ಮಾದಪ್ಪನ ಬೆಟ್ಟದಲ್ಲಿ ಶಿವರಾತ್ರಿ ಉತ್ಸವ ವೈಭವ


Team Udayavani, Feb 22, 2020, 3:00 AM IST

madappana

ಹನೂರು: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೇವರಿಗೆ ಬಿಲ್ವಾರ್ಚನೆ, ವಿಭೂತಿ ಅರ್ಚನೆ, ಅಭಿಷೇಕ ಪೂಜಾ ಕೈಂಕರ್ಯಗಳು ವಿಧಿವಿಧಾನಗಳೊಂದಿಗೆ ಜರುಗಿದವು. ಮಹಾಶಿವರಾತ್ರಿ ಹಿನ್ನೆಲೆ ಕಳೆದ ಮೂರ್‍ನಾಲ್ಕು ದಿನಗಳಿಂದ ಪಾದಯಾತ್ರೆ ಮತ್ತು ವಾಹನಗಳ ಮೂಲಕ ಮಾದಯ್ಯನಗಿರಿ ತಲುಪಿರುವ ಲಕ್ಷಾಂತರ ಭಕ್ತರು ಪುಣ್ಯಸ್ನಾನ ಮಾಡಿ ಸರದಿ ಸಾಲಿನಲ್ಲಿ ನಿಂತು ಮಹದೇಶ್ವರನ ದರ್ಶನ ಪಡೆದು ಧನ್ಯತಾಭಾವ ಮೆರೆದರು.

ಬಳಿಕ ಭಕ್ತಾದಿಗಳು ಬಸವವಾಹನ, ಹುಲಿವಾಹನ, ರುದ್ರಾಕ್ಷಿ ಮಂಟಪ ಉತ್ಸವಗಳಲ್ಲಿ ಭಾಗವಹಿಸಿ ಹರಕೆ ಸಲ್ಲಿಸಿದರು. ಈ ವೇಳೆ ಭಕ್ತಾದಿಗಳು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಧಾನ್ಯಗಳು, ಚಿಲ್ಲರೆ ನಾಣ್ಯಗಳನ್ನು ಎಸೆದು ಭಕ್ತಿ ಸಮರ್ಪಿಸಿದರು. ಕೆಲ ಯುವಕರು ವಾದ್ಯಮೇಳಕ್ಕೆ ತಕ್ಕಂತೆ ಕುಣಿತ ಹಾಕಿ ಸಂಭ್ರಮಿಸಿದರು.

ತರಕಾರಿ, ಹಣ್ಣುಗಳಿಂದ ಸಿಂಗಾರ: ಮಹಾ ಶಿವರಾತ್ರಿ ಹಿನ್ನೆಲೆ ಮಹದೇಶ್ವರ ಬೆಟ್ಟದ ಗರ್ಭಗುಡಿ ಮತ್ತು ಗರ್ಭಾಂಕಣವನ್ನು ವಿಶೇಷವಾಗಿ ತರಕಾರಿ ಮತ್ತು ವಿವಿಧ ಬಗೆಯ ಹಣ್ಣುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಅಲ್ಲದೇ ದೇವಾಲಯದ ಮುಖ್ಯಗೋಪುರ, ರಾಜಗೋಪುರ, ಪ್ರವೇಶ ದ್ವಾರ ಅಳಮಬಾಡಿ ಬಸವೇಶ್ವರ, ವಾಣಿಜ್ಯ ಸಂಕೀರ್ಣಗಳು, ಪ್ರವೇಶ ದ್ವಾರ ಇನ್ನಿತರ ಕಡೆಗಳಲ್ಲಿ ಝಗಮಗಿಸುವ ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು.

ನಿರಂತರ ದರ್ಶನ ವ್ಯವಸ್ಥೆ: ಮಹಾ ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ನಿರಂತರ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿದಿನ ರಾತ್ರಿ 10.30 ರಿಂದ ಬೆಳಗ್ಗಿನ ಜಾವ 3.30ರವರೆಗೆ ದೇವಾಲಯವನ್ನು ಬಂದ್‌ ಮಾಡಲಾಗುತಿತ್ತು. ಆದರೆ, ಶುಕ್ರವಾರ ಮಹಾಶಿವರಾತ್ರಿ ಹಿನ್ನೆಲೆ ದೇವಾಲಯವನ್ನು ಬಂದ್‌ ಮಾಡದೆ ನಿರಂತರ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ.

ಶಿವರಾತ್ರಿ ಜಾಗರಣೆ: ಮಹಾಶಿವರಾತ್ರಿ ಪ್ರಯುಕ್ತ ಶುಕ್ರವಾರ ಇಡೀ ರಾತ್ರಿ ಶ್ರೀಕ್ಷೇತ್ರದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಜಾಗರಣೆ ಮಾಡಿದರು. ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿತ್ತು. ಪ್ರತಿನಿತ್ಯ ಜರುಗುವ ತ್ರಿಕಾಲ ಪೂಜೆಗಳಿಗಿಂತ ಮಧ್ಯರಾತ್ರಿ 12 ಗಂಟೆಗೆ ಒಂದು ಹೆಚ್ಚುವರಿ ಅಭಿಷೇಕ ಪೂಜೆ ಏರ್ಪಡಿಸಲಾಗಿತ್ತು.

ಶಿವರಾತ್ರಿ ಜಾಗರಣೆಯ ಪೂಜಾ ಕೈಂಕರ್ಯಗಳು ಬೇಡಗಂಪಣ ಪದ್ದತಿಯಂತೆ ಜರುಗಿದವು. ಅಲ್ಲದೇ ಶಿವರಾತ್ರಿ ಜಾಗರಣೆಯಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳಿಗೆ ಮನರಂಜನೆ ನೀಡುವ ಸಲುವಾಗಿ ಹರಿಕಥೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

* ವಿನೋದ್‌ ಎನ್‌

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.