ವಿಜೃಂಭಣೆಯ ಸಕಲೇಶ್ವರ ಸ್ವಾಮಿ ಮಹಾ ರಥೋತ್ಸವ

Team Udayavani, Feb 11, 2020, 3:00 AM IST

vijrumbane

ಸಕಲೇಶಪುರ: ಸಕಲೇಶ್ವರಸ್ವಾಮಿ ಮಹಾ ರಥೋತ್ಸವ ಸೋಮವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ಸಕಲೇಶ್ವರಸ್ವಾಮಿ ಜಾತ್ರೋತ್ಸವದ ಅಂಗವಾಗಿ ಶುಕ್ರವಾರದಿಂದ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿವಿಧ ಪೂಜೆ ಕೈಂಕರ್ಯಗಳು ಆರಂಭಗೊಂಡಿದ್ದು, ಶನಿವಾರ ರಾತ್ರಿ ಗಿರಿಜಾ ಕಲ್ಯಾಣ ಕಾರ್ಯಕ್ರಮ ನಡೆಯಿತು.

ಭಾನುವಾರ ಸಕಲೇಶ್ವರಸ್ವಾಮಿ ಉತ್ಸವ ಮೂರ್ತಿಯನ್ನು ಬ್ರಾಹ್ಮಣರ ಬೀದಿಯಲ್ಲಿ ಮೆರವಣಿಗೆ ನಡೆಸಿದ ನಂತರ ಘಳಿಗೆ ತೇರನ್ನು ಎಳೆಯಲಾಗಿತ್ತು. ಸೋಮವಾರ ವಿವಿಧ ಪೂಜೆ ಕಾರ್ಯಗಳನ್ನು ನಡೆಸಿದ ನಂತರ 12 ಗಂಟೆಗೆ ಸರಿಯಾಗಿ ದಿವ್ಯ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಈಡುಗಾಯಿ ಒಡೆದ ಭಕ್ತರು: ಬ್ರಾಹ್ಮಣರ ಬೀದಿ ಮೂಲಕ ಮುಖ್ಯರಸ್ತೆಯಲ್ಲಿ ಪುರಸಭೆವರೆಗೆ ಎಳೆದು ನಂತರ ರಥವನ್ನು ಸಂಜೆ 7 ಗಂಟೆ ವೇಳೆಗೆ ಹಿಂತಿರುಗಿ ಎಳೆದು ತಂದು ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ವೇಳೆ ಸಾವಿರಾರು ಭಕ್ತಾದಿಗಳು ಹಣ್ಣುಕಾಯಿ,ಇಡುಗಾಯಿ ಅರ್ಪಿಸಿ ಪುನಿತರಾದರು. ಮುಖ್ಯ ಬೀದಿಯ ಹಲವರು ರಥಕ್ಕೆ ಆರತಿ ಬೆಳಗುವ ಮೂಲಕ ಸ್ವಾಗತಿಸಿದರು.

ಯುವಕರು ರಥದ ಮೇಲೆ ಬಾಳೆಹಣ್ಣು ಬೀರುವುದರಲ್ಲಿ ಸಂತಸ ಕಂಡರು. ಸಾವಿರಾರು ಯುವಕರು ವಾದ್ಯ ವೃಂದಕ್ಕೆ ನರ್ತನ ಮಾಡಿದರು. ರಥೋತ್ಸವದ ಅಂಗವಾಗಿ ಪಟ್ಟಣದ ಮುಖ್ಯ ಬೀದಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಅಶೋಕ ರಸ್ತೆ ಹಾಗೂ ಅಜಾದ್‌ ರಸ್ತೆಯ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಅನ್ನ ಸಂತರ್ಪಣೆ: ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಪುರಸಭೆಯವರೆಗೆ ಹಲವೆಡೆ ವಿವಿಧ ಸಂಘಸಂಸ್ಥೆಗಳಿಂದ ಅನ್ನಸಂತರ್ಪಣೆ, ಮಜ್ಜಿಗೆ,ಐಸ್‌ಕ್ರೀಮ್‌ ಹಾಗೂ ತಂಪು ಪಾನೀಯ ವಿತರಣೆ ಮಾಡಲಾಯಿತು. ಸಾವಿರಾರು ಯುವಕರು ತೇರಿನಲ್ಲಿ ಭಾಗಿಯಾಗಿದ್ದು, ಅಲ್ಲಲ್ಲಿ ಯುವಕರ ಗುಂಪುಗಳ ನಡುವೆ ಸಣ್ಣಪುಟ್ಟ ಘರ್ಷಣೆಗಳು ನಡೆಯುತ್ತಲೇ ಇತ್ತು.

ಎರಡು ಗುಂಪುಗಳ ನಡುವೆ ಘರ್ಷಣೆ ಮಿತಿ ಮೀರಿದಾಗ ಪೋಲಿಸರು ಲಾಠಿ ಚಾರ್ಜ್‌ ಮೂಲಕ ಗುಂಪನ್ನು ಚದುರಿಸಿದ ಘಟನೆ ನಡೆಯಿತು. ಸಕಲೇಶಪುರ ಪುರಸಭಾ ಸದಸ್ಯರು, ರಾಜಕೀಯ ಮುಖಂಡರು ರಥೋತ್ಸವದಲ್ಲಿ ಭಾಗಿಯಾಗಿದ್ದರು. ರಥೋತ್ಸವದ ಅಂಗವಾಗಿ ಪಟ್ಟಣದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋ ಬಸ್ತ್ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.