ನಿಲ್ಲದ ಕಲ್ಲು ಗಣಿಗಾರಿಕೆ: ಗ್ರಾಮಸ್ಥರ ಆಕ್ರೋಶ

Team Udayavani, Feb 26, 2020, 3:00 AM IST

nillada-kallu

ಚಿಂತಾಮಣಿ: ತಾಲೂಕಿನ ಮಡಬಳ್ಳಿ ಮತ್ತು ನೆರ್ನ್ನಕಲ್ಲು ಗ್ರಾಮಗಳ ಬಳಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ತೊಂದರೆಯಾಗುತ್ತಿದೆ ಎಂದು ಮಡಬಳ್ಳಿ, ನೆರ್ನ್ನಕಲ್ಲು ಗ್ರಾಮಸ್ಥರು ಕಲ್ಲು ಗಣಿಗಾರಿಕೆ ಮಾಡುತ್ತಿದ್ದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಗಣಿಗಾರಿಕೆಗೆ ಅಡ್ಡಿಪಡಿಸಿದ ಪರಿಣಾಮ ಕೆಲ ಕಾಲ ಉದ್ವಿಗ್ನ ವಾತಾವರಣ ಏರ್ಪಟ್ಟಿತ್ತು.

ಕಟ್ಟಡಗಳಿಗೆ ಹಾನಿ: ತಾಲೂಕಿನ ನೆರ್ನ್ನಕಲ್ಲು, ಮಡಬಹಳ್ಳಿ, ನಾಯಿಂದ್ರಹಳ್ಳಿ ಗ್ರಾಮಗಳ ಮಧ್ಯೆ ಭಾಗದಲ್ಲಿರುವ ಗುಡ್ಡದಲ್ಲಿ ಹಲವು ವರ್ಷಗಳಿಂದ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಶಬ್ಧ ಮಾಲಿನ್ಯದ ಜೊತೆಗೆ ಗ್ರಾಮಗಳ ಸುತ್ತಮುತ್ತಲು ಇರುವ ದೇವಾಲಯ, ನೀರಿನ ಟ್ಯಾಂಕ್‌ ಮತ್ತು ಗ್ರಾಮದ ಹೊರ ವಲಯದಲ್ಲಿರುವ ಶಾಲೆಗಳ ಕಟ್ಟಡಗಳಿಗೆ ಹಾನಿಯಾಗುತ್ತಿದೆ. ಕೂಡಲೇ ಕಲ್ಲು ಗಣಿಗಾರಿಕೆ ನಿಲ್ಲಿಸುವಂತೆ ಕಳೆದ ವರ್ಷ ಗ್ರಾಮಸ್ಥರು ಒತ್ತಾಯಿಸಿದ್ದರು.

ಗ್ರಾಮಸ್ಥರ ಒತ್ತಾಯದ ಮೇರೆಗೆ ಒಂದು ವರ್ಷ ಗಣಿಗಾರಿಕೆ ನಿಲ್ಲಿಸಿದ್ದ ಗಣಿಗಾರಿಕೆದಾರರು ಇದೀಗ ಮತ್ತೆ ಪ್ರಾರಂಭಿಸಿದ ಪರಿಣಾಮ ರೊಚ್ಚಿಗೆದ್ದ ಗ್ರಾಮಸ್ಥರು ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ನೂರಾರು ಜನರು ಗುಡ್ಡದ ಬಳಿ ಜಮಾಯಿಸಿ ವಾಗ್ವಾದಕ್ಕೆ ಇಳಿದರು. ಈ ವೇಳೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಮಿತಿ ಕೈಮೀರುವ ಹಂತಕ್ಕೆ ಬರುತ್ತಿದ್ದಂತೆ ಗ್ರಾಮಾಂತರ ಠಾಣೆ ಸರ್ಕಲ್‌ ಇನ್ಸ್‌ಪೆಕ್ಟರ್‌ ಶ್ರೀನಿವಾಸ್‌ ನೇತೃತ್ವದಲ್ಲಿ ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಉಪವಿಭಾಗಾಧಿಕಾರಿ ಭೇಟಿ: ವಿಷಯ ತಿಳಿದ ಉಪ ವಿಭಾಗಾಧಿಕಾರಿ ರಘುನಂದನ್‌ ಸ್ಥಳಕ್ಕೆ ಭೇಟಿ ನೀಡಿ ಗಣಿಗಾರಿಕೆಗೆ ಸರ್ಕಾರ ನೀಡಿರುವ ಪರವಾನಗಿ ಮತ್ತು ಗ್ರಾಮಸ್ಥರ ಮನವಿ ಆಲಿಸಿ ಪರಿಶೀಲನೆಗೆ ದಾಖಲೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಧಿಕಾರಿಗಳ ವಿರುದ್ಧ ಆಕ್ರೋಶ: ಸುತ್ತಲೂ ಜನರು ವಾಸವಿರುವ ಪ್ರದೇಶಕ್ಕೆ ಯಾವ ರೀತಿಯಲ್ಲಿ ಪರವಾನಗಿ ನೀಡಿದರು ಎಂದು ಪ್ರಶ್ನಿಸಿದ ಗ್ರಾಮಸ್ಥರು, ಅಧಿಕಾರಿಗಳು ಗಣಿಗಾರಿಕೆ ಮಾಲೀಕರ ಜೊತೆ ಕಮಿಷನ್‌ಗೆ ಆಸೆ ಪಟ್ಟು ಸಾರ್ವಜನಿಕರ ಹಿತ ಕಡೆಗಣಿಸಿ ಗಣಿ ಮಾಲೀಕರು ನೀಡುವ ಹಣಕ್ಕೆ ಪರವಾನಗಿ ನೀಡಿದ್ದಾರೆ ಎಂದು ಗ್ರಾಮಸ್ಥರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಆರೋಪಿಸಿದರು.

ಗ್ರಾಮಸ್ಥರ ಪಟ್ಟು: ಕಳೆದ ವರ್ಷ ಕ್ಷೇತ್ರದ ಶಾಸಕರ ಸ್ಥಳಕ್ಕೆ ಭೇಟಿ ನೀಡಿ ಕಲ್ಲು ಗಣಿಗಾರಿಕೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ಇದೀಗ ಮತ್ತೆ ಕಲ್ಲು ಗಣಿಗಾರಿಕೆ ಮತ್ತೆ ಪ್ರಾರಂಭವಾಗಿದ್ದು, ಕಲ್ಲು ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿದರು.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.