ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಸ್ಪಷ್ಟನೆ ಕೇಳಿದ ಕೋರ್ಟ್‌

Team Udayavani, Feb 29, 2020, 11:52 AM IST

bng-tdy-2

ಬೆಂಗಳೂರು: ಗೋವಿಂದರಾಜ ನಗರದ ಕಾರ್ಪೊರೇಷನ್‌ ಕಾಲೋನಿಯ ಆಯೆಷಾ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಧ್ವನಿವರ್ಧಕ ಬಳಸಲು ಸ್ಥಳೀಯ ಠಾಣೆಯ ಪೊಲೀಸ್‌ ಇನ್ಸ್‌ ಪೆಕ್ಟರ್‌ ಪರವಾನಗಿ ನೀಡಿರುವ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌ ಈಕುರಿತು ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮಸೀದಿಯಿಂದ ಉಂಟಾಗುತ್ತಿರುವ ಶಬ್ದ ಮಾಲಿನ್ಯ ತಡೆಯಲು ಪೊಲೀಸರಿಗೆ ನಿರ್ದೇಶಿಸ ಬೇಕು ಎಂದು ಕೋರಿ ಸ್ಥಳೀಯ ನಿವಾಸಿ ಸುಮಂಗಲಾ ಎ. ಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ. ಎ.ಎಸ್‌. ಓಕಾ ಹಾಗೂ ನ್ಯಾ. ಹೇಮಂತ್‌ ಚಂದನಗೌಡರ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಧ್ವನಿವರ್ಧಕ ಬಳಸಲು ಮಸೀದಿಯ ಆಡಳಿತ ಮಂಡಳಿ ಪರವಾನಗಿ ಪಡೆದಿದೆಯೇ? ಆ ಪರವಾನಗಿ ನೀಡಿದವರು ಯಾರು ಮತ್ತು ಪರವಾನಗಿ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಫೆ.10ರ ವಿಚಾರಣೆ ವೇಳೆ ಹೈಕೋರ್ಟ್‌ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿತ್ತು. ಅದರಂತೆ, ಶುಕ್ರವಾರ ಅರ್ಜಿ ವಿಚಾರಣೆಗೆ ಬಂದಾಗ ಸರ್ಕಾರದ ಪರ ವಕೀಲರು, ಧ್ವನಿ ವರ್ಧಕ ಬಳಸಲು ಮಸೀದಿಯ ಆಡಳಿತ ಮಂಡಳಿಗೆ ವಿಜಯನಗರ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ 2015ರ ಮಾ.26ರಂದು ನೀಡಿರುವ ಅನುಮತಿ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಇದನ್ನು ಪರಿಶೀಲಿಸಿದ ನ್ಯಾಯಪೀಠ, “ಶಬ್ದ ಮಾಲಿನ್ಯ (ನಿಯಂತ್ರಣ) ಅಧಿನಿಯಮ-2000′ ರನ್ವಯ ಉಪ ಪೊಲೀಸ್‌ ಆಯುಕ್ತರಿಗಿಂತ ಮೇಲಿನ ಶ್ರೇಣಿಯ ಅಧಿಕಾರಿ ಧ್ವನಿವರ್ಧಕ ಬಳಕೆಗೆ ಪರವಾನಗಿ ನೀಡಬಹುದು. ಆದರೆ, ಪ್ರಕರಣದಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಪರವಾನಗಿ ನೀಡಿದ್ದಾರೆ. ಅದೂ ಸಹ 2015ರ ಮಾ.26ರಂದು ಪರವಾನಗಿ ನೀಡಲಾಗಿದ್ದು, ನಿಗದಿತ ಅವಧಿಗೆ ಪರವಾನಗಿ ಎಂದು ನಮೂದಿಸಿಲ್ಲ. ಇದು ಒಂದು ರೀತಿಯಲ್ಲಿ “ಶಾಶ್ವತ ಪರವಾನಗಿ’ ನೀಡಿದಂತಾಗಿದೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ನಿರ್ದೇಶನ ನೀಡಿತು.

ಅಲ್ಲದೇ, ಮಸೀದಿಯಲ್ಲಿ ಬಳಸಲಾಗುತ್ತಿರುವ ಧ್ವನಿವರ್ಧಕಗಳ ಶಬ್ದದ “ಡೆಸಿಬಲ್‌’ ಮಾಪನ ಮಾಡಿ ನ್ಯಾಯಾಲಯಕ್ಕೆ ವರದಿ ಕೊಡಲು ಒಬ್ಬ ಅಧಿಕಾರಿಯನ್ನು ನೇಮಿಸುವಂತೆ, ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿತು. ಅಂತೆಯೇ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ವರದಿ ಇದಾಗ್ಯೂ ಯಾಕೆ ಕ್ರಮ ಕೈಗೊಂಡಿಲ್ಲ ಎಂಬ ಸ್ಪಷ್ಟನೆ ನೀಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ಆಯೆಷಾ ಮಸೀದಿಯಲ್ಲಿ ನಿತ್ಯ ಐದು ಬಾರಿ ನಮಾಜ್‌ ಮಾಡಲಾಗುತ್ತಿದೆ. ಈ ವೇಳೆ ಧ್ವನಿವರ್ಧಕಗಳನ್ನು ಬಳಸಲಾಗುತ್ತಿದೆ. ಅವುಗಳ ಬಳಕೆಯಿಂದ ನಿಗದಿತ ಡೆಸಿಬಲ್‌ಗಿಂತ ಹೆಚ್ಚಿನ ಪ್ರಮಾಣದಲ್ಲಿ ಶಬ್ದ ಮಾಲಿನ್ಯ ಉಂಟಾಗುತ್ತಿದೆ. ಪ್ರಾರ್ಥನೆ ಮಾಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ, ಪ್ರಾರ್ಥನೆ ವೇಳೆ ಶಬ್ದ ಮಾಲಿನ್ಯ ಆಗುತ್ತಿರುವುದನ್ನು ಆಕ್ಷೇಪಿಸುತ್ತಿದ್ದೇವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಪೊಲೀಸರಿಗೆ ಮನವಿ ಮಾಡಲಾಗಿತ್ತು. ಪೊಲೀಸರು, ಮನವಿಯನ್ನು ಪರಿಶೀಲಿಸಿ ಸರ್ಕಾರವೇ ಅನುಮತಿ ನೀಡಿದೆ ಎಂದು ಹೇಳಿದ್ದರು. ಹೀಗಾಗಿ ಅರ್ಜಿದಾರರು ಕೋರ್ಟ್‌ ಮೆಟ್ಟಿಲೇರಿದ್ದರು.

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.