ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹ

Team Udayavani, Feb 8, 2020, 3:53 PM IST

bg-tdy-1

ಬೆಳಗಾವಿ: ಕೃಷಿ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಸೇರಿದಂತೆ ಪ್ರಸಕ್ತ ಸಾಲಿನ ಬಜೆಟ್‌ ನಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂ)ದ ವತಿಯಿಂದ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಸಂಘಟನೆಯ ಯುವ ಅಧ್ಯಕ್ಷ ಸುನೀಲ ಹಂಪಣ್ಣವರ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸದಸ್ಯರು, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯ ಬದಲು ವೈಜ್ಞಾನಿಕ ಬೆಲೆ ನಿಗದಿ ಪಡಿಸುವ ಯೋಜನೆ ಜಾರಿಗೊಳಿಸಬೇಕು. ಸರಕಾರಿ ನೌಕರರ ವೇತನ ಪರಿಷ್ಕರಿಸುವ ಮಾದರಿಯಲ್ಲಿ ಕಾಲ-ಕಾಲಕ್ಕೆ ವೈಜ್ಞಾನಿಕ ಬೆಲೆಗಳ ಪರಿಷ್ಕರಣೆಯಾಗಬೇಕು. ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗಾಗಿ ಸಮಗ್ರ ಜಲ ನೀತಿ ಘೋಷಣೆ ಮಾಡಬೇಕು. ಕಳಸಾ-ಬಂಡೂರಿ ಹಾಗೂ ಮಹದಾಯಿ ಯೋಜನೆಗಳಿಗೆ ಅನುದಾನ ಘೋಷಿಸಬೇಕು ಎಂದು ಆಗ್ರಹಿಸಿದರು.

ಸತತವಾಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿಗಳಿಂದ ತೊಂದರೆಗೊಳಗಾಗುತ್ತಿರುವ ಉತ್ತರ ಕರ್ನಾಟಕ ಭಾಗದ ಜನರ ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸಲು 10 ಸಾವಿರ ಕೋಟಿ ರೂ.ಗಳ ಆಪತ್ತು ನಿಧಿ ಸ್ಥಾಪಿಸಬೇಕು. ಕಾಡು ಪ್ರಾಣಿಗಳ ಹಾವಳಿಯಿಂದ ಹಾನಿಗೊಳಗಾಗುವ ಬೆಲೆಗಳಿಗೆ ವೈಜ್ಞಾನಿಕ ಪರಿಹಾರ ಘೋಷಿಸಬೇಕು. ಕಾಡು ಪ್ರಾಣಿಗಳ ದಾಳಿಯಿಂದ ಪ್ರಾಣ ಕಳೆದುಕೊಳ್ಳುವವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸರಕಾರಿ ನೌಕರಿ ನೀಡಬೇಕು. ಕಾಡು ಪ್ರಾಣಿಗಳು ಹೊಲಗಳಿಗೆ ನುಗ್ಗದಂತೆ ಕಾರಿಡಾರ್‌ಯೋಜನೆ ರೂಪಿಸಬೇಕು ಎಂದು ಹೇಳಿದರು.

ಪಶು ಭಾಗ್ಯ, ಗಂಗಾ ಕಲ್ಯಾಣ ಮುಂತಾದ ಯೋಜನೆಗಳ ಫಲಾನುಭವಿಗಳ ಆಯ್ಕೆಗಾಗಿ ಜನಪ್ರತಿನಿಧಿಗಳಿಲ್ಲದ ಸಮಿತಿ ರಚಿಸಬೇಕು. ಫಲಾನುಭವಿಗಳ ಆಯ್ಕೆ ಬಹಿರಂಗವಾಗಿ ನಡೆಯಬೇಕು. ಬೆಳಗಾವಿಯಲ್ಲಿ ಮಾವು ಮತ್ತು ದ್ರಾಕ್ಷಿ ಸಂರಕ್ಷಣಾ ಘಟಕಗಳನ್ನು ಪ್ರಾರಂಭಿಸಬೇಕು. ರಸಗೊಬ್ಬರ ಹಾಗೂ ಬಿತ್ತನೆಯ ಬೀಜ, ಔಷಧಗಳನ್ನು ಜಿಎಸ್‌ ಟಿಯಿಂದ ಮುಕ್ತಗೊಳಿಸಬೇಕು. ಫಸಲ್‌ ಬಿಮಾ ಯೋಜನೆಯನ್ನು ಕಬ್ಬಿಗೂ ವಿಸ್ತರಿಸಬೇಕು. ಹೊಲಗಳಿಗೆ ಸಂಪರ್ಕ ರಸ್ತೆ ಕಲ್ಪಿಸುವ ಯೋಜನೆ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಭಾರತೀಯ ಕೃಷಿಕ ಸಮಾಜದ ಸುರೇಶ ಮರಲಿಂಗಣ್ಣವರ, ಆರ್‌.ಎಸ್‌. ದರ್ಗೆ, ಅಡಿವೆಪ್ಪ ಕುಂದರಗಿ, ನೇಮಿಚಂದ್ರಾ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.