ರಾಜ್ಯಪಾಲರಿಂದ ಸುಳ್ಳು ಹೇಳಿಸಿದ ಸರ್ಕಾರ
Team Udayavani, Feb 18, 2020, 3:03 AM IST
ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಪರಿಹಾರ ಮತ್ತು ಪುನರ್ವಸತಿ ವಿಚಾರದಲ್ಲಿ ಸರ್ಕಾರವು ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ವಾಸ್ತವಾಂಶವೇ ಬೇರೆ, ಬೆಳೆನಾಶಕ್ಕೆ ಪರಿಹಾರ ಸಿಕ್ಕಿಲ್ಲ, ಮನೆ ಕಟ್ಟಲು ಹಣ ನೀಡಿಲ್ಲ, ಜನರ ಬದುಕು ದುಸ್ತರವಾಗಿದೆ ಎಂದರು.
ಆರು ತಿಂಗಳಾದರೂ ಸರ್ಕಾರ ಉಳಿಸಿಕೊಳ್ಳಲು ಕಸರತ್ತುಗಳನ್ನು ನಡೆಸುತ್ತಿರುವ ಯಡಿಯೂರಪ್ಪ ಅವರು ರಾಜ್ಯದ ಅಭಿವೃದ್ಧಿ, ಆರ್ಥಿಕ ಪರಿಸ್ಥಿತಿ, ಜನರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರದ ಬಗ್ಗೆ ರಾಜ್ಯಪಾಲರಿಂದ ಪೊಳ್ಳು ಭಾಷಣ ಮಾಡಿಸಿದ್ದಾರೆ. ಕಾಂಗ್ರೆಸ್ ಹಾಗೂ ಸಮ್ಮಿಶ್ರ ಸರ್ಕಾರದ ಕಾರ್ಯಕ್ರಮಗಳೇ ರಾಜ್ಯಪಾಲರ ಭಾಷಣದಲ್ಲಿದೆ ಎಂದು ಹೇಳಿದರು.
ಟ್ವೀಟ್ ಮೂಲಕವೂ ಈ ಬಗ್ಗೆ ಪ್ರಸ್ತಾಪಿಸಿರುವ ಸಿದ್ದರಾಮಯ್ಯ, ನಮ್ಮ ಐದು ವರ್ಷಗಳ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರ ಭಾಷಣದ ಮೂಲಕ ಗುರುತಿಸಿ , ಶ್ಲಾ ಸಿದ ಮತ್ತು ತಮ್ಮ ಸರ್ಕಾರದ ಸಾಧನೆಯ ಬಗ್ಗೆ ಹೇಳಿಕೊಳ್ಳಲು ಏನೂ ಇಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡ ಬಿಜೆಪಿ ಸರ್ಕಾರಕ್ಕೆ ಧನ್ಯವಾದಗಳು ಎಂದು ಕುಟುಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ