ಮಲಪ್ರಭೆಗೆ-ಮಹದಾಯಿ ಜೋಡಣೆ ಆಗುವವರೆಗೂ ಹೋರಾಟ ನಿರಂತರ


Team Udayavani, Feb 22, 2020, 12:50 PM IST

gadaga-tdy-1

ಸಾಂಧರ್ಬಿಕ ಚಿತ್ರ

ನರಗುಂದ: ಜೀವ ಜಲಕ್ಕಾಗಿ ರೈತರ ಹೋರಾಟ ಕಡೆಗಣಿಸಿದ ವ್ಯಕ್ತಿಗಳಿಗೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀತಿ ಪಾಠವಾಗಿದೆ. ಮಲಪ್ರಭೆಗೆ ತಾಯಿ ಮಹದಾಯಿ ಜೋಡಣೆಯಾಗುವವರೆಗೂ ನಮ್ಮ ಹೋರಾಟ ಅಚಲ ಎಂದು ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ಹೇಳಿದರು.

ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗೆ ಒತ್ತಾಯಿಸಿ ಶುಕ್ರವಾರ 1681ನೇ ದಿನ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಮಾತನಾಡಿದ ಅವರು, ರೈತರ ಹೋರಾಟಕ್ಕೆ ನ್ಯಾಯಾಲಯ ನೆರವಾಗಿದೆ. ಇದನ್ನು ಸಂಪೂರ್ಣ ಸ್ವಾಗತಿಸುವುದಾಗಿ ತಿಳಿಸಿದರು. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಇದೊಂದು ಜಯದ ಮೆಟ್ಟಿಲು. ಈ ವಿಜಯ ರೈತರಿಗೆ ಸೇರಿ ಹೋರಾಟ ಬೆಂಬಲಿಸಿದ ನಾಡಿನ ಎಲ್ಲ ಮಠಾಧಿಧೀಶರು, ಸಂಘಟನೆಗಳು, ಎಲ್ಲ ಸ್ತರದ ಸಾರ್ವಜನಿಕರು, ಅಗೋಚರವಾಗಿ ಕೈಜೋಡಿಸಿದ ನಾಡಿನ ಸಮಸ್ತ ಆರು ಕೋಟಿ ಜನರಿಗೆ ಸಲ್ಲುತ್ತದೆ ಎಂದರು. ಈಗಾಗಲೇ ಸರ್ವೋತ್ಛ ನ್ಯಾಯಾಲಯಕ್ಕೆ ಪಿಐಎಲ್‌ ಸಲ್ಲಿಸಿದ್ದೆವು. ಆದೇಶ ಪ್ರತಿ 2-3 ದಿನಗಳಲ್ಲಿ ಕೈಸೇರಲಿದೆ. ಬಳಿಕ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದೆ ಸರ್ವೋತ್ಛ ನ್ಯಾಯಾಲಯಕ್ಕೆ ಹೋಗುವ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

ಮುನವಳ್ಳಿಯ ಗುರು ರಾಯನಗೌಡ್ರ ಮಾತನಾಡಿ, ಮಹದಾಯಿ ಯೋಜನೆಯನ್ನು ರಾಜಕಾರಣಿಗಳು ಚುನಾವಣೆಗೆ ಬಳಸಿಕೊಂಡರೂ ರೈತರಿಗೆ ಯಾವುದೇ ಸಹಕಾರ ನೀಡಲಿಲ್ಲ. ಅಂತಹ ರಾಜಕಾರಣಿಗಳಿಗೆ ತಕ್ಕಪಾಠ ಕಲಿಸಲು ರೈತ ಸಂಘಟನೆಗಳು ಗಟ್ಟಿಗೊಳ್ಳಬೇಕು. ಇಂದು ಕಟಾವು ಹಂತದಲ್ಲೇ ಕಡಲೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಗೊಂಡಿದ್ದು, ರೈತರ ಹೋರಾಟಕ್ಕೆ ಸಂದ ಜಯ ಎಂದರು.

ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಉಪಾಧ್ಯಕ್ಷ ರಮೇಶ ನಾಯ್ಕರ ಮಾತನಾಡಿ, ಈ ದೇಶದ ವ್ಯವಸ್ಥೆ ಬದಲಾಯಿಸುವ ಶಕ್ತಿ ಪೆನ್ನಿಗಿದೆ. ಅಂತಹ ಪೆನ್ನು(ಮಾಧ್ಯಮ) ಈ ಹೋರಾಟಕ್ಕೆ ಶಕ್ತಿ ತುಂಬಿದ್ದು ಸ್ಮರಣೀಯ. ಒಂದು ಹೋರಾಟದಲ್ಲಿ ಗೆಲುವಿಗೆ ಸಹನೆ, ತಾಳ್ಮೆ ಅಗತ್ಯ. ಅದು ಈ ಹೋರಾಟದಲ್ಲಿದೆ ಎಂದು ಹೇಳಿದರು.

ಬಿ.ಎಸ್‌.ಉಪ್ಪಾರ, ಆನಂದ ತೊಂಡಿಹಾಳ, ಹೇಮಕ್ಕ ಗಾಳಿ, ಮಾನಂದಮ್ಮ ಹಿರೇಮಠ, ಅಣ್ಣಪ್ಪಗೌಡ ದೇಸಾಯಿ, ವೀರಬಸಪ್ಪ ಹೂಗಾರ, ಮಲ್ಲಿಕಾರ್ಜುನಯ್ಯ ಹಿರೇಮಠ, ರಾಘವೇಂದ್ರ ಗುಜಮಾಗಡಿ ಮಾತನಾಡಿದರು. ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಕಾರ್ಯದರ್ಶಿ ಫಕೀರಪ್ಪ ಜೋಗಣ್ಣವರ, ವೆಂಕಪ್ಪ ಹುಜರತ್ತಿ, ಶಿವಾನಂದ ಹಳಕಟ್ಟಿ,  ಮನೇನಕೊಪ್ಪ, ಕಲ್ಲಪ್ಪ ಮೊರಬದ, ಮಾರುತಿ ಬಡಿಗೇರ, ವಾಸು ಚವ್ಹಾಣ, ವಿಶ್ವನಾಥ ಗುಡಿಸಾಗರ, ಎಚ್‌.ಸಿ.ಹಿರೇಹೊಳಿ, ಹನಮಂತ ಸರನಾಯ್ಕರ ಮತ್ತಿತರರಿದ್ದರು.

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.