ಸುಂಕದಕಟೆ ದೇವಸ್ಥಾನ ಹುಂಡಿಯಲ್ಲಿ 30 ಲಕ್ಷ ರೂ. ಸಂಗ್ರಹ

ಶ್ರೀ ಮಂಜುನಾಥ ಸ್ವಾಮಿ ಹಾಗೂ ನರಸಿಂಹ ಸ್ವಾಮಿ ದೇವಾಲಯ,  ಪ್ರತಿ 4 ತಿಂಗಳಿಗೊಮ್ಮೆ ಹುಂಡಿ ಎಣಿಕೆ

Team Udayavani, Feb 21, 2020, 6:27 PM IST

21-February-30

ಹೊನ್ನಾಳಿ: ತಾಲೂಕಿನ ಸುಂಕದಕಟ್ಟೆ ಗ್ರಾಮದ ಶ್ರೀ ಮಂಜುನಾಥ ಸ್ವಾಮಿ ಹಾಗೂ ನರಸಿಂಹ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ಗುರುವಾರ ತಹಶೀಲ್ದಾರ್‌ ತುಷಾರ್‌ ಬಿ. ಹೊಸೂರ್‌, ಕಂದಾಯ ಇಲಾಖೆ ಸಿಬ್ಬಂದಿ, ಪ್ರಧಾನ ಅರ್ಚಕ ರಾಜುಸ್ವಾಮಿ ಹಾಗೂ ದೇವಸ್ಥಾನ ಸಮಿತಿ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದು ಒಟ್ಟು 30,82,750 ರೂ. ಸಂಗ್ರಹವಾಗಿದೆ.

ದೇವಸ್ಥಾನವಾದ ಹುಂಡಿಯನ್ನು ಪ್ರತಿ 4 ತಿಂಗಳಿಗೊಮ್ಮೆ ಎಣಿಕೆ ಮಾಡಲಾಗುತ್ತದೆ ಎಂದು ತಹಶೀಲ್ದಾರ್‌ ತುಷಾರ್‌ ಬಿ. ಹೊಸೂರ್‌ ಹೇಳಿದರು. ಹುಂಡಿಯ ಹಣವನ್ನು ಹೊನ್ನಾಳಿಯ ಕೆನರಾ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು. ಇದನ್ನು ದೇವಸ್ಥಾನದ ಅಭಿವೃದ್ಧಿಗೆ ಬಳಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ದೇವಸ್ಥಾನದ ಗೋಪುರ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಅದೇ ರೀತಿ 50 ಲಕ್ಷ ರೂ. ವೆಚ್ಚದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದ ಸಮುದಾಯ ಭವನ, ಊಟದ ಹಾಲ್‌ ಕೂಡಾ ನಿರ್ಮಾಣಗೊಂಡಿದೆ ಎಂದು ದೇವಸ್ಥಾನ ಸಮಿತಿಯ ಪದಾಧಿ ಕಾರಿಗಳು ಈ ಸಂದರ್ಭದಲ್ಲಿ ವಿವರಿಸಿದರು.

ಜನಸಾಮಾನ್ಯರ ಅನುಕೂಲಕ್ಕಾಗಿ ರಾಜ್ಯ ಸರಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿರುವ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ದೇವಸ್ಥಾನದಲ್ಲಿ ಮೇ ತಿಂಗಳ 24ರಂದು ನಡೆಯಲಿದೆ. ಇದರಲ್ಲಿ ವಿವಾಹ ಆಗಲಿಚ್ಛಿಸುವವರು ಹೆಸರು ನೋಂದಾಯಿಸಲು ಏ.24 ಕೊನೆಯ ದಿನವಾಗಿದೆ. ಆಸಕ್ತರು ದೇವಸ್ಥಾನದ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆ ಮತ್ತು ಮಾಹಿತಿಗಳೊಂದಿಗೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಪ್ರಧಾನ ಅರ್ಚಕ ರಾಜುಸ್ವಾಮಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08188251025 ಸಂಪರ್ಕಿಸಬಹುದು. ನ್ಯಾಮತಿ ತಾಲೂಕು ತಹಶೀಲ್ದಾರ್‌ ತನುಜಾ ಸೌದತ್ತಿ, ದೇವಸ್ಥಾನ ಸಮಿತಿಯ ಅಧ್ಯಕ್ಷ ಎಸ್‌.ಎಚ್‌. ನರಸಪ್ಪ, ಪದಾಧಿಕಾರಿಗಳಾದ ಡಿ.ಬಸಪ್ಪ, ಎಸ್‌.ಕೆ.ಕರಿಯಪ್ಪ, ಶಿರಸ್ತೇದಾರ್‌
ಶ್ರೀನಿವಾಸ್‌, ರೆವಿನ್ಯೂ ಇನ್ಸ್‌ಪೆಕ್ಟರ್‌ ಹಾಗೂ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಗುರುಪ್ರಸಾದ್‌, ಮುಜರಾಯಿ ಇಲಾಖೆಯ ವಿಷಯ ನಿರ್ವಾಹಕಿ ರೇಣುಕಮ್ಮ, ಗ್ರಾಮ ಲೆಕ್ಕಾಧಿಕಾರಿ ಮೌನೇಶ್‌, ಚೆಲುವರಾಜ್‌, ಪ್ರಧಾನ ಅರ್ಚಕರಾದ ರಾಜುಸ್ವಾಮಿ, ಹೊನ್ನಾಳಿ ಕೆನರಾ ಬ್ಯಾಂಕಿನ ಸಿಬ್ಬಂದಿ ರಾಮಣ್ಣ ಉಪಸ್ಥಿತರಿದ್ದರು .

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.