ಗೋಲಿಬಾರ್ ಪ್ರಕರಣ ನ್ಯಾಯಾಂಗ ತನಿಖೆ ಅಗತ್ಯವಿಲ್ಲ: ಸಚಿವ ಬಿ ಶ್ರೀರಾಮುಲು

Team Udayavani, Feb 20, 2020, 3:47 PM IST

ramulu

ಕೊಪ್ಪಳ: ಮಂಗಳೂರು ಗೋಲಿಬಾರ್ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯ ಮಾಡಿದ್ದು, ನ್ಯಾಯಾಂಗ ತನಿಖೆ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗಲಭೆಯ ಹಿಂದೆ ಯಾರಿದ್ದಾರೆ ಎಂದು ತನಿಖೆ ಮಾಡಲಾಗುತ್ತಿದೆ. ಪೊಲೀಸರ ಮೇಲೆ ಅಲ್ಲಿನ ಸಂಘಟನೆಯವರು ಕಲ್ಲು ತೂರಾಟ ಮಾಡಿದ್ದಾರೆ‌. ಈ ಕುರಿತು ಕೆಲ ಸಿಸಿ ಟಿವಿ ವಿಡಿಯೋ ದೊರೆತಿವೆ. ಇಲ್ಲಿ ಪೊಲೀಸ್ ಇಲಾಖೆ ತಪ್ಪಿಲ್ಲ. ಗೃಹ ಸಚಿವರು ಈಗಾಗಲೇ ಸದನಲ್ಲಿ ಪ್ರಕರಣದ ಬಗ್ಗೆ ಉತ್ತರ ನೀಡಿದ್ದಾರೆ. ನ್ಯಾಯಾಂಗ ತನಿಖೆಯ ಅಗತ್ಯವಿಲ್ಲ ಎಂದರು.

ಕಾಂಗ್ರೆಸ್ ‌ನಾಯಕರು ಪಿಎಫ್ಐ ಮತ್ತು ಎಸ್ ಡಿಪಿಐ ಸಂಘಟನೆಗಳಿಗೆ ಬೆಂಬಲ ನೀಡುತ್ತಿದೆ. ಈ‌ ಸಂಘಟನೆಯಿಂದ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮೇಲೆ ದಾಳಿಗಳಾಗಿವೆ ಎಂದರಲ್ಲದೆ ಸದನದಲ್ಲಿ ನೆರೆ ಹಾನಿಯಾಗಿರುವ ಬಗ್ಗೆ ಚರ್ಚೆ ಮಾಡುವುದನ್ನು ಕೈ ಬಿಟ್ಟು ಕಲಾಪ ಬಹಿಷ್ಕಾರ ಮಾಡಿ ಕಾಲಹರಣ ಮಾಡುತ್ತಿವೆ ಎಂದು ಕೈ ಪಕ್ಷದ ವಿರುದ್ದ ಆರೋಪಿಸಿದರು‌.

ಹುಬ್ಬಳ್ಲಿಯಲ್ಲಿ ಪಾಕಿಸ್ತಾನದ ಪರ ಘೋಷಣೆ ವಿಚಾರದ ಕುರಿತಂತೆ, ಆ ವಿದ್ಯಾರ್ಥಿಗಳ ಹಿಂದಿರುವವರ ಬಗ್ಗೆ ತನಿಖೆ ನಡೆಯುತ್ತಿದೆ. ಪೊಲೀಸ್ ಇಲಾಖೆ ಅವರನ್ನು ಬಂಧಿಸಿ ಬಿಡುಗಡೆ ಮಾಡಿ ಮತ್ತೆ ಬಂಧಿಸಿದ್ದು ಕೆಲವು ವಿಚಾರಣೆ ಸಂದರ್ಭದಲ್ಲಿ ಈ ರೀತಿ ನಡೆಯುತ್ತವೆ ಎಂದರು.

ಸಿದ್ದರಾಮಯ್ಯ ನ್ಯಾಯಾಂಗ ತನಿಖೆ ಕೇಳ್ತಿದ್ದಾರೆ. ಕಾಂಗ್ರೆಸ್ ಭಯೋತ್ಪಾದಕ ಚಟುವಟಿಕೆಗೆ ಬೆಂಬಲ ನೀಡುವ ಕೆಲಸ ಮಾಡುತ್ತಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕೆ ಕಾಂಗ್ರೆಸ್ ಹೀಗೆ ಮಾಡುತ್ತಿರಬಹುದು ಎಂದರಲ್ಲದೆ, ಕೆಲ ಬಿಜೆಪಿ ಶಾಸಕರು ಜಗದೀಶ ಶೆಟ್ಟರ್ ಮನೆಯಲ್ಲಿ ಸಭೆ ಮಾಡಿರೋದು ಸತ್ಯ. ಆಯಾ ಕ್ಷೇತ್ರದ ಅಭಿವೃದ್ದಿ ಹಾಗೂ ಅನುದಾನದ ಕುರಿತು ಚರ್ಚೆ ನಡೆದಿದೆ. ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಯೋಜನೆ ನೀಡುವ ಬಗ್ಗೆ ಚರ್ಚೆ ಆಗಿದೆ ಎಂದರು.

ಮರಿಯಮ್ಮನಹಳ್ಳಿ ಅಪಘಾತ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಆರ್. ಅಶೋಕ್ ಅವರ ಮಗ ಇಲ್ಲ. ಹೆಚ್ಚಿನ ಮಾಹಿತಿ ನನಗೆ ಗೊತ್ತಿಲ್ಲ ಎಂದರು.

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.