ಏಳು ಬಾಲ ಕಾರ್ಮಿಕರ ರಕ್ಷಣೆ

ಮಕ್ಕಳ ಸಹಾಯವಾಣಿ-ಪೊಲೀಸ್‌ ಸಿಬ್ಬಂದಿ ದಾಳಿ ಸುಗ್ಗೇನಹಳ್ಳಿ ಗ್ರಾಪಂ ವ್ಯಾಪ್ತಿಯ ಮಕ್ಕಳು

Team Udayavani, Feb 12, 2020, 1:23 PM IST

12-February-10

ಕಂಪ್ಲಿ: ತಾಲೂಕಿನ ಸುಗ್ಗೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಳ್ಳಿ ಮತ್ತು ಶ್ರೀರಾಮರಂಗಾಪುರ ಗ್ರಾಮಗಳ ಮೆಣಸಿನಕಾಯಿ ಜಮೀನುಗಳಿಗೆ ಕಾರ್ಮಿಕ, ಮಕ್ಕಳ ಸಹಾಯವಾಣಿ, ಪೊಲೀಸ್‌ ಇಲಾಖೆ ಸಿಬ್ಬಂದಿ ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಶಾಲೆ ಬಿಟ್ಟು ಕೃಷಿ ಕೆಲಸದಲ್ಲಿ ನಿರತರಾಗಿದ್ದ 7 ಮಕ್ಕಳನ್ನು ರಕ್ಷಣೆ ಮಾಡಿ, ಶಾಲೆಗೆ ಮಕ್ಕಳನ್ನು ಪುನಃ ದಾಖಲಿಸಿ ಹಾಗೂ ಮಕ್ಕಳ ಪಾಲಕರಿಂದ ಮುಚ್ಚಳಿಕೆ ಬರೆಸಿಕೊಂಡ ಘಟನೆ ಮಂಗಳವಾರ ಜರುಗಿದೆ.

ಬಳ್ಳಾರಿ ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿಗಳು ಆರಂಭಿಸಿರುವ “ಇ-ಸ್ಪಂದನ’ ಕೋಶದಲ್ಲಿ ಕಂಪ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಲೆ ಬಿಟ್ಟ ಅನೇಕ ಮಕ್ಕಳು ಕೃಷಿ ಕೆಲಸಗಳಿಗೆ ಹೋಗುತ್ತಿದ್ದಾರೆಂದು ದೂರು ದಾಖಲಾದ ಹಿನ್ನೆಲೆಯಲ್ಲಿ ಮಂಗಳವಾರ ದಾಳಿ ನಡೆಸಿದ್ದು, ಮೆಣಸಿನ ಕಾಯಿ ಕೀಳುವ ಕೃಷಿ ಕೆಲಸದಲ್ಲಿ ನಿರತರಾಗಿದ್ದ 5 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.

ಜೊತೆಗೆ ಹೊನ್ನಳಿ ಗ್ರಾಮದ ಕ್ರಾಸನಲ್ಲಿ ಟ್ರ್ಯಾಕ್ಟರ್‌ನಲ್ಲಿ ಕೃಷಿ ಕೆಲಸಕ್ಕೆ ತೆರಳುತ್ತಿದ್ದ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಕೃಷಿ ಕೆಲಸದಲ್ಲಿ ತೊಡಗಿದ್ದ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಯವರೆಗೆ ವಿದ್ಯಾಭ್ಯಾಸ ಮಾಡುವ ಮಕ್ಕಳಾಗಿದ್ದು, ಇವರೆಲ್ಲರೂ ಶಾಲೆಯನ್ನು ಅರ್ಧಕ್ಕೆ ಬಿಟ್ಟವರಾಗಿದ್ದು, ಈ ಬಗ್ಗೆ ಶಾಲೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ಪುನಃ ಶಾಲೆಗೆ ಪುನರ್‌ ದಾಖಲಿಸಲಾಗಿದೆ. ಮಕ್ಕಳನ್ನು ಸಾಗಿಸುತ್ತಿದ್ದ ವಾಹನಗಳ ಚಾಲಕರಿಗೆ, ಮಾಲೀಕರಿಗೆ, ಜಮೀನಿನ ಮಾಲೀಕರಿಗೆ, ಎಚ್ಚರಿಕೆ ನೀಡಿ ಮತ್ತೂಮ್ಮೆ ಇಂತಹ ಘಟನೆಗಳು ಮರುಕಳಿಸಿದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಸೂಚಿಸಿದ್ದಾರೆ.

ಹೊಸಪೇಟೆ ತಾ.ಮಕ್ಕಳ ಸಹಾಯವಾಣಿ ಕೇಂದ್ರದ ಸಂಯೋಜಕ ಚಿದಾನಂದ ಮಾತನಾಡಿ, ತಾಲೂಕಿನ ಕಡೆ ಗ್ರಾಮವಾಗಿರುವುದರಿಂದ ಇಲ್ಲಿ ಮಕ್ಕಳ ಬಗ್ಗೆ ಗಮನ ಹರಿಸಿದೇ ಇರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದರು.

ದಾಳಿಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ 2ನೇ ವೃತ್ತದ ಕಾರ್ಮಿಕ ನಿರೀಕ್ಷಕ ಭೂಪಾಲ್‌, ಕುಡುತಿನಿ ಠಾಣೆಯ ಎಎಸ್‌ಐ ವೆಂಕಟೇಶ್‌, ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ, ಮಕ್ಕಳ ಸಹಾಯವಾಣಿಯ ಸಂಯೋಜಕ ಚಿದಾನಂದ, ನೇತ್ರಾ, ಹೊನ್ನಾಳಿ ಶಾಲೆಯ ಎಸ್‌ಡಿಎಂಸಿ ಪದಾಧಿಕಾರಿಗಳಾದ ದ್ಯಾವಣ್ಣ, ಸುಭಾನಿ ಮತ್ತು ಮುಖ್ಯಗುರುಗಳು ಭಾಗವಹಿಸಿದ್ದರು. ನಂತರ ಹೊನ್ನಳ್ಳಿ ಶಾಲೆಯಲ್ಲಿ ಮಕ್ಕಳಿಗೆ ಮತ್ತು ಪಾಲಕರಿಗೆ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.