ಖಾರವಾಯ್ತು ಮೆಣಸಿನಕಾಯಿ!

ಇಳುವರಿಯೂ ಕುಂಠಿತ; ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ಮಾರುಕಟ್ಟೆಯಲ್ಲಿಲ್ಲ ಉತ್ತಮ ಬೆಲೆ

Team Udayavani, Feb 10, 2020, 12:44 PM IST

10-February-9

ಕಂಪ್ಲಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಸಾವಿರಾರು ಎಕರೆಯಲ್ಲಿ ಬೆಳೆಯಲಾಗಿರುವ ಮೆಣಸಿಕಾಯಿ ಫಸಲಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗದಿರುವುದು ಒಂದೆಡೆಯಾದರೆ, ಇಳುವರಿಯೂ ಕಡಿಮೆಯಾಗಿದ್ದು, ಗ್ರಾಹಕರಿಗೆ ಮಾತ್ರ ಬೆಲೆ ಏರಿಕೆ ಬಿಸಿ ಎದುರಾಗಿದೆ.

ತಾಲ್ಲೂಕಿನ ಕಣವಿ ತಿಮ್ಮಲಾಪುರ, ದೇವಸಮುದ್ರ, ಶ್ರೀ ರಾಮರಂಗಾಪುರ, ಸುಗ್ಗೇನಹಳ್ಳಿ, ಉಪ್ಪಾರಹಳ್ಳಿ, ಮೆಟ್ರಿ ಗ್ರಾಮಗಳ ವ್ಯಾಪ್ತಿಯೂ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸುಮಾರು 6250ಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ಡಬ್ಬಿ, ಬ್ಯಾಡಗಿ 5531,
355, 4384 ತಳಿಯ ಮೆಣಸಿನಕಾಯಿ ಬೆಳೆಯನ್ನು ಬೆಳೆಯಲಾಗಿದೆ. ಈ ಭಾರಿ ಮುಂಗಾರು ಮಳೆ ತಡವಾಗಿದ್ದರಿಂದ ಮೆಣಸಿನಕಾಯಿ ಬೆಳೆಗೆ ಮಚ್ಚೆರೋಗ, ಫಂಗಸ್‌ ಕಾಣಿಸಿಕೊಂಡು ಇಳುವರಿ ಕುಸಿದಿದೆ.

ಮೆಣಸಿನಕಾಯಿ ಬೆಳೆ ಬೆಳೆಯಲು ಒಂದು ಎಕರೆಗೆ 1 ಲಕ್ಷದಿಂದ 1.2 ಲಕ್ಷದವರೆಗೆ ವ್ಯಯಿಸಲಾಗಿದ್ದು, ರೈತರು ಎಕರೆಗೆ 18ರಿಂದ 22 ಕ್ವಿಂಟಲ್‌ ಇಳುವರಿ ನಿರೀಕ್ಷೆ ಮಾಡಿದ್ದರು. ಆದರೆ ರೋಗಬಾಧೆಯಿಂದ ಎಕರೆಗೆ 10ರಿಂದ 13 ಕ್ವಿಂಟಲ್‌ ಮಾತ್ರ ಇಳುವರಿ ಬಂದಿದೆ.

ಮಾರುಕಟ್ಟೆಯಲ್ಲಿ ಕ್ವಿಂಟಲ್‌ಗೆ 23 ಸಾವಿರ ರೂ. ಇದ್ದ ಬೆಲೆ ಇದೀಗ ಏಕಾಏಕಿ 13 ಸಾವಿರಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ರೈತರು ಮೆಣಸಿನಕಾಯಿ ಮಾರುಕಟ್ಟೆಗೆ ಸಾಗಿಸಲು ಹಾಗೂ ಜಮೀನಿನಲ್ಲಿರುವ ಮೆಣಸಿನಕಾಯಿಯನ್ನು ಕಟಾವು ಮಾಡಲು ಹಿಂಜರಿಯುವಂತಾಗಿದೆ. ದೇವಸಮುದ್ರ ಗ್ರಾಮದಲ್ಲಿ ಸಾವಿರ ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿದೆ. ರೈತರಾದ ಕುರುಗೋಡು ಗಾಳೆಪ್ಪ ಮೂರುವರೆ ಎಕರೆ, ನಾಯಕರ ವೆಂಕೋಬ 2-3 ಎಕರೆ, ಹೊನ್ನೂರ 2 ಎಕರೆ, ವಿರುಪಣ್ಣ 3, ನಾಯಕರ ಪಂಪಣ್ಣ ಅವರ 2 ಎಕರೆ ಹೊಲದಲ್ಲಿ ಹಾಗೂ ಶ್ರೀರಾಮರಂಗಾಪುರ ವ್ಯಾಪ್ತಿಯಲ್ಲಿ ರೈತರೊಬ್ಬರು 35 ಎಕರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಭೂಮಿಯನ್ನು ಪಡೆದು ಮೆಣಸಿನಕಾಯಿ ಬೆಳೆದಿದ್ದಾರೆ. ಬೆಳೆ ನಿರ್ವಹಣೆ ಹಾಗೂ ಗುತ್ತಿಗೆ 24 ಲಕ್ಷ ರೂ. ಸೇರಿದಂತೆ 35 ಲಕ್ಷ ರೂ. ಖರ್ಚು ಮಾಡಿದ್ದು, ಬೆಲೆ ಕುಸಿತದಿಂದ ಏನು ಮಾಡಬೇಕೆಂದು ತೋಚುತ್ತಿಲ್ಲವೆಂದು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.

ಈ ಭಾಗದಲ್ಲಿ ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಿ ಭತ್ತ ಖರೀದಿ ಕೇಂದ್ರ ಆರಂಭಿಸಿದಂತೆ ಮೆಣಸಿನಕಾಯಿಗೂ ವೈಜ್ಞಾನಿಕ ದರ ನಿಗಧಿ ಪಡಿಸಿ ಖರೀದಿ ಕೇಂದ್ರ ಆರಂಭಿಸಿದಲ್ಲಿ 250 ಕಿಮೀ ದೂರದ ಬ್ಯಾಡಗಿ ಮಾರುಕಟ್ಟೆಗೆ ಹೋಗುವುದು ತಪ್ಪುತ್ತದೆ. ಈ ನಿಟ್ಟಿನಲ್ಲಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ರೈತರಾದ ಕುರುಗೋಡು ಗಾಳೆಪ್ಪ, ನಾಯಕರ ವೆಂಕೋಬ, ಹೊನ್ನೂರ, ನಾಯಕರ ಪಂಪಣ್ಣ, ವಿರುಪಣ್ಣ ಮನವಿ ಮಾಡಿದ್ದಾರೆ.

ತಾಲೂಕಿನಲ್ಲಿ ಸುಮಾರು 6250 ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯನ್ನು ಬೆಳೆದಿದ್ದಾರೆ. ತಡವಾಗಿ ನಾಟಿ ಮಾಡಿದ್ದರಿಂದ ಹಾಗೂ ಅಕಾಲಿಕ ಮಳೆಯಾಗಿದ್ದರಿಂದ ಇಳುವರಿ ಕಡಿಮೆಯಾಗಿದೆ. ಜೊತೆಗೆ ಏಕಕಾಲದಲ್ಲಿ ಮಾರುಕಟ್ಟೆಗೆ ಮೆಣಸಿನಕಾಯಿ ಮಾರಾಟಕ್ಕೆ ಬರುವುದರಿಂದ ಬೆಲೆಯಲ್ಲಿ ಕುಸಿತವಾಗಿದೆ. ಜೊತೆಗೆ ನೆಲದ ಮೇಲೆ ಹಾಕಿ ಒಣಗಿಸುತ್ತಿದ್ದು ಇದರಿಂದ ಅಪ್ಲೋಟಾಕಿನ್‌ ಫಂಗಸ್‌ ತಗುಲುವ ಸಾಧ್ಯತೆ ಇರುವುದರಿಂದ ರೈತರು ತಾಡಪಾಲಿನ ಮೇಲೆ ಒಣಗಿಸಬೇಕು.
ಎಚ್‌. ರಾಜೇಂದ್ರ, ತೋಟಗಾರಿಕಾ
ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ

ಕಂಪ್ಲಿ ತಾಲೂಕಿನಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ರೈತರು ಮೆಣಸಿನಕಾಯಿ ಬೆಳೆಯುತ್ತಿದ್ದು, ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ದೊರೆಯುವ ತನಕ ಫಸಲನ್ನು ರಕ್ಷಿಸಿಕೊಳ್ಳಲು ಕೋಲ್ಡ್‌ ಸ್ಟೋರೇಜ್‌ ನಿರ್ಮಿಸಬೇಕು.
ಅಳ್ಳಳ್ಳಿ ವಿರೇಶ,
ಎಪಿಎಂಸಿ ಮಾಜಿ ಅಧ್ಯಕ್ಷ ದೇವಸಮುದ್ರ

„ಜಿ.ಚಂದ್ರಶೇಖರಗೌಡ

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.