ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಇ-ಕಚೇರಿಗೆ ಚಾಲನೆ

Team Udayavani, Feb 18, 2020, 12:06 PM IST

dg-tdy-1

ದಾವಣಗೆರೆ: ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಸೋಮವಾರ ಇ-ಕಚೇರಿ ತಂತ್ರಾಂಶಕ್ಕೆ ಮಹಾಂತೇಶ ಬೀಳಗಿ ಚಾಲನೆ ನೀಡಿದರು.

ಈ ವೇಳೆ ಬೆಂಗಳೂರಿನ ಎಸ್‌ಸಿಆರ್‌ಬಿ ಹಿರಿಯ ಕಾರ್ಯಕ್ರಮಾಧಿಕಾರಿ ನಾಗೇಶ್‌. ಎನ್‌ ಮಾತನಾಡಿ, ಕಾಗದ ರಹಿತ ಆಡಳಿತಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಇ- ಕಚೇರ ತಂತ್ರಾಂಶ ಅಳವಡಿಸಲಾಗುತ್ತಿದೆ. ರಾಜ್ಯಾದ್ಯಂತ ಇ- ಕಚೇರಿಗಳನ್ನು ಚಾಲನೆಗೊಳಿಸುತ್ತಿದ್ದು,
ದಾವಣಗೆರೆ ಜಿಲ್ಲಾ ಪೊಲೀಸ್‌ ಕಚೇರಿ 43ನೇ ಘಟಕವಾಗಿದೆ. ಉಡುಪಿಯಲ್ಲಿ ಮ್ಯಾನುವಲ್‌ ಕಡತ ವ್ಯವಹಾರ ನಿಲ್ಲಿಸಿ, ಸಂಪೂರ್ಣವಾಗಿ ಕಾಗದರಹಿತ ಇ-ಕಚೇರಿ ಆಡಳಿತ ಜಾರಿಗೊಳಿಸಿ ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದರು.

ಇ-ಕಚೇರಿ ವ್ಯವಸ್ಥೆಯಲ್ಲಿ ಅರ್ಜಿದಾರರಿಂದ ಅರ್ಜಿ ಪಡೆದು, ಮೊಬೈಲ್‌ ಸಂಖ್ಯೆ ಪಡೆದು ಕಡತದ ಪ್ರತಿ ಹಂತದ ಮಾಹಿತಿಯನ್ನು ಮೊಬೈಲ್‌ ಮೂಲಕ ಕಾಲ ಕಾಲಕ್ಕೆ ಕಳುಹಿಸಲಾಗುವುದು. ಅರ್ಜಿದಾರರು ತಮ್ಮ ಕಡತದ ಕುರಿತಾದ ಮಾಹಿತಿಯನ್ನು ಆನ್‌ ಲೈನ್‌ ಮೂಲಕ ತಾವು ಇರುವಲ್ಲಿಯೇ ನೋಡಬಹುದಾಗಿದೆ ಎಂದರು. ಇದೇ ಸಂದರ್ಭದಲ್ಲಿ ಎಸ್‌.ಪಿ ಹನುಮಂತರಾಯ ಮಾತನಾಡಿ, ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಇ-ಕಚೇರಿಯನ್ನು ಯಶಸ್ವಿಯಾಗಿ ನಿರ್ವಹಿಸಲಾಗುವುದು ಎಂದರು.

ಕಚೇರಿ ಸಹಾಯಕ ಆಡಳಿತಾಧಿಕಾರಿ ಕೆ.ಎಸ್‌ ನಾಗೇಶ್‌ ಮಾತನಾಡಿ, ಮೊದಲ ಬಾರಿಗೆ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಇ- ತಂತ್ರಾಂಶ ಪರಿಚಯಿಸಲಾಗಿದ್ದು, ಇ- ಕಚೇರಿ ತಂತ್ರಾಂಶ ನಿರ್ವಹಣೆ ಕುರಿತು ಅ ಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಈ ವ್ಯವಸ್ಥೆಯು ಕಾಗದ ರಹಿತವಾಗಿದ್ದು, ಅರ್ಜಿದಾರರು ತಮ್ಮ ಕಡತದ ಮಾಹಿತಿ ಮತ್ತು ಕಡತವು ಯಾವ ಹಂತದಲ್ಲಿದೆ ಎಂಬುದನ್ನು ಆನ್‌ಲೈನ್‌ ಮೂಲಕ ತಿಳಿಯಬಹುದಾಗಿದೆ. ಇದರಿಂದಾಗಿ ಅರ್ಜಿದಾರರು ಕಚೇರಿಗಳಿಗೆ ಅಲೆಯುವುದು ಹಾಗೂ ಸಮಯ ಉಳಿತಾಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇ-ಕಚೇರಿಯ ಕುರಿತು ತರಬೇತಿ ಪಡೆದ ಜಿಲ್ಲಾ ಪೊಲೀಸ್‌ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿಗಳು ಪ್ರಮಾಣಪತ್ರ ವಿತರಿಸಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎಂ. ರಾಜೀವ್‌, ನಗರ ಡಿವೈಎಸ್ಪಿ ನಾಗೇಶ್‌ ಐತಾಳ್‌, ಗ್ರಾಮಾಂತರ ಡಿವೈಎಸ್‌ಪಿ ಮಂಜುನಾಥ್‌ ಗಂಗಲ್‌, ಇತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.