೇ ಮಠದಲ್ಲಿ ಪ್ರಸಾದ ವ್ಯವಸ್ಥೆ ಕಲ್ಪಿಸಿದ್ದಾರೆ.

ಜಾತ್ಯತೀತವಾಗಿ ಎಲ್ಲಾ ವರ್ಗದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿರುವ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠಕ್ಕೆ ನೀಡುತ್ತಿರುವ ಅಕ್ಕಿ, ಗೋಧಿಯನ್ನು ಸರ್ಕಾರ ನಿಲ್ಲಿಸಿರುವುದು ಮಠದಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ತೊಂದರೆಯುಂಟಾಗಲಿದೆ.

ಶ್ರೀ ಸಿದ್ಧಗಂಗಾ ಮಠಕ್ಕೆ ಉಚಿತವಾಗಿ ಸರ್ಕಾರ ನೀಡುತ್ತಿದ್ದ ಅಕ್ಕಿ, ಗೋಧಿಯನ್ನು ತಡೆ ಹಿಡಿದಿರೋದು ನಿಜ. ಉತ್ತರ ಭಾ ರತದಲ್ಲಿ ಈ ಯೋಜನೆ ದುರುಪಯೋಗ ಆಗುತ್ತಿದೆ ಎಂಬ ಆರೋಪವಿದೆ. ಹಾಗಾಗಿ ಕಲ್ಯಾಣ ಸಂಸ್ಥೆ ಯೋಜನೆಯಲ್ಲಿ ಉಚಿತವಾಗಿ ನೀಡುತ್ತಿದ್ದ ಅಕ್ಕಿಯನ್ನು ಕಳೆದ ಎರಡು ತಿಂಗಳಿನಿಂದ ನಿಲ್ಲಿಸಲಾಗಿದೆ. ಸುಮಾರು 735 ಕ್ವಿಂಟಲ್‌ ಅಕ್ಕಿ, 350 ಕ್ವಿಂಟಲ್‌ ಗೋಧಿ ಬರುತಿತ್ತು. ಕಳೆದ ಎರಡು ವರ್ಷದಿಂದ ಉಚಿತವಾಗಿ ಕೊಡುತ್ತಿದ್ದರು. ಪುನಃ ಆರಂಭಿಸುವಂತೆ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಕೇಂದ್ರಕ್ಕೂ ಮನವಿ ಮಾಡಲಾಗಿದ್ದು, ಸದ್ಯಕ್ಕೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ತೊಂದರೆಯಾಗಬಹುದು.
-ಶ್ರೀ ಸಿದ್ಧಲಿಂಗ ಮಹಾ ಸ್ವಾಮೀಜಿ, ಸಿದ್ಧಗಂಗಾ ಮಠಾಧ್ಯಕ್ಷರು

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.