ರವಿ ಪೂಜಾರಿ ವಿರುದ್ಧದ 47 ಪ್ರಕರಣಗಳ ಮರು ತನಿಖೆ

Team Udayavani, Feb 26, 2020, 3:08 AM IST

ravipoojari

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿಯನ್ನು ಬೆಂಗಳೂರಿಗೆ ಕರೆ ತಂದಿರುವ ಬೆನ್ನಲ್ಲೇ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಮಂಗಳವಾರ ವಿಶೇಷ ಸಭೆ ನಡೆಸಿ ಆತನ ವಿರುದ್ಧ ನಗರದಲ್ಲಿ ದಾಖಲಾಗಿರುವ ಎಲ್ಲ 47 ಪ್ರಕರಣಗಳ ಮರು ತನಿಖೆಗೆ ಸಿದ್ಧತೆ ನಡೆಸಿದ್ದಾರೆ.

ಸಿಸಿಬಿ ಮುಖ್ಯಸ್ಥ ಸಂದೀಪ್‌ ಪಾಟೀಲ್‌ ನೇತೃತ್ವದಲ್ಲಿ ಸಂಜೆ ನಡೆಸಿದ ಸಭೆಯಲ್ಲಿ ರವಿ ಪೂಜಾರಿ ವಿರುದ್ಧ ದಾಖಲಾಗಿರುವ ಎಲ್ಲ ಠಾಣೆಗಳ ಠಾಣಾಧಿಕಾರಿಗಳು ಹಾಜರಿದ್ದರು. ಈ ವೇಳೆ ಆ ಪ್ರಕರಣಗಳು ಯಾವ ಹಂತ ದಲ್ಲಿವೆ? ಯಾವೆಲ್ಲ ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ, ದೂರುದಾರರು ಯಾರು? ಸಾಕ್ಷ್ಯ ಯಾವು ದು? ಸಾಕ್ಷಿಗಳು ಯಾರು? ಯಾವ ಪ್ರಕರಣಗಳಲ್ಲಿ ಬಿ-ರಿಪೋರ್ಟ್‌ ಸಲ್ಲಿಸ ಲಾಗಿದೆ ಎಂಬ ಮಾಹಿತಿಯನ್ನು ಪಡೆದುಕೊಂಡರು.

ಪ್ರಕರಣಗಳ ಮರುತನಿಖೆ: ರವಿ ಪೂಜಾರಿ ವಿರುದ್ಧ ದಾಖಲಾಗಿರುವ ಪ್ರಕರಣಗಳು ಯಾವುದೇ ಹಂತದಲ್ಲಿ ರಲಿ, ಆರೋಪಪಟ್ಟಿ ಸಲ್ಲಿಸಿದರೂ ಇದೀಗ ಎಲ್ಲ 47 ಪ್ರಕರಣಗಳ ಮರುತನಿಖೆ ನಡೆಸಬೇಕು. ಈ ಸಂಬಂಧ ಆಯಾ ಠಾಣಾಧಿಕಾರಿಗಳು ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಹೆಚ್ಚಿನ ತನಿಖೆಗೆಗೆ ಎಲ್ಲ ಪ್ರಕರಣಗಳ ಮಾಹಿತಿಯನ್ನು ಸಿಸಿಬಿ ಅಧಿಕಾರಿಗಳಿಗೆ ನೀಡ ಬೇಕು. ಅನಂತರ ಪ್ರತಿ ಪ್ರಕರಣದ ಸಂಬಂಧ ಆರೋಪಿಯನ್ನು ಹಂತ- ಹಂತವಾಗಿ ವಿಚಾರಣೆಗೊಳಪ‌ಡಿ ಸಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಣಕಾಸು ನೆರವು: 13 ವರ್ಷಗಳ ಹಿಂದೆ ತಿಲಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆ ಸೇರಿ ಜೋಡಿ ಕೊಲೆಗೆ ಪಾತಕಿ ರವಿ ಪೂಜಾರಿಯೇ ಹಣಕಾಸು ಮತ್ತು ಶಸ್ತ್ರಾಸ್ತ್ರ ಪೂರೈಕೆ ಮಾಡಿದ್ದ ಎಂಬುದು ಗೊತ್ತಾಗಿದ್ದು, ಈ ಬಗ್ಗೆ ಆರೋಪಿಯೂ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಶಬನಮ್‌ ಡೆವಲಪರ್ಸ್‌ ಮಾಲೀಕ ಸಮೀವುಲ್ಲಾಗೆ ಇಂಟರ್‌ನೆಟ್‌ ಕರೆ ಮಾಡಿ ಪೂಜಾರಿ ಕೋಟ್ಯಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಹಣ ಕೊಡಲು ನಿರಾಕರಿಸಿದಾಗ ಹತ್ಯೆಗೆ ಸಂಚು ರೂಪಿಸಿದ್ದ. ಪಾತಕಿಯ ಕೆಲ ಸಹಚರರು ಸಮೀವುಲ್ಲಾ ಕಚೇರಿ ಮೇಲೆ ಗುಂಡಿನ ದಾಳಿ ನಡೆಸಿ ಮಹಿಳೆ ಸೇರಿ ಇಬ್ಬರನ್ನು ಬರ್ಬರವಾಗಿ ಕೊಂದು, ಬಳಿಕ ಕಚೇರಿಯ ಗಾಜಿಗೆ ರವಿ ಪೂಜಾರಿಗೆ ಸೇರಿದ ಒಂದು ಭಿತ್ತಿಪತ್ರ ಅಂಟಿಸಿ ಪರಾರಿಯಾಗಿದ್ದರು.

ಅದೃಷ್ಟವಶಾತ್‌ ಸಮೀವುಲ್ಲ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಸಿಸಿಬಿ ಪೊಲೀಸರು ಎರಡು ವರ್ಷಗಳ ಬಳಿಕ ಇಬ್ರಾಹಿಂ, ಸಂತೋಷ್‌ ರೈ, ಉದಯ್‌ ಹೆಗ್ಡೆ ಸೇರಿ ಸುಮಾರು ಆರೇಳು ಮಂದಿಯನ್ನು ಬಂಧಿಸಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.