8ಕ್ಕೆ ರಾಷ್ಟ್ರೀಯ ಲೋಕ ಅದಾಲತ್‌ ಆಯೋಜನೆ

5458 ಪ್ರಕರಣಗಳ ಪೈಕಿ 4500 ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಗುರಿ: ನ್ಯಾ| ವಟವಟಿ

Team Udayavani, Feb 6, 2020, 2:55 PM IST

6-February-32

ಚಿತ್ರದುರ್ಗ: ಜಿಲ್ಲೆಯಲ್ಲಿ ಫೆ. 8 ರಂದು ರಾಷ್ಟ್ರೀಯ ಲೋಕ ಅದಾಲತ್‌ ನಡೆಯಲಿದೆ. 5458 ಪ್ರಕರಣಗಳನ್ನು ಗುರುತಿಸಲಾಗಿದ್ದು, ಸುಮಾರು 4500 ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್‌.ವೈ. ವಟವಟಿ ತಿಳಿಸಿದರು.

ಜಿಲ್ಲಾ ನ್ಯಾಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅದಾಲತ್‌ ಮೂಲಕ ಪರಿಹರಿಸಿಕೊಳ್ಳಬಹುದು ಎಂದರು.

ಪ್ರಸಕ್ತ ಸಾಲಿನಲ್ಲಿ ಫೆ. 8, ಏಪ್ರಿಲ್‌ 11, ಜುಲೈ 11, ಸೆಪ್ಟೆಂಬರ್‌ 12 ಹಾಗೂ ಡಿಸೆಂಬರ್‌ 12 ಸೇರಿದಂತೆ ಒಟ್ಟು ಐದು ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ಆಯೋಜಿಸಲಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇದ್ದ 28,465 ಪ್ರಕರಣಗಳಲ್ಲಿ 5458 ಪ್ರಕರಣ ಹಾಗೂ 433 ವ್ಯಾಜ್ಯ ಪೂರ್ವ ಪ್ರಕರಣ ಸೇರಿದಂತೆ ಒಟ್ಟು 5891 ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ಗೆ ವಹಿಸಲಾಗಿದೆ ಎಂದು ಹೇಳಿದರು.

2019ನೇ ಸಾಲಿನಲ್ಲಿ 4 ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 10,270 ಪ್ರಕರಣ ಹಾಗೂ 683 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿರುವ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನಕ್ಕೇರಿದೆ. ಈ ಬಾರಿ ಮರಳು ಸಾಗಾಣಿಕೆಗೆ ಸಂಬಂ ಧಿಸಿದ 250ಕ್ಕೂ ಹೆಚ್ಚು ಪ್ರಕರಣಗಳನ್ನು ಗುರುತಿಸಲಾಗಿದೆ. ಲಾರಿಯಲ್ಲಿ ಮರಳು ಸಾಗಾಣಿಕೆಗೆ 50 ಸಾವಿರ, ಟ್ರ್ಯಾಕ್ಟರ್‌ಗೆ 30 ಸಾವಿರ, ಗಾಡಿ 50 ಸಾವಿರ ಹಾಗೂ ಮೋಟಾರ್‌ ಸೈಕಲ್‌ನಲ್ಲಿ ಮರಳು ಸಾಗಾಣಿಕೆ ಮಾಡಿದವರಿಗೆ 3 ಸಾವಿರ ರೂ. ದಂಡ ವಿಧಿಸುವುದರ ಮೂಲಕ ಈ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗುವುದು ಎಂದರು.

ಕಳೆದ ಎರಡ್ಮೂರು ವರ್ಷಗಳಿಂದ ಲೋಕ ಅದಾಲತ್‌ ಹೆಚ್ಚು ಜನಪ್ರಿಯವಾಗುತ್ತಿದೆ. ಜನತಾ ನ್ಯಾಯಾಲಯಗಳು ಇತ್ಯರ್ಥಗೊಳಿಸುವ ಪ್ರಕರಣಗಳ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಲೋಕ ಅದಾಲತ್‌ ಕುರಿತು ಜಿಲ್ಲೆಯಾದ್ಯಂತ ತಾಲೂಕು ಮಟ್ಟದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.