ಎಸಿ ಕಚೇರಿ ಪ್ರಾರಂಭಕ್ಕೆ ಚನ್ನಗಿರಿಯೇ ಸೂಕ್ತ

ಸರದಿ ಉಪವಾಸ ಸತ್ಯಾಗ್ರಹಕ್ಕೆ ಮಾಜಿ ಶಾಸಕದ್ವಯರ ಸಾಥ್‌ರಾಜಕೀಯ ಕಾರಣದಿಂದ ತಾಲೂಕಿಗೆ ಅನ್ಯಾಯ

Team Udayavani, Feb 5, 2020, 11:26 AM IST

5-Febrauary-3

ಚನ್ನಗಿರಿ: ಉಪವಿಭಾಗಾಧಿಕಾರಿ ಕಚೇರಿಯನ್ನು ಚನ್ನಗಿರಿಯಲ್ಲಿ ಪ್ರಾರಂಭಿಸುವಂತೆ ಆಗ್ರಹಿಸಿ ನ್ಯಾಯವಾದಿಗಳ ಸಂಘ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ 2ನೇ ದಿನಕ್ಕೆ ಕಾಲಿರಿಸಿದ್ದು, ವಿವಿಧ ಸಂಘ, ಸಂಸ್ಥೆಗಳು ಹಾಗೂ ಮಾಜಿ ಶಾಸಕರಿಬ್ಬರು ಸಾಥ್‌ ನೀಡುವ ಮೂಲಕ ಪಟ್ಟಣದಲ್ಲಿಯೇ ಉಪವಿಭಾಗಾಧಿಕಾರಿ ಕಚೇರಿ ತೆರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಮಾಜಿ ಶಾಸಕ ವಡ್ನಾಳ್‌ ರಾಜಣ್ಣ ಮಾತನಾಡಿ, ಭೌಗೋಳಿಕವಾಗಿ ಅತ್ಯಂತ ವಿಶಾಲವಾಗಿರುವ ಚನ್ನಗಿರಿ ತಾಲೂಕಿಗೆ ನೀಡಬೇಕಾದ ವಿಭಾಗಾಧಿಕಾರಿ ಕಚೇರಿಯನ್ನು ಹೊನ್ನಾಳಿಗೆ ನೀಡುವುದು ಎಷ್ಟರ ಮಟ್ಟಿಗೆ ಸರಿ. ಎಲ್ಲ ರೀತಿಯಲ್ಲೂ ಅರ್ಹವಾಗಿರುವ ಚನ್ನಗಿರಿ ತಾಲೂಕು ಪರಿಗಣಿಸಿ ಉಪವಿಭಾಗಾಧಿಕಾರಿ ಕಚೇರಿಯನ್ನು ಇಲ್ಲಿಯೇ ಪ್ರಾರಂಭಿಸಬೇಕು. ಇಲ್ಲಿನ ಜನಸಂಖ್ಯೆ ಕೂಡ ಹೆಚ್ಚಿದೆ. ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಡಿವೈಎಸ್‌ಪಿ, ಉಪವಿಭಾಗಾಧಿಕಾರಿ ಕಚೇರಿಯನ್ನು ಪ್ರಾರಂಭಿಸಬೇಕು ಎಂದು ಸರ್ಕಾರದ ಮಟ್ಟದಲ್ಲಿ ಒತ್ತಡ ಹೇರಿದ್ದ ಕಾರಣ ಸದ್ಯ ಡಿವೈಎಸ್‌ಪಿ ಕಚೇರಿ ಚನ್ನಗಿರಿಯಲ್ಲಿ ಪ್ರಾರಂಭವಾಗಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವವರು ಉಪವಿಭಾಗಾಧಿಕಾರಿ ಕಚೇರಿಯನ್ನು ಚನ್ನಗಿರಿಯಲ್ಲಿ ಪ್ರಾರಂಭಿಸುವುದಕ್ಕೆ ಪ್ರಯತ್ನ ಪಡಲಿ. ಆದರೆ ಅವರಿಂದ ಏಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದರು.

ಸುಳ್ಳು ಭರವಸೆಯ ರಾಜಕಾರಣ ಬಹಳದಿನ ಉಳಿಯುವುದಿಲ್ಲ. ತಾಲೂಕಿನ ಅಭಿವೃದ್ಧಿ ನನ್ನ ಉದ್ದೇಶವಾಗಿದೆ. ಅದಕ್ಕಾಗಿ ನಾನು ನಿರಂತರ ಹೋರಾಟ ನಡೆಸುತ್ತೇನೆ. ಚನ್ನಗಿರಿಯಲ್ಲಿ ಉಪವಿಭಾಗಾಧಿಕಾರಿ ಕಚೇರಿ ತೆರೆಯುವವರೆಗೂ ಯಾವುದೇ ಕಾರಣಕ್ಕೂ ಹೋರಾಟವನ್ನು ಕೈ ಬಿಡುವುದಿಲ್ಲ. ಎಲ್ಲರೂ ಯಾವುದೋ ರಾಜಕಾರಣಕ್ಕೆ ಮಣಿಯದೇ ಇಲ್ಲಿಯೇ ಉಪವಿಭಾಗಾಧಿಕಾರಿ ಕಚೇರಿಯನ್ನು ತೆರೆಯುವುದಕ್ಕೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಮಾಜಿ ಶಾಸಕ ಮಹಿಮಾ ಪಟೇಲ್‌ ಮಾತನಾಡಿ, ಚನ್ನಗಿರಿ ಎಸಿ ಕಚೇರಿ ಆರಂಭಕ್ಕೆ ಎಲ್ಲ ಅರ್ಹತೆ ಹೊಂದಿದ್ದು, ಉಪವಿಭಾಗಾಧಿಕಾರಿ ಕಚೇರಿ ಪ್ರಾರಂಭ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುತ್ತದೆ. ಯಾವುದೋ ರಾಜಕೀಯ ದೃಷ್ಟಿಯಿಂದ ಬೇರೆಡೆ ಕಚೇರಿ ಪ್ರಾರಂಭಿಸುವುದು ತಪ್ಪು. ಎಲ್ಲರ ಹಿತದೃಷ್ಟಿಯಿಂದ ಎಸಿ ಕಚೇರಿ ಪ್ರಾರಂಭಕ್ಕೆ ಸರ್ಕಾರ ಮತ್ತು ಜನಪ್ರತಿನಿಧಿಗಳು ಮನಸ್ಸು ಮಾಡಬೇಕು. ಯಾವುದೇ ರಾಜಕೀಯ ಒತ್ತಡವನ್ನು ಲೆಕ್ಕಿಸದೇ ಪ್ರತಿಯೊಬ್ಬರು ಹೋರಾಟಕ್ಕೆ ಕೈ ಜೋಡಿಸಬೇಕು ಎಂದರು.

ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಿವಾನಂದಪ್ಪ, ಜಿಪಂ ಸದಸ್ಯ ತೇಜಸ್ವಿ ಪಟೇಲ್‌, ಸಿ.ಕೆ.ಎಚ್‌ ಮಹೇಶ್ವರಪ್ಪ, ವಕೀಲ ವೈಡಿಎಸ್‌ ಸುರೇಶ್‌, ಕಾಂಗ್ರೆಸ್‌ ಯುವ ಮುಖಂಡ ವಡ್ನಾಳ್‌ ಜಗದೀಶ್‌, ಜಿಲ್ಲಾ ಕಿಸಾನ್‌ ಸಂಘದ ಅಧ್ಯಕ್ಷ ಶಿವಗಂಗಾ ಬಸವರಾಜ್‌, ತಾಪಂ ಮಾಜಿ ಸದಸ್ಯ ಉಸ್ಮಾನ್‌ ಷರೀಫ್‌ ಹಾಗೂ ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.