ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಜನತೆಯೇ ಕಾರಣ: ಸಿಂಪಿ


Team Udayavani, Feb 13, 2020, 11:11 AM IST

13-February-2

ಶಹಾಬಾದ: ಕಲಬುರಗಿಯಲ್ಲಿ ನಡೆದ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿಕ್ಕೆ ನಾಡಿನ ಸಮಸ್ತ ಜನತೆಯೇ ಮೂಲ ಕಾರಣ. ಇದರಲ್ಲಿ ನನ್ನದಾದ ಯಾವುದೇ ಪಾತ್ರ ಇಲ್ಲ ಎಂದು ಕಸಾಪ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ ಹೇಳಿದರು.

ಬುಧವಾರ ಕಸಾಪ ಕಲಬುರಗಿ ಗ್ರಾಮೀಣ ವತಿಯಿಂದ ನಗರದ ಕನ್ನಡ ಭವನದಲ್ಲಿ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದ್ದಕ್ಕೆ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು.

ಜನರ ಆಶೀರ್ವಾದದಿಂದ ಕಸಾಪ ಅಧ್ಯಕ್ಷನಾದೆ. ನನಗೆ ನೀಡಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಜಿಲ್ಲಾಧಿಕಾರಿಗಳು ಹಗಲು-ರಾತ್ರಿ ಎನ್ನದೇ ಕಾರ್ಯ ನಿರ್ವಹಿಸಿದ್ದಾರೆ. ಉಸ್ತುವಾರಿ ಸಚಿವರು, ಶಾಸಕರು, ಅಧಿ ಕಾರಿ ವರ್ಗದವರು, ಪೌರಕಾರ್ಮಿಕರು, ಪೊಲೀಸ್‌ ಇಲಾಖೆ, ಮಾಧ್ಯಮ ವರ್ಗ ಸೇರಿದಂತೆ ಕಾಣದ ಕೈಗಳು ಹಾಗೂ ಸಮಸ್ತ ನಾಡಿನ ಜನತೆ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಿರುವುದು ತುಂಬಾ ಸಂತೋಷ ತಂದಿದೆ ಎಂದರು.

ಇಲ್ಲಿಯವರೆಗೆ ನಡೆದ 84 ಸಮ್ಮೇಳನಗಳಿಗಿಂತ ಅಭೂತಪೂರ್ವ ಯಶಸ್ಸು ಕಂಡಿರುವುದಕ್ಕೆ ಕನ್ನಡಾಭಿಮಾನಿಗಳೇ ಕಾರಣ. ಕಲಬುರಗಿಯಲ್ಲಿ ನಡೆಯುವ ಸಮ್ಮೇಳನ ರಾಜ್ಯದಲ್ಲೇ ಮಾದರಿಯಾಗಬೇಕು. ಜಿಲ್ಲೆಗೆ ಹೆಸರು ತರುವಂಥ ಕೆಲಸ ಮಾಡಬೇಕು ಎನ್ನುವ ಗುರಿ ಹೊಂದಿದ್ದೆ. ಅದು ಎಲ್ಲರ ಸಾಮೂಹಿಕ ಪ್ರಯತ್ನದಿಂದ ನೆರವೇರಿದೆ ಎಂದರು.

ಸಮ್ಮೇಳನ ಎಂದರೆ ಟೀಕೆಗಳು, ಅಪಸ್ವರಗಳು ಕೇಳಿ ಬರುವುದು ಸಹಜ. ಯಾವುದನ್ನು ಹಚ್ಚಿಕೊಳ್ಳದೇ ಕಲಬುರಗಿ ಜಿಲ್ಲೆ ಹೆಸರನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡೋಣ. ಎಲ್ಲರೂ ಸಹಕಾರ ನೀಡಿ ಎಂದು ಮನವಿ ಮಾಡಿಕೊಂಡಿದ್ದೆ. ಈ ಮಣ್ಣಿನ ನೆಲ, ಕಡಕೋಳ ಮಡಿವಾಳವಪ್ಪ ಅವರ ಶಕ್ತಿಯಿಂದ ಸಮ್ಮೇಳನ ಯಶಸ್ವಿಯಾಗಿ ಐತಿಹಾಸಿಕ ಪುಟಗಳಲ್ಲಿ ಸೇರುವಂಥ ಕೆಲಸವನ್ನು ಮಹಾಜನತೆ ಮಾಡಿದೆ ಎಂದು ಹೇಳಿದರು.

ಕಸಾಪ ನಗರಾಧ್ಯಕ್ಷ ಮಲ್ಲಿಕಾರ್ಜುನ ಪಟ್ಟಣಕರ್‌ ಮಾತನಾಡಿ, ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ, ಇತಿಹಾಸದ ಪುಟಗಳಲ್ಲಿ ಸೇರುವಂತಾಗಲು ಕಸಾಪ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ ಹಾಗೂ ಜಿಲ್ಲಾಧಿಕಾರಿ ಶ್ರಮವೇ ಕಾರಣ ಎಂದರು.

ಲೋಹಿತ್‌ ಕಟ್ಟಿ, ಕಸಾಪ ಕಲಬುರಗಿ ಗ್ರಾಮೀಣ ವಲಯದ ಅಧ್ಯಕ್ಷ ಶರಣಗೌಡ ಪಾಟೀಲ, ತಾಲೂಕಾಧ್ಯಕ್ಷ ಮೃತ್ಯುಂಜಯ ಹಿರೇಮಠ, ಜಾನಪದ ಸಾಹಿತ್ಯ ಪರಿಷತ್‌ ಅಧ್ಯಕ್ಷ ರಾಜಶೇಖರ ದೇವರಮನಿ, ಕನಕಪ್ಪ ದಂಡಗುಲಕರ್‌ ಮಾತನಾಡಿದರು.

ಸಾಹಿತಿ ಸಿದ್ದಲಿಂಗಯ್ಯ ಹಿರೇಮಠ, ಅಪ್ಪು ನಾಗಶೆಟ್ಟಿ, ಸಿದ್ರಾಮಪ್ಪ ಮುದಿಗೌಡ, ಡಾ| ಅಹ್ಮದ್‌ ಪಟೇಲ್‌, ವೈಜನಾಥ ಹುಗ್ಗಿ, ಬಸವರಾಜ ಮದ್ರಕಿ, ಬಸವರಾಜ ಬಿರಾದಾರ, ಅರುಣ ಜಾಯಿ, ಜಗದೀಶ ಇಂಗಿನ, ಉಮೇಶ ಪೂಜಾರಿ ಮತ್ತಿತರರು ಇದ್ದರು. ಭರತ್‌ ಧನ್ನಾ ನಿರೂಪಿಸಿದರು, ರವಿ ಬೆಳಮಗಿ ಸ್ವಾಗತಿಸಿದರು, ಶಾಂತಪ್ಪ ಹಡಪದ ವಂದಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.