ರಾಜ್ಯದ ಬಿಲ್ಡರ್ಸ್ ಸಮಸ್ಯೆ ಬಗೆಹರಿಸಲು ಸರಕಾರ ಸಿದ್ದ: ಉದ್ಧವ್‌ ಠಾಕ್ರೆ


Team Udayavani, Feb 11, 2020, 5:05 PM IST

Uddav-Thackeray

ಮುಂಬಯಿ: ರಾಜ್ಯದ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರಕಾರ ಸಿದ್ಧವಾಗಿದೆ. ಆದರೆ ಬಿಲ್ಡರ್ಸ್ ಕೂಡ ತಮಗಾಗಿ ರೂಪಿಸಲಾಗಿರುವ ಕಾನೂನುಗಳನ್ನುಯನ್ನು ಪಾಲಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಸಹ್ಯಾದ್ರಿ ಅತಿಥಿಗೃಹದಲ್ಲಿ ಕ್ರೆಡಾಯಿ -ನರೆಡ್ಕೊ ಸಂಘಟನೆಯೊಂದಿಗೆ ಸಭೆ ಆಯೋಜಿಸಲಾಯಿತು. ಈ ವೇಳೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಮಾತನಾಡಿ, ರಾಜ್ಯದ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಕರ ಸಮಸ್ಯೆಗಳನ್ನು ಪರಿಹರಿಸಲು ತ್ವರಿತ ಪ್ರತಿಕ್ರಿಯೆ ವಿಂಡೋವನ್ನು ಸ್ಥಾಪಿಸಲಾಗುವುದು ಮತ್ತು ಅದರ ಅಡಿಯಲ್ಲಿ ಸ್ಟೀರಿಂಗ್‌ ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದರು.

ಈ ಸ್ಟೀರಿಂಗ್‌ ಸಮಿತಿಯಲ್ಲಿ ಗೃಹ ಸಚಿವ ಜಿತೇಂದ್ರ ಅವಾಡ್‌, ನಗರಾಭಿವೃದ್ಧಿ ಸಚಿವ ಏಕನಾಥ್‌ ಶಿಂಧೆ, ಸಾರಿಗೆ ಸಚಿವ ಅನಿಲ್‌ ಪರಬ್‌, ನೆರೆಡ್ಕೋ ಸಂಸ್ಥೆಯ ಅಧ್ಯಕ್ಷ ನಿರಂಜನ್‌ ಹಿರಾನಂದಾನಿ, ರಾಜನ್‌ ಬಾಂದಲೇಕರ್‌, ನಯನ್‌ ಶಾ, ಶಾಹಿದ್‌ ಬಲ್ವಾ, ಬೌಮನ್‌ ಇರಾನಿ, ಅಜಯ್‌ ಆಶರ್‌ , ವಿನೋದ್‌ ಗೋಯೆಂಕಾ, ಡೊಮಿನಿಕ್‌ ರೊಮೆಲ್‌ ಮತ್ತು ದಿಲೀಪ್‌ ಠಕ್ಕರ್‌ ಸೇರಿದ್ದಾರೆ.

ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮಾತನಾಡಿ, ವಸತಿ ವಲಯವು ಇಂದು ಅನೇಕ ತೊಂದರೆಗಳನ್ನು ಎದುರಿಸುತ್ತಿದೆ ಎಂದು ಹೇಳಿದರು. ಸರಕಾರ ಮತ್ತು ಅಭಿವರ್ಧಕರು ತಂಡವಾಗಿ ಕೆಲಸ ಮಾಡಿದರೆ ಮಾತ್ರ ನಾವು ಈ ಸಮಸ್ಯೆಗಳನ್ನು ನಿವಾರಿಸಬಹುದು. ರೋಟಿ, ಬಟ್ಟೆ ಮತ್ತು ಮನೆ ಒದಗಿಸುವುದು ಇದು ಸರಕಾರದ ಜವಾಬ್ದಾರಿಯಾಗಿದೆ.

ಹಾಗೆಯೇ ಕೊಳೆಗೇರಿ ನಿವಾಸಿಗಳಿಗೆ ತಮ್ಮ ಹಕ್ಕಿನ ಮನೆ ನೀಡಲು ಸರಕಾರ ಪ್ರಯತ್ನಿಸುತ್ತಿದೆ. ಕೊಳೆಗೇರಿ ಪುನರ್ವಸತಿ ಯೋಜನೆಯು ಯಾವ ಕಾರಣದಿಂದ ಮಂದಗತಿ ಕಂಡಿತು, ಇದನ್ನು ಹೇಗೆ ಬಗೆಹರಿಸಲಾಗುವುದು , ಆ ನಿಟ್ಟಿನಲ್ಲಿ ನೀತಿಯನ್ನು ಅಳವಡಿಸಬೇಕೆಂದು ಸಿಎಂ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಈ ವೇಳೆ ನಗರ ಅಭಿವೃದ್ಧಿ ಸಚಿವ ಏಕನಾಥ್‌ ಶಿಂಧೆ ಮಾತನಾಡಿ, ಈ ವಸತಿ ಕ್ಷೇತ್ರದ ಸ್ಥಿತಿಯನ್ನು ಸುಧಾರಿಸಲು ಸರಕಾರ ಪ್ರಯತ್ನಿಸುತ್ತಿದೆ. ಹಾಗೆಯೇ ಅಭಿವರ್ಧಕರ ಬೇಡಿಕೆಗಳ ಬಗ್ಗೆ ಸರಕಾರ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಿದೆ. ಆದ್ದರಿಂದ ಅಭಿವರ್ಧಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ ಸರಕಾರ ಅದಕ್ಕೆ ಅಧಿಕ ಗಮನ ಹರಿಸಲಿದೆ ಎಂದು ಹೇಳಿದ್ದಾರೆ.

ಈ ವೇಳೆ ವಸತಿ ಸಚಿವ ಜಿತೇಂದ್ರ ಅವಾಡ್‌ ಮಾತನಾಡಿ, ವಸತಿ ವಲಯದಲ್ಲಿ ಕೊಳೆಗೇರಿಗಳನ್ನು ತೆಗೆದುಹಾಕಲು ಕಳೆದ ತಿಂಗಳು ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಹಾಗೆಯೇ ಕೊಳೆಗೇರಿ ಪುನರ್ವಸತಿಗಾಗಿ ಹಲವಾರು ಯೋಜನೆಗಳು ಈಗ ನಡೆಯುತ್ತಿವೆ.

ಬಡವರಿಗೆ ಕೈಗೆಟುಕುವ ವಸತಿ ಒದಗಿಸಲು ಸರಕಾರ ಬದ್ಧವಾಗಿದೆ. ನಾಲ್ಕನೇ ಶ್ರೇಣಿಯ ಸರಕಾರಿ ನೌಕರರಿಗೆ ಮತ್ತು ಪೊಲೀಸರಿಗೆ ಶೇ.10 ರಷ್ಟು ಮನೆಗಳನ್ನು ಕಾಯ್ದಿರಿಸಲು ಸರಕಾರ ನಿರ್ಧರಿಸಿದೆ. ವಸತಿ ಕ್ಷೇತ್ರದ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸಲು ಬ್ಯಾಂಕ್‌ಗಳೊಂದಿಗೆ ಹಲವಾರು ಸಭೆಗಳನ್ನು ನಡೆಸಲಾಗಿದೆ ಎಂದರು.

ಟಾಪ್ ನ್ಯೂಸ್

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.