ದ್ವಿತೀಯ ಪಿಯು ಪರೀಕ್ಷೆ : ಅಕ್ರಮ ನಡೆಯದಂತೆ ಎಚ್ಚರ ವಹಿಸಿ

Team Udayavani, Feb 26, 2020, 3:00 AM IST

dviitiya-pu

ಹಾಸನ: ರಾಜ್ಯದಲ್ಲಿ ಮಾ.4ರಿಂದ 23ರವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ಕೊಡದಂತೆ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷೆಗೆ 17,363 ವಿದ್ಯಾರ್ಥಿಗಳು: ಜಿಲ್ಲಾಧಿಕಾರಿ ನ್ಯಾಯಾಂಗ ಸಭಾಂಗಣದಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯು ಪರೀಕ್ಷೆಯ ಪೂರ್ವ ಸಿದ್ದತೆ ಕುರಿತು ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಒಟ್ಟು 30 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7,731 ಬಾಲಕರು, 9,632 ಬಾಲಕಿಯರು ಸೇರಿದಂತೆ ಒಟ್ಟು 17,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದರು.

ಒಟ್ಟು 15,231 ಹೊಸಬರು, 1,521 ಪುನರಾವರ್ತಿತ ವಿದ್ಯಾರ್ಥಿಗಳು, 611 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪ್ರಶ್ನೆ ಪತ್ರಿಕೆಗಳ ಗೌಪ್ಯಲಕೋಟೆಗಳನ್ನು ಸುರಕ್ಷಿತವಾಗಿ ಅಭಿರಕ್ಷೆಯಲ್ಲಿಡಲು ಮತ್ತು ವಿತರಿಸುವಾಗ ಜಿಲ್ಲಾ ಮಟ್ಟದ ತ್ರಿಸದಸ್ಯ ಸಮಿತಿಯವರ ಸಮ್ಮುಖದೊಂದಿಗೆ ಬಯೋಮೆಟ್ರಿಕ್‌ ನೋಂದಣಿ ವ್ಯವಸ್ಥೆಯ ಮೂಲಕ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಾಹನಗಳಿಗೆ ಜಿಪಿಎಸ್‌ ಅಳವಡಿಸಿ: ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕೊಂಡೊಯ್ಯುವ ಪ್ರತಿ ವಾಹನಗಳಿಗೂ ಕಡ್ಡಾಯವಾಗಿ ಜಿ.ಪಿ.ಎಸ್‌. ಅಳವಡಿಸಬೇಕು ಮತ್ತು ಪ್ರತಿ ವಾಹನಕ್ಕೂ ಶಸ್ತ್ರಸಜ್ಜಿತ ಪೊಲೀಸ್‌ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು.

ಬಾಹ್ಯ ವ್ಯಕ್ತಿಗಳಿಗೆ ನಿರ್ಬಂಧಿಸಿ: ಪರೀಕ್ಷಾ ಕೇಂದ್ರದಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರತುಪಡಿಸಿ ಯಾವುದೇ ಬಾಹ್ಯ ವ್ಯಕ್ತಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸದಂತೆ ನೋಡಿಕೊಳ್ಳಬೇಕು. ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಗುರುತಿನ ಪತ್ರವನ್ನು ಧರಿಸಿರಬೇಕು ಎಂದು ಹೇಳಿದರು.

ಮೊಬೈಲ್‌ ಬಳಕೆ ನಿಷೇಧ: ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿಗಳು ಮೊಬೈಲ್‌ ಫೋನ್‌ ಹಾಗೂ ಇತರೆ ವಿದ್ಯುನ್ಮಾನ ಉಪಕರಣಗಳನ್ನು ಬಳಸುವಂತಿಲ್ಲ. ಆದರೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್‌ ಸೆಟ್‌ ಬಳಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಪ್ರಶ್ನೆ ಪತ್ರಿಕೆಗಳ ಗೌಪ್ಯ ಲಕೋಟೆಗಳ ಬಾಕ್ಸ್‌ಗಳನ್ನು ಬೆಳಗ್ಗೆ 9.45 ಕ್ಕೆ ತೆರೆಯುವಾಗ ಮುಖ್ಯ ಅಧೀಕ್ಷಕರು, ಸಹಮುಖ್ಯ ಅಧಿಕ್ಷಕರು, ಜಾಗೃತದಳದ ಸಿಬ್ಬಂದಿ ಸಮ್ಮುಖದಲ್ಲಿ ಮತ್ತು ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ತೆರೆಯಬೇಕು. ಪರೀಕ್ಷೆ ಮುಕ್ತಾಯ ಅವಧಿ ಪೂರ್ಣವಾಗುವ ಮುನ್ನ ಪರೀಕ್ಷಾ ಕೊಠಡಿಯಿಂದ ಯಾವ ವಿದ್ಯಾರ್ಥಿಗಳು ಹೊರ ಹೋಗದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗಡಿಯಾರದ ವ್ಯವಸ್ಥೆ ಮಾಡಿ: ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮಾತನಾಡಿ, ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರಗಳನ್ನು ಇಡಬೇಕು. ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು. ತಹಶೀಲ್ದಾರರು ಮತ್ತು ಪ್ರಾಂಶುಪಾಲರು ಪೊಲೀಸ್‌ ಸಿಬ್ಬಂದಿಯೊಂದಿಗೆ ಸರ್ಕಾರಿ ವಾಹನದ ಮೂಲಕ ಉತ್ತರ ಪತ್ರಿಕೆಗಳನ್ನು ಪೋಸ್ಟ್‌ ಆಫೀಸ್‌ಗೆ ಜಾಗ್ರತೆಯಿಂದ ತಲುಪಿಸುವಂತೆ ನಿರ್ದೇಶಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ. ಜವರಯ್ಯ, ಎಲ್ಲಾ ತಾಲೂಕುಗಳ ತಹಸೀಲ್ದಾರರು, ಪ್ರಾಂಶುಪಾಲರುಗಳು ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಸಿಸಿ ಕ್ಯಾಮರಾಗಳ ಮಾಹಿತಿ ನೀಡಿ: ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಕಾಲೇಜಿನ ಪ್ರಾಂಶುಪಾಲರು ಮಾಹಿತಿ ನೀಡಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿರ್ಬಂಧಿತ ಪ್ರದೇಶವೆಂದು ಘೋಷಿಸಬೇಕು, ಅಕ್ಕ-ಪಕ್ಕದ ಜೆರಾಕ್ಸ್‌ ಅಂಗಡಿಗಳು, ಟ್ಯೂಷನ್‌ ಸೆಂಟರ್‌, ಹಾಗೂ ಸೈಬರ್‌ ಕೇಂದ್ರಗಳ ಮೇಲೆ ನಿಗಾವಹಿಸಬೇಕು ಜಿಲ್ಲಾ ಧಿಕಾರಿ ಗಿರೀಶ್‌ ಹೇಳಿದರು.

ಸುರಕ್ಷಿತ ಪರೀಕ್ಷಾ ವಿಧಾನ: ಪಿಯು ಪರೀಕ್ಷೆಯನ್ನು ಕರ್ನಾಟಕ ಸೆಕ್ಯೂರ್‌ ಎಕ್ಸಾಮ್‌ ಸಿಸ್ಟಮ್‌ ಅಡಿಯಲ್ಲಿ ನಡೆಸಲಾಗುತ್ತಿದೆ. ಜಿಲ್ಲಾ ಖಜಾನೆಯ ಸ್ಟ್ರಾಂಗ್‌ ರೂಂ ಹಾಗೂ ಮುಖ್ಯ ದ್ವಾರದ ಬಳಿ ಸಿ.ಸಿ. ಕ್ಯಾಮೆರಾ ಅಳವಡಿಸುವುದರ ಜೊತೆಗೆ ಪೊಲೀಸ್‌ ಭದ್ರತೆಯಲ್ಲಿರಬೇಕು ಎಂದು ಆರ್‌. ಗಿರೀಶ್‌ ಹೇಳಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.