ಪೊಲೀಸ್‌ ತನಿಖೆಗೆ ಆಸಕ್ತಿ ಮುಖ್ಯ

ಆಧುನಿಕ ತಂತ್ರಜ್ಞಾನದಿಂದಾಗಿ ತನಿಖೆ ಸರಳ-ಸುಲಭ ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಿ

Team Udayavani, Feb 17, 2020, 11:42 AM IST

17-February-4

ದಾವಣಗೆರೆ: ಪೊಲೀಸ್‌ ಅಧಿಕಾರಿ, ಸಿಬ್ಬಂದಿಗಳು ಆಸಕ್ತಿ, ವೈಜ್ಞಾನಿಕತೆ, ಅನ್ವೇಷಣಾಶೀಲತೆಯಿಂದ ಪ್ರತಿಯೊಂದು ಪ್ರಕರಣದ ತನಿಖೆ ನಡೆಸಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಸಲಹೆ ನೀಡಿದ್ದಾರೆ.

ಭಾನುವಾರ ಜಿಲ್ಲಾ ಪೊಲೀಸ್‌ ಸಭಾಂಗಣದಲ್ಲಿ ಎರಡು ದಿನಗಳ ವಲಯ ಮಟ್ಟದ ಪೊಲೀಸ್‌ ಕರ್ತವ್ಯ ಕೂಟ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪಘಾತ ಒಳಗೊಂಡಂತೆ ಪ್ರತಿ ಪ್ರಕರಣದ ತನಿಖೆಯಲ್ಲಿ ಆಸಕ್ತಿ ಎನ್ನುವುದು ಪ್ರಮುಖ ಪಾತ್ರ ವಹಿಸುತ್ತದೆ. ಆಸಕ್ತಿ ಪ್ರಶ್ನೆಗಳಿಗೆ ಕಾರಣವಾಗುತ್ತಾ ಪ್ರಕರಣದ ಮೂಲ ಪತ್ತೆ ಹಚ್ಚಲು ನೆರವಾಗುತ್ತದೆ. ಆಸಕ್ತಿ, ಅನ್ವೇಷಣಾಶೀಲತೆ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಯಾವುದೇ ಪ್ರಕರಣದ ತನಿಖೆ ಸರಳವಾಗಿರಬೇಕು. ತನಿಖೆ ಸರಳವಾಗಿರದೇ ಹೋದಲ್ಲಿ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ಮುಂದೆ ಸಾಕ್ಷ್ಯಾ ಧಾರಗಳ ಸಾಬೀತುಪಡಿಸಲು ಆಗುವುದೇ ಇಲ್ಲ. ಪ್ರಕರಣದ ತನಿಖೆಯಲ್ಲಿ ಅತಿಯಾದ ಸಂಕೀರ್ಣತೆಗೆ ಹೋಗದೆ ಅತೀ ಸರಳವಾಗಿ ತನಿಖೆ ಕೈಗೊಳ್ಳಬೇಕು ಎಂದು ತಿಳಿಸಿದರು.

ಪ್ರತಿ ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ತನಿಖೆ ಕೈಗೊಳ್ಳುವಲ್ಲಿ ಆಸಕ್ತಿ ಇರುವುದು ಮುಖ್ಯ. ಆಸಕ್ತಿಯೊಂದಿಗೆ ತನಿಖಾ ಅನ್ವೇಷಣೆಯಲ್ಲಿ ತೊಡಗಿಕೊಂಡರೆ ಎಂತಹ ತನಿಖೆಯನ್ನಾದರೂ ಮಾಡಬಹುದು. ವೈಜ್ಞಾನಿಕವಾಗಿಯೂ ತನಿಖೆ ನಡೆಸುವುದು ಸಹ ಮುಖ್ಯ. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಸುಲಭವಾಗಿ ಮತ್ತು ಸರಳವಾಗಿ ತನಿಖೆ ಮಾಡಬಹುದು. ತಂತ್ರಜ್ಞಾನವನ್ನ ಉಪಯೋಗಿಸಿಕೊಳ್ಳುವ ಆಸಕ್ತಿ ಬೇಕಿದೆ ಎಂದು ತಿಳಿಸಿದರು.

ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ನೂರಾರು ಸಾಕ್ಷ್ಯ ಸಿಗುತ್ತವೆ. ಘಟನಾ ಸ್ಥಳಕ್ಕೆ ತೆರಳುವ ಯಾವುದೇ ಅಧಿಕಾರಿ, ಸಿಬ್ಬಂದಿ ಮೊದಲು ಪ್ರಾಥಮಿಕ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಗಳ ಸಂಗ್ರಹಕ್ಕೆ ಮುಂದಾಗಬೇಕು. ಆದರೆ, ಅದು ನಡೆಯುತ್ತಲೇ ಇಲ್ಲ. ಘಟನೆ ನಡೆದ ಇಲ್ಲವೇ ಸಂಭವಿಸಿದ 2-3 ಗಂಟೆ ನಂತರ ಶ್ವಾನದಳ, ಬೆರಳಚ್ಚು ತಜ್ಞರಿಗೆ ಮಾಹಿತಿ ನೀಡುವುದು ಇದೆ. ಸಮಯ ಎನ್ನುವುದು ಅತೀ ಮುಖ್ಯ. ಸಮಯ ಕಳೆದಂತೆ ಸಾಕ್ಷ್ಯಗಳು ಸಿಗುವ ಸಾಧ್ಯತೆ ಕಡಿಮೆ ಆಗುತ್ತಾ ಹೋಗುತ್ತದೆ ಎಂದು ತಿಳಿಸಿದರು.

ಘಟನಾ ಸ್ಥಳಕ್ಕೆ ಹೋಗುವ ಯಾರೆಯೇ ಆಗಲಿ ತಕ್ಷಣಕ್ಕೆ ಶ್ವಾನದಳ, ಬೆರಳಚ್ಚು ತಜ್ಞರಿಗೆ ಮಾಹಿತಿ ನೀಡಿ, ಸ್ಥಳಕ್ಕೆ ಕರೆಸಿಕೊಳ್ಳಬೇಕು. ಅದಕ್ಕೆ ಜಿಲ್ಲಾ ರಕ್ಷಣಾಧಿಕಾರಿಯ ಅನುಮತಿ, ಆದೇಶವೇ ಬೇಕಾಗಿಲ್ಲ. ಪ್ರತಿ ಪ್ರಕರಣದ ತನಿಖೆಯನ್ನ ಎಲ್ಲ ಹಂತಗಳಲ್ಲಿ ನಿಗದಿತ ಕ್ರಮಗಳನ್ನು ಕೈಗೊಂಡು ಆಸಕ್ತಿಯಿಂದ ತನಿಖೆ ನಡೆಸಬೇಕು ಎಂದು ತಿಳಿಸಿದರು.

ಪೊಲೀಸ್‌ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸದಾ ಸಮಾಜದೊಂದಿಗೆ ಒಡನಾಟ ಹೊಂದಿರಬೇಕಾಗುತ್ತದೆ. ಕೆಟ್ಟವರಿಂದ ಒಳ್ಳೆಯವರಿಗೆ ತೊಂದರೆ ಆಗದಂತೆ ಕರ್ತವ್ಯ ನಿರ್ವಹಣೆ ಮಾಡಬೇಕಾಗುತ್ತದೆ. ಹಾಗಾಗಿ ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳುವುದು ಅತೀ ಮುಖ್ಯ ಎಂದು ತಿಳಿಸಿದರು.

ಕಳೆದ ಆರು ತಿಂಗಳಲ್ಲಿ ಬೆರಳಚ್ಚು ವಿಭಾಗದ ರುದ್ರೇಶ್‌ ಮತ್ತವರ ತಂಡದ ಆಸಕ್ತಿಯಿಂದ ಅನೇಕ ಪ್ರಕರಣ ಪತ್ತೆ ಹಚ್ಚಲು ಸಾಧ್ಯವಾಗಿದೆ. ಪ್ರತಿ ಠಾಣೆಯಲ್ಲೂ ಪ್ರತಿಭಾವಂತ, ಕೌಶಲ್ಯ, ಆಸಕ್ತಿಯ ಸಿಬ್ಬಂದಿ,ಅಧಿಕಾರಿಗಳು ಇದ್ದಾರೆ. ಪ್ರತಿಯೊಬ್ಬರಲ್ಲಿನ ವಿಶೇಷ ಸಾಮರ್ಥ್ಯ, ಕೌಶಲ್ಯವನ್ನ ಸಮರ್ಥವಾಗಿ ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಕ್ರೀಡಾಕೂಟ ಉದ್ಘಾಟಿಸಿದ ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್‌ ಮುದಜ್ಜಿ ಮಾತನಾಡಿ, ಕರ್ತವ್ಯ ಕೂಟದ ಮೂಲಕ ಇಲಾಖೆಯ ತನಿಖೆಯ ಸಾಮರ್ಥ್ಯ ಹೆಚ್ಚಿಸಬಹುದಾಗಿದೆ. ಸಾಮಾನ್ಯ ಜನರ ದೃಷ್ಟಿಯಲ್ಲಿ ಫೋಟೋಗ್ರಫಿ, ವಿಡಿಯೋಗ್ರಫಿ ಒಂದು
ತೆರನಾಗಿದೆ. ಆದರೆ, ಪೊಲೀಸ್‌ ಇಲಾಖೆಯಲ್ಲಿ ಅದಕ್ಕೆ ವಿಶೇಷ ಅರ್ಥವಿರುತ್ತದೆ. ತನಿಖೆಯಲ್ಲಿ ಫೋಟೊದ ವಿವರಣೆ ದೊಡ್ಡದು ಮತ್ತು ವಿಭಿನ್ನವಾದುದು ಎಂದು ತಿಳಿಸಿದರು.

ಎಸ್‌ಸಿಆರ್‌ಬಿ ಹಿರಿಯ ಕಾರ್ಯಕ್ರಮಾಧಿಕಾರಿ ಎನ್‌. ನಾಗೇಶ್‌ ಪ್ರಾಸ್ತಾವಿಕ ಮಾತುಗಳಾಡಿದರು. ಅಭಿಯೋಗ ಉಪನಿರ್ದೇಶಕಕಿ ಕೆ.ಜೆ ಕಲ್ಪನಾ, ವಿಧಿ ವಿಜ್ಞಾನ ವಿಭಾಗದ ಉಪನಿರ್ದೇಶಕಿ ಛಾಯಾಕುಮಾರಿ ಇದ್ದರು. ಮಲ್ಲಿಕಾರ್ಜುನ ಶಾನುಭೋಗ ಪ್ರಾರ್ಥಿಸಿದರು. ಡಿಎಆರ್‌ ಉಪಾಧೀಕ್ಷಕ ಬಿ.ಪಿ. ಪ್ರಕಾಶ್‌ ಸ್ವಾಗತಿಸಿದರು. ದೇವರಾಜ್‌ ನಿರೂಪಿಸಿದರು. ಚಂದ್ರಶೇಖರ್‌ ವಂದಿಸಿದರು. ಕಳೆದ ಸಾಲಿನ ರಾಷ್ಟ್ರ ಮಟ್ಟದ ಪೊಲೀಸ್‌ ಕರ್ತವ್ಯ ಕೂಟದ ಫೋಟೋಗ್ರಫಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುವ ಕೆ.ಪಿ. ದುಗ್ಗೇಶ್‌, ಬೆರಳಚ್ಚು ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಕಿರಣ್‌ಕುಮಾರ್‌ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.