ರಾಜ್ಯದ ಪ್ರಥಮ ಆನೆಕಾಲು ರೋಗಮುಕ್ತ ಜಿಲ್ಲೆಯಾಗುವತ್ತ ಉಡುಪಿ


Team Udayavani, Feb 21, 2020, 5:36 AM IST

chitra-42

ಸಾಂದರ್ಭಿಕ ಚಿತ್ರ

ಉಡುಪಿ: ಜಿಲ್ಲೆಯು ರಾಜ್ಯದ ಮೊದಲ ಆನೆಕಾಲು ರೋಗ (ಫೈಲೇರಿಯಾ) ಮುಕ್ತ ಜಿಲ್ಲೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈ ಮೂಲಕ ಹಲವು ಕ್ಷೇತ್ರಗಳಲ್ಲಿ ಪ್ರಥಮ ಸ್ಥಾನ ಹೊಂದಿರುವ ಉಡುಪಿಯ ಮಕುಟಕ್ಕೆ ಮತ್ತೂಂದು ಗರಿ ಏರಲಿದೆ. ಉಡುಪಿ ಜಿಲ್ಲೆಯು ಫೈಲೇರಿಯಾ ರೋಗದಿಂದ ಸಂಪೂರ್ಣವಾಗಿ ಮುಕ್ತ ವಾಗಿದ್ದು, ಇದಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆ ದೊರೆಯುವುದಷ್ಟೆ ಬಾಕಿಯಿದೆ. ಈ ಬಗ್ಗೆ ಅಗತ್ಯ ವರದಿ ಮತ್ತು ದಾಖಲೆಗಳನ್ನು ವಿಶ್ವ ಆರೋಗ್ಯ ಸಂಸ್ಥೆಗೆ ಕಳುಹಿಸಲಾಗಿದೆ. ಅನುಮೋದನೆ ದೊರೆಯಲು ಕನಿಷ್ಠ ಎರಡು ವರ್ಷ ಬೇಕು.

ರೋಗ ಹೇಗೆ ಬರುತ್ತದೆ?
ಫೈಲೇರಿಯಾ (ಆನೆಕಾಲು) ರೋಗ ಕ್ಯೂಲೆಕ್ಸ್‌ ಸೊಳ್ಳೆಯ ಕಡಿತದಿಂದ ಬರುತ್ತದೆ, ಇದು ಸಾಂಕ್ರಾಮಿಕವಲ್ಲ. ಈಗಾಗಲೇ ಕಾಯಿಲೆಪೀಡಿತ ವ್ಯಕ್ತಿಯನ್ನು ಕ್ಯೂಲೆಕ್ಸ್‌ ಸೊಳ್ಳೆ ಕಚ್ಚಿ ಬಳಿಕ ಆರೋಗ್ಯವಂತನನ್ನು ಕಚ್ಚುವ ಮೂಲಕ ರೋಗ ಹರಡುತ್ತದೆ. ದೇಹದೊಳಕ್ಕೆ ಪ್ರವೇಶಿಸಿದ ರೋಗಾಣುಗಳು ದುಗ್ಧರಸ ಗ್ರಂಥಿಗಳಲ್ಲಿ ಶೇಖರಣೆಯಾಗಿ, ರಕ್ತ ಪರಿಚಲನೆಯಾಗದೆ ಅಲ್ಲಿಂದ ಮುಂದಿನ ದೇಹದ ಭಾಗವು ಊದಿಕೊಳ್ಳತೊಡಗುತ್ತದೆ. ರೋಗಾಣು ನಾಶವಾದರೂ ಊತ ಶಾಶ್ವತವಾಗಿ ಉಳಿದುಕೊಳ್ಳುತ್ತದೆ. ಮುಖ್ಯವಾಗಿ ಕಾಲು, ಕೈ, ಎದೆಯ ಭಾಗಗಳಲ್ಲಿ ಊದುವಿಕೆ ಕಾಣಿಸಿಕೊಳ್ಳುತ್ತದೆ.

ನಿಯಮ ಉಲ್ಲಂಘಿಸಿದರೆ ಕ್ರಮ
ಜಿಲ್ಲೆಯಲ್ಲಿ ಹಳೆಯ ಫೈಲೇರಿಯಾ ಪ್ರಕರಣಗಳನ್ನು ಹೊರತು ಪಡಿಸಿ ಹೊಸ ಪ್ರಕರಣಗಳು ದಾಖಲಾಗಿಲ್ಲ. ಹೊರ ಜಿಲ್ಲೆ ಮತ್ತು ಹೊರರಾಜ್ಯದಿಂದ ಬರುವ ವಲಸೆ ಕಾರ್ಮಿಕರಲ್ಲಿ ರೋಗಾಣುಗಳು ಇರುವ ಸಾಧ್ಯತೆಗಳಿದ್ದು, ಇಂತಹವರನ್ನು ನಿಯಮಿತವಾಗಿ ಪತ್ತೆ ಹಚ್ಚಿ ಪರೀಕ್ಷೆಗೊಳಪಡಿಸಲಾಗುತ್ತದೆ. ರೋಗಪೀಡಿತ ವಲಸೆ ಕಾರ್ಮಿಕರನ್ನು ಪತ್ತೆ ಹಚ್ಚಲು ಆರೋಗ್ಯ ಇಲಾಖೆಯ ಕಡೆಯಿಂದ ಎನ್‌ಒಸಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗುತ್ತದೆ. ಜತೆಗೆ ನಗರ ಸಭೆಯಿಂದ ಸಿವಿಕ್‌ ಬೈಲಾವನ್ನೂ ರಚಿಸಿ ಅನುಮೋದನೆಗಾಗಿ ರಾಜ್ಯ ಸರಕಾರಕ್ಕೆ ಕಳುಹಿಸಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಬೈಲಾ ನಿಯಮಗಳನ್ನು ಉಲ್ಲಂಘಿಸಿದವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ.

2014, 2016, ಮತ್ತು 2019ರಲ್ಲಿ ನಡೆಸಿದ ಟಿಎಎಸ್‌ ಮತ್ತು ಪೋಸ್ಟ್‌ ಎಂಡಿಎ ಸರ್ವೆಗಳಲ್ಲಿ ಮೂರೂ ಬಾರಿಯೂ ಉಡುಪಿಯು ತೇರ್ಗಡೆ ಹೊಂದಿದ್ದು, ಸ್ಥಳೀಯವಾಗಿ ಫೈಲೇರಿಯಾ ಇಲ್ಲ ಎನ್ನುವುದು ಕಂಡುಬಂದಿದೆ. ಉಡುಪಿ ಜಿಲ್ಲೆಯು ಅಧಿಕೃತವಾಗಿ ಫೈಲೇರಿಯಾ ಮುಕ್ತ ಜಿಲ್ಲೆಯಾಗಬೇಕಿದ್ದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆ ದೊರೆಯಬೇಕಾಗಿದೆ. ಪ್ರಮಾಣಪತ್ರವನ್ನು ವಿಶ್ವ ಆರೋಗ್ಯ ಸಂಸ್ಥೆಗೆ ಕಳುಹಿಸಲಾಗಿದ್ದು, ಮುಂದಿನ 2 ವರ್ಷಗಳವರೆಗೆ ಜಿಲ್ಲೆಯನ್ನು ಫೈಲೇರಿಯಾ ಮುಕ್ತವಾಗಿಡುವ ನಿಟ್ಟಿನಲ್ಲಿ ಕಾರ್ಯಗಳು ನಡೆಯಲಿವೆ. ರಾಜ್ಯದಲ್ಲಿ 2019ರ ಆಗಸ್ಟ್‌ನಲ್ಲಿಯೇ ಈ ಸಾಧನೆ ಮಾಡಿದ ಪ್ರಥಮ ಜಿಲ್ಲೆ ಉಡುಪಿಯಾಗಿದ್ದು, ದ.ಕ. ಮತ್ತು ಉತ್ತರ ಕನ್ನಡ ಜಿಲ್ಲೆಗಳು ಅನಂತರದಲ್ಲಿವೆ.
– ಡಾ| ಪ್ರಶಾಂತ್‌ ಭಟ್‌, ಜಿಲ್ಲಾ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.